ಹಾಸನದಲ್ಲಿ ಸೆಂಚುರಿ ದಾಟಿದ ಕೊರೋನಾ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ದ ಕೇಸ್ ದಾಖಲು

ಸಾಮಾಜಿಕ ಜಾಲತಾಣದಲ್ಲಿ ಕೊರೋನಾ ವೈರಸ್​​ಗೆ ಸಂಬಂಧಿಸಿದಂತೆ ವ್ಯಕ್ತಿಗಳ ಹೆಸರು ಹಾಕಿ ಸುಳ್ಳು ಸುದ್ದಿ ಹಬ್ಭಿಸುತ್ತಿರುವವರ ವಿರುದ್ಧ ಹಾಸನದಲ್ಲಿ ಕೇಸ್ ದಾಖಲಿಸಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಹಾಸನ(ಮೇ.28): ಇಂದು 13 ಹೊಸ ಕೊರೋನಾ ಪ್ರಕರಣಗಳು ಕಂಡು ಬಂದಿದ್ದು, ಸೋಂಕಿತರ ಸಂಖ್ಯೆ 112 ಕ್ಕೆ ಏರಿಕೆಯಾಗಿದೆ. ಈ ಮೂಲಕ ಹಾಸನದಲ್ಲಿ ಸೋಂಕಿತರ ಸಂಖ್ಯೆ ಸೆಂಚುರಿ ಗಡಿ ದಾಟಿದೆ. ಈ ನಡುವೆ ಕೊರೋನಾ ಸೋಂಕಿತರಲ್ಲಿ ಕೆಲವರಿಗೆ ಕೊಡುವ ಮಾಹಿತಿ ಬಗ್ಗೆ ಡಿಸಿ ಆರ್.ಗಿರೀಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಸೋಂಕಿತರಲ್ಲಿ ಕೆಲವರು ತಮ್ಮ ಪ್ರಾಥಮಿಕ ಸಂಪರ್ಕದ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಅವರನ್ನು ಹಲವು ಬಾರಿ ವಿಚಾರಿಸಿದ ನಂತರ ಒಂದೊಂದಾಗಿ ಮಾಹಿತಿ ನೀಡುತ್ತಾರೆ. ತಾವು ಮಾಹಿತಿ ನೀಡಿದ್ರೆ ಎಲ್ಲಿ ಅವರನ್ನೆಲ್ಲ ಕ್ವಾರಂಟೈನ್‌ ಮಾಡುತ್ತಾರೆ ಎಂಬ ಯೋಚನೆ ಅವರದು. ಆದರೆ, ನಾವು ಕೋವಿಡ್ ಸೆಂಟರ್‌ನಲ್ಲಿ ಎಲ್ಲರಿಗೂ ಉತ್ತಮ ಆಹಾರ ನೀಡುತ್ತಿದ್ದು, ಸೂಕ್ತ ವ್ಯವಸ್ಥೆ ಮಾಡಿದ್ದೇವೆ. ಹೀಗಾಗಿ ಏನನ್ನೂ ಮುಚ್ಚಿಡದೆ ಸರಿಯಾದ ಮಾಹಿತಿ ನೀಡಬೇಕೆಂದು ಡಿಸಿ ಮನವಿ ಮಾಡಿದರು.

ಸಾಮಾಜಿಕ ಜಾಲತಾಣದಲ್ಲಿ ಕೊರೋನಾ ವೈರಸ್​​ಗೆ ಸಂಬಂಧಿಸಿದಂತೆ ವ್ಯಕ್ತಿಗಳ ಹೆಸರು ಹಾಕಿ ಸುಳ್ಳು ಸುದ್ದಿ ಹಬ್ಭಿಸುತ್ತಿರುವವರ ವಿರುದ್ಧ ಹಾಸನದಲ್ಲಿ ಕೇಸ್ ದಾಖಲಿಸಲಾಗಿದೆ. ಸುಳ್ಳು ಸುದ್ದಿ ಹರಡಿಸುವವರಿಗೆ ಎಚ್ಚರಿಕೆ ನೀಡಿರುವ ಹಾಸನ ಎಸ್‌ಪಿ ಶ್ರೀನಿವಾಸ್ ಗೌಡ ಈಗಾಗಲೇ ಈ ಸಂಬಂಧ ಒಂದು ದೂರು ದಾಖಲಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಕೊರೋನಾ ಭೀತಿಗೆ ಈಗಲೂ ಪ್ರಯಾಣಕ್ಕೆ ಹಿಂದೇಟು ; ಪ್ರಯಾಣಿಕರಿಲ್ಲದೆ ಬಿಎಂಟಿಸಿ ಬಸ್ ಗಳು ಖಾಲಿ ಖಾಲಿ

ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರಿಗೆ ಕೊರೋನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಿದ ಎಸ್‌ಪಿ, ಪೆ. 1993 ಆಗಿರುವ ಪೊಲೀಸ್ ಕಾನ್ಸ್‌ಟೇಬಲ್ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಹೈರಿಸ್ಕ್ ಎಂದು ಗುರುತಿಸಲಾದ 21 ಜನರಿಗೆ ಈಗಾಗಲೇ ಕೊರೋನಾ ಪರೀಕ್ಷೆ ಮಾಡಲಾಗಿತ್ತು ಅದರಲ್ಲಿ 17 ಜನರ ವರದಿ ನೆಗೆಟಿವ್ ಬಂದಿದೆ. ಉಳಿದವರ ವರದಿಯ ನಿರೀಕ್ಷೆಯಲ್ಲಿದ್ದೇವೆ ಎಂದರು.

ಪೊಲೀಸ್ ಕಾನ್ಸ್‌ಟೇಬಲ್ ಕೆಲಸ ಮಾಡಿದ ಜಾಗ, ಅವರ ಜೊತೆ ಸಂಪರ್ಕದಲ್ಲಿದ್ದ ಎಲ್ಲರನ್ನೂ ಗುರುತಿಸಿ ಕ್ವಾರಂಟೈನ್‌ ಮಾಡಲಾಗಿದ್ದು ಎಚ್ಚರಿಕೆ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
First published: