HOME » NEWS » District » CENTRAL PARLIAMENTARY DELEGATION TO VISIT KARAWARA KADAMBA NAVAL BASE DKK MAK

ಕಾರವಾರ ಕದಂಬ ನೌಕಾ ನೆಲೆಗೆ ಭೇಟಿ ನೀಡಲಿದೆ ಕೇಂದ್ರ ಸಂಸದರ ತಂಡ; ಕರಾವಳಿಯಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್!

ಬುಧವಾರ ಮಧ್ಯಾಹ್ನದ ವೇಳೆಗೆ ಸಂಸದರ ತಂಡ ಕದಂಬ ನೌಕಾನೆಲೆಗೆ ಆಗಮಿಸಿ ನೌಕಾನೆಲೆಯ ವೀಕ್ಷಣೆ ನಂತರ ಸಂಜೆ ವೇಳೆಗೆ ವಾಪಸ್ ಗೋವಾ ಮಾರ್ಗದ ಮೂಲಕ ತೆರಳಲಿದ್ದಾರೆ ಎನ್ನಲಾಗಿದ್ದು, ಸಂಸದರು ಬರುವ ಮಾರ್ಗದಲ್ಲಿ ಝೀರೋ ಟ್ರಾಫಿಕ್ ಮಾಡಿ ಕರೆದುಕೊಂಡು ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

news18-kannada
Updated:January 19, 2021, 9:57 AM IST
ಕಾರವಾರ ಕದಂಬ ನೌಕಾ ನೆಲೆಗೆ ಭೇಟಿ ನೀಡಲಿದೆ ಕೇಂದ್ರ ಸಂಸದರ ತಂಡ; ಕರಾವಳಿಯಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್!
ಕಾರವಾರದ ಕದಂಬ ನೌಕಾ ನೆಲೆ.
  • Share this:
ಕಾರವಾರ: ಅತಿದೊಡ್ಡ ನೌಕಾನೆಲೆಯಾಗಿರುವ ಕಾರವಾರದ ಅರ್ಗಾದಲ್ಲಿ ಇರುವ ಕದಂಬ ನೌಕಾನೆಲೆಗೆ ದೇಶದ ವಿವಿಧೆಡೆಯ ಸಂಸದರನ್ನೊಳಗೊಂಡ ತಂಡ ಜ.20 ರಂದು (ಬುಧವಾರ) ಭೇಟಿ ನೀಡಲಿದೆ. ಸಂಸತ್ತಿನ ರಕ್ಷಣಾ ಇಲಾಖೆಯ ಸ್ಥಾಯಿ ಸಮಿತಿಯ ಸದಸ್ಯರಾಗಿರುವ ಸಂಸದರುಗಳು, ನೌಕಾನೆಲೆಯಲ್ಲಿ ಪ್ರಗತಿಯಲ್ಲಿರುವ 2ನೇ ಹಂತದ ಕಾಮಗಾರಿಯ ಪರಿಶೀಲನೆಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಬುಧವಾರ ಬೆಳಿಗ್ಗೆ ವಿಮಾನದ ಮೂಲಕ ಗೋವಾ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಈ ತಂಡ ನೌಕಾನೆಲೆಗೆ ಭೇಟಿ ನೀಡಲಿದೆ. ಸಂಸತ್ತಿನ ರಕ್ಷಣಾ ಇಲಾಖೆಯ ಸ್ಥಾಯಿ ಸಮಿತಿಯಲ್ಲಿ ಒಟ್ಟು 21 ಲೋಕಸಭಾ ಸದಸ್ಯರು ಹಾಗೂ 10 ರಾಜ್ಯಸಭಾ ಸದಸ್ಯರಿದ್ದು, ಇದರಲ್ಲಿ ಸದ್ಯದ ಮಾಹಿತಿಯ ಪ್ರಕಾರ ಸಮಿತಿಯ 12 ಸಂಸದರು ಆಗಮಿಸುವುದು ಖಚಿತವಾಗಿದೆ.

ಈ ತಂಡದಲ್ಲಿ ಎಐಸಿಸಿ ಮುಖಂಡರೂ ಆಗಿರುವ ರಾಹುಲ್ ಗಾಂಧಿ, ಎನ್‌ಸಿಪಿ ಮುಖಂಡರೂ ಆಗಿರುವ ಶರದ್ ಪವಾರ್, ಜುಯೆಲ್ ಓರಮ್, ಅಜಯ್ ಭಟ್, ಪ್ರೊ.ಡಾ.ರಾಮಶಂಕರ್ ಕಠೇರಿಯಾ, ಜುಗಲ್ ಕಿಶೋರ್ ಶರ್ಮ, ಡಾ.ಶ್ರೀಕಾಂತ್ ಏಕನಾಥ್ ಶಿಂಧೆ, ಪ್ರತಾಪ್ ಸಿಂಹ, ಪ್ರೇಮಚಂದ್ರ ಗುಪ್ತ, ಸಂಜಯ್ ರಾವತ್, ಕಾಮಖ್ಯ ಪ್ರಸಾದ್, ಸುಧಾನ್ಶು ತ್ರಿವೇದಿ ಆಗಮಿಸಲಿದ್ದಾರೆ.

ರಾಹುಲ್ ಗಾಂಧಿ ಹಾಗೂ ಶರದ್ ಪವಾರ್‌ಗೆ ಝಡ್ ಫ್ಲಸ್ ಸೆಕ್ಯುರಿಟಿ ಇದ್ದು, ಸಮಿತಿಯ ಆರು ಸಂಸದರಿಗೆ ವೈ ಫ್ಲಸ್ ಸೆಕ್ಯುರಿಟಿ ನೀಡಲಾಗಿದೆ. ಇನ್ನು ಮೂವರು ಸಂಸದರಿಗೆ ವೈ ಸೆಕ್ಯುರಿಟಿ ಇರುವ ಹಿನ್ನಲೆಯಲ್ಲಿ ಗೋವಾ ಗಡಿ ಮಾಜಾಳಿಯಿಂದ ಕಾರವಾರದ ಅರ್ಗಾ ಗ್ರಾಮದವರೆಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲು ಸಿದ್ಧತೆ ನಡೆದಿದೆ.

ಬುಧವಾರ ಮಧ್ಯಾಹ್ನದ ವೇಳೆಗೆ ಸಂಸದರ ತಂಡ ಕದಂಬ ನೌಕಾನೆಲೆಗೆ ಆಗಮಿಸಿ ನೌಕಾನೆಲೆಯ ವೀಕ್ಷಣೆ ನಂತರ ಸಂಜೆ ವೇಳೆಗೆ ವಾಪಸ್ ಗೋವಾ ಮಾರ್ಗದ ಮೂಲಕ ತೆರಳಲಿದ್ದಾರೆ ಎನ್ನಲಾಗಿದ್ದು, ಸಂಸದರು ಬರುವ ಮಾರ್ಗದಲ್ಲಿ ಝೀರೋ ಟ್ರಾಫಿಕ್ ಮಾಡಿ ಕರೆದುಕೊಂಡು ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: Indo-China Conflict: ಅರುಣಾಚಲ ಪ್ರದೇಶದ ಗಡಿಯಲ್ಲಿ ಪುಟ್ಟ ಗ್ರಾಮವನ್ನೇ ನಿರ್ಮಿಸಿದ ಚೀನಾ!

ಕದಂಬ ನೌಕಾನೆಲೆಯಲ್ಲಿ ಸೀಬರ್ಡ್ ಯೋಜನೆಯ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ನೌಕಾನೆಲೆಯಲ್ಲಿ ಆಗುತ್ತಿರುವ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಹಾಗೂ ನೂತನ ಇತರೆ ಕಾಮಗಾರಿಗಳ ಬಗ್ಗೆ ಸಂಸದರು ಭೇಟಿ ಸಂದರ್ಭದಲ್ಲಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ. ಇನ್ನು ಸಂಸದರ ತಂಡ ನೌಕಾನೆಲೆಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ನೌಕಾನೆಲೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಕಲ ಸಿದ್ಧತೆಯನ್ನ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಹೇಗಿದೆ ಬಂದೋಬಸ್ತ್?

ಈಗಾಗಲೆ ಉತ್ತರ ಕನ್ನಡ ಜಿಲ್ಲಾ ಪೋಲಿಸ್ ಇಲಾಖೆ ಹಿರಿಯ ಅಧಿಕಾರಿಗಳ ನೇತ್ರತ್ವದಲ್ಲಿ ಸಭೆ ನಡೆಸಿ ಬರುವ ಎಲ್ಲ ಸಂಸದರಿಗೆ ಹೆಚ್ಚಿನ ಭದ್ರತೆ ನೀಡಲು ಪೋಲಿಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪ್ರತಿ ಪಾಯಿಂಟ್ ನಲ್ಲಿ ಓರ್ವ ಪೋಲಿಸ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
Published by: MAshok Kumar
First published: January 19, 2021, 9:54 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories