Karnataka Byelection: ಹಾನಗಲ್, ಸಿಂದಗಿ ಬೈ ಎಲೆಕ್ಷನ್ ಡೇಟ್ ಅನೌನ್ಸ್, ಅ. 30ಕ್ಕೆ ಮತದಾನ ನ. 2ಕ್ಕೆ ರಿಸಲ್ಟ್!

Hanagal-Sindagi By ELection: ಅಕ್ಟೋಬರ್ 30ರಂದು ಈ ಎರಡು ಕ್ಷೇತ್ರಗಳಿಗೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನದಿಂದಾಗಿ ಹಾವೇರಿಯ ಹಾನಗಲ್ ಕ್ಷೇತ್ರ ತೆರವಾಗಿತ್ತು.ಇತ್ತ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ನಿಧನದಿಂದಾಗಿ ವಿಜಯನಗರದ ಸಿಂದಗಿ ವಿಧಾನಸಭಾ ಕ್ಷೇತ್ರ ತೆರವಾಗಿತ್ತು.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
    Bypolls in Karnataka 2021: ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಹಾನಗಲ್ (Hanagal) ಹಾಗೂ ಸಿಂದಗಿ ಕ್ಷೇತ್ರಗಳ (Sindagi) ಉಪ ಚುನಾವಣೆಯ ದಿನಾಂಕವನ್ನ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30ರಂದು ಈ ಎರಡು ಕ್ಷೇತ್ರಗಳಿಗೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನದಿಂದಾಗಿ ಹಾವೇರಿಯ ಹಾನಗಲ್ ಕ್ಷೇತ್ರ ತೆರವಾಗಿತ್ತು. ಇತ್ತ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ (M C Managooli) ನಿಧನದಿಂದಾಗಿ ವಿಜಯನಗರದ ಸಿಂದಗಿ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಈ ಹಿಂದೆ ಉಪ ಚುನಾವಣೆಯ (Byelection) ದಿನಾಂಕ ಘೋಷಣೆಯಾದಿದ್ದರೂ ಮೂರು ಪಕ್ಷಗಳು ಉಪ ಸಮರಕ್ಕೆ ಮುಂಚಿನಿಂದಲೂ ಕಸರತ್ತು ನಡೆಸಿಕೊಂಡು ಬಂದಿದೆ. ಇದೀಗ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಚಟುವಟಿಕೆಗಳು (Political Developments) ಮತ್ತಷ್ಟು ಕಾವೇರಲಿದೆ.

    ಸಿಎಂ ಬೊಮ್ಮಾಯಿಗೆ ಪ್ರತಿಷ್ಠೆಯ ವಿಚಾರ

    ಸಿಎಂ ಆದ ಬಳಿಕ ಬಸವರಾಜ ಬೊಮ್ಮಾಯಿ ಅವರಿಗೆ ಈ ಉಪಚುನಾವಣೆ ಪ್ರತಿಷ್ಠೆಯ ರಣಕಣವಾಗಲಿದೆ. ಹಾನಗಲ್ ಕ್ಷೇತ್ರದ ಶಾಸಕರಾಗಿದ್ದ ಸಿ.ಎಂ. ಉದಾಸಿ ರವರು ಇತ್ತೀಚಿಗೆ ಕೊನೆಯುಸಿರೆಳೆದಿದ್ದರು. ಬೊಮ್ಮಾಯಿ ಅವರ ತವರು ಜಿಲ್ಲೆಯ ಉಪಚುನಾವಣೆ ಆದ ಕಾರಣ ಇದು ಬಿಜೆಪಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಹಾನಗಲ್ ನಲ್ಲಿ ಮತ್ತೆ ಕಮಲ ಅರಳಿಸಲು ಸಿಎಂ ಈಗಾಗಲೇ ರಣತಂತ್ರ ಹೆಣೆದಿದ್ದಾರೆ. ದಿವಂಗತ ಉದಾಸಿ ಅವರ ಕುಟುಂಬಕ್ಕೆ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆದಿದೆ. ಸಂಸದ ಶಿವಕುಮಾರ್ ಉದಾಸಿ ಪತ್ನಿಗೆ ಟಿಕೆಟ್ ಕೊಡೋ ಬಗ್ಗೆ ಚರ್ಚೆಯಾಗುತ್ತಿದೆ. ಉದಾಸಿ ಅವರು ಹಾನಗಲ್‌ ಕ್ಷೇತ್ರದಲ್ಲಿ 9 ಬಾರಿ ಸ್ಪರ್ಧಿಸಿ, 6 ಬಾರಿ ಗೆಲುವು ಕಂಡಿದ್ದರು. ಹೀಗಾಗಿ ಸದ್ಯಕ್ಕೆ ‘ಬಿಜೆಪಿಯ ಭದ್ರಕೋಟೆ’ ಎನಿಸಿರುವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬುದು ಕಮಲ ಕಲಿಗಳ ನಿಲುವಾಗಿದೆ.

    ಹಾನಗಲ್​ನಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು

    ಕಾಂಗ್ರೆಸ್ ಪಕ್ಷದಿಂದ ಶ್ರೀನಿವಾಸ ಮಾನೆಗೆ ಟಿಕೆಟ್ ಸಿಗುವುದು ಬಹುತೇಕ ಫಿಕ್ಸ್ ಆಗಿದೆ. ಎರಡು ಪಕ್ಷಗಳಿಗಿಂತ ಈಗಾಗಲೇ ಜೆಡಿಎಸ್ ಒಂದು ಹೆಜ್ಜೆ ಮುಂದೆ ಹೋಗಿ ತಮ್ಮ ಪಕ್ಷದ ಹಾನಗಲ್ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ. ನಿಯಾಜ್‌ ಶೇಖ್‌ ಎಂಬುವರನ್ನು ಅಭ್ಯರ್ಥಿಯನ್ನಾಗಿ ಈಗಾಗಲೇ ಘೋಷಣೆ ಮಾಡಿದೆ. ಇಂದು ಕೂಡ ಎಚ್ ಡಿ ಕುಮಾರಸ್ವಾಮಿಯವರು ಮತ್ತೊಮ್ಮೆ ತಮ್ಮ ಅಭ್ಯರ್ಥಿ ಹೆಸರನ್ನು ಪುನರುಚ್ಚರಿಸಿದ್ದಾರೆ. ನಿಯಾಜ್‌ ಶೇಖ್‌ ಈ ಹಿಂದೆ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದವರು. ಹೀಗಾಗಿ ಹಾನಗಲ್ ನ ಜೆಡಿಎಸ್ ಕಾರ್ಯಕರ್ತರಲ್ಲಿ ಕೊಂಚ ಗೊಂದಲದ ವಾತಾವರಣ ಮೂಡಿದೆ.

    ಸಿಂದಗಿ ವಶಕ್ಕೆ 3 ಪಕ್ಷಗಳ 'ಮಹಾ'ಕಸರತ್ತು!

    ಇನ್ನು ವಿಜಯಪುರ ಜಿಲ್ಲೆಯ ಸಿಂದಗಿ ಬೈಎಲೆಕ್ಷನ್ ಚುನಾವಣೆಗೆ ಕಾಂಗ್ರೆಸ್ ಮಾತ್ರ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು. ಶಾಸಕ ಎಂ. ಸಿ. ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಅವರನ್ನ 'ಕೈ' ಅಭ್ಯರ್ಥಿಯಾಗಿ ಈ ಹಿಂದೆಯೇ ಘೋಷಣೆ ಮಾಡಲಾಗಿತ್ತು. ಸಿಂದಗಿ ಜೆಡಿಎಸ್ ಶಾಸಕರಾಗಿದ್ದ ಎಂಸಿ ಮನಗೂಳಿ ನಿಧನದ ಬಳಿಕ, ಅವರ ಪುತ್ರ ಅಶೋಕ್ ಮನಗೂಳಿ ಅವರಿಗೆ ಜೆಡಿಎಸ್ ಟಿಕೆಟ್ ಫಿಕ್ಸ್ ಎಂದು ಹೇಳಲಾಗಿತ್ತು. ಆದರೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಇದರಿಂದ ಬೇಸರಗೊಂಡ ಅಶೋಕ ಮನಗೂಳಿ ಮಾರ್ಚ್ 9ರಂದು ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದರು.

    ಇದಾದ ಬಳಿಕ ಸಿಂದಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇವರನ್ನೇ ಘೋಷಣೆ ಮಾಡಲಾಗಿತ್ತು. ಇನ್ನೂ ಬಿಜೆಪಿ ಇಲ್ಲಿನ ತನ್ನ ಅಭ್ಯರ್ಥಿಯ ಬಗ್ಗೆ ಯಾವುದೇ ಸುಳಿವು ನೀಡಿಲ್ಲ. ಇತ್ತ ಅಶೋಕ ಮನಗೂಳಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವುದು 'ದಳಪತಿ'ಗಳ ಕಣ್ಣು ಕೆಂಪು ಮಾಡಿದಂತಾಗಿದೆ. ಹೀಗಾಗಿ ಯಾವ ಕಾರ್ಯತಂತ್ರಕ್ಕೆ ಜೆಡಿಎಸ್ ಮೊರೆ ಹೋಗುತ್ತೆ ಅಂತ ಕಾದುನೋಡಬೇಕಿದೆ. ಒಟ್ಟಿನಲ್ಲಿ 2 ಕ್ಷೇತ್ರಗಳನ್ನು ತಮ್ಮ ಕೈವಶ ಮಾಡಿಕೊಳ್ಳಲು, 3 ಪಕ್ಷಗಳು ಕಾರ್ಯತಂತ್ರವನ್ನು ರೂಪಿಸಿಕೊಂಡು ಬಂದಿದ್ದಾರೆ. ಈಗ ಉಪಚುನಾವಣೆ ದಿನಾಂಕ ಘೋಷಣೆ ಯಾಗಿರುವುದು ರಾಜ್ಯದಲ್ಲಿ ಮತ್ತಷ್ಟು ರಾಜಕೀಯ ಚಟುವಟಿಕೆಗಳನ್ನು ಹೆಚ್ಚಿಸಿದೆ.

    (ವರದಿ: ವಾಸುದೇವ್ ಎಂ)
    Published by:Soumya KN
    First published: