NEP-2020| ರಾಜ್ಯ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಸಿಎಫ್ಐ ವಿರೋಧ

ಬಡ- ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಇದರಿಂದ ಶಿಕ್ಷಣ ಪಡೆಯೋದು ಕಷ್ಟವಾಗುತ್ತೆ. ಹೊಸ ಶಿಕ್ಷಣ ನೀತಿ ಮೌಢ್ಯತೆಯನ್ನು ತರುತ್ತದೆ. ಮತ್ತು ಶಿಕ್ಷಣವನ್ನು ಕೇಸರಿಕರಣಗೊಳಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದ್ದಾರೆ.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

  • Share this:
ಮಂಗಳೂರು (ಆಗಸ್ಟ್​ 30); ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಇದರ ಪೂರ್ವಭಾವಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯ ದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಉದ್ಘಾಟನಾ ಸಮಾರಂಭ ಜರುಗಿದೆ‌‌..ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ..ಆದ್ರೆ ಈ ನೀತಿ ಅನುಷ್ಠಾನಕ್ಕೆ ಮಂಗಳೂರಿನಲ್ಲೇ ವಿರೋಧ ವ್ಯಕ್ತವಾಗಿದೆ..ಮಂಗಳೂರಿನಲ್ಲಿ  ಉನ್ನತ ಶಿಕ್ಷಣ ಸಚಿವರು ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳದಲ್ಲೇ ಸಿ.ಎಫ್.ಐ ಕಾರ್ಯಕರ್ತರು ಎನ್ಇಪಿ ಖಂಡಿಸಿ ಪ್ರತಿಭಟನೆ ಮಾಡಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲೇ ಪ್ರಥಮವಾಗಿ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತಿದೆ. ಆದರೆ ಈ ಎನ್.ಇ.ಪಿ-2020 ಜಾರಿಗೆ ವಿರೋಧ ವ್ಯಕ್ತವಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಮಂಗಳೂರಿನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರು ಹೊರವಲಯದ ಕೊಣಾಜೆಯಲ್ಲಿರುವ ಮಂಗಳೂರು ವಿಶ್ವ ವಿದ್ಯಾನಿಲಯದ ಆವರಣ ದಲ್ಲಿ ಸಿಎಫ್ ಐ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.. ಮಂಗಳೂರು ವಿಶ್ವವಿದ್ಯಾನಿ ಲಯದಲ್ಲು ರಾಷ್ಟ್ರೀಯ ಶಿಕ್ಷಣ ನೀತಿ 2020ರ ಉದ್ಟಾಟನಾ ಸಮಾರಂಭ ಆಯೋಜಿಸ ಲಾಗಿತ್ತು. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ಥತ್ ನಾರಾಯಣ್ ಭಾಗವಹಿಸಿದ್ದರು.

ಒಳಗಡೆ ಕಾರ್ಯಕ್ರಮ‌ ನಡೆಯುತ್ತಿದ್ರೆ ಹೊರಗಡೆ ಐವತ್ತಕ್ಕೂ ಹೆಚ್ಚು ಸಿ.ಎಫ್.ಐ ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ..ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದಂತೆಯೇ ತಕ್ಷಣ ಪೊಲೀಸರು ಪ್ರತಿಭಟನಾಕಾರರನ್ನು ವಶಪಡಿಸಿಕೊಂಡಿ ದ್ದಾರೆ. ಯಾವುದೇ ಚರ್ಚೆಯನ್ನು ನಡೆಸದೇ, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಸಾಧಕ ಭಾದಕ ತಿಳಿಸದೇ ಜಾರಿಗೊಳಿಸಲಾಗುತ್ತಿದೆ ಎಂಬುದು ವಿರೋಧ ಮಾಡುತ್ತಿರುವವರ ಆರೋಪವಾಗಿದೆ.. ಜೊತೆಗೆ ಗ್ರಾಮೀಣ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತದೆ.

ಬಡ- ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಇದರಿಂದ ಶಿಕ್ಷಣ ಪಡೆಯೋದು ಕಷ್ಟವಾಗುತ್ತೆ. ಹೊಸ ಶಿಕ್ಷಣ ನೀತಿ ಮೌಢ್ಯತೆಯನ್ನು ತರುತ್ತದೆ. ಮತ್ತು ಶಿಕ್ಷಣವನ್ನು ಕೇಸರಿಕರಣಗೊಳಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದ್ದಾರೆ.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಆತುರದಲ್ಲಿ ಈ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗಿಲ್ಲ. ಶಿಕ್ಷಣ ಕ್ಷೇತ್ರದ ಮೂಲ ತತ್ವಗಳಲ್ಲಿ ಸುಧಾರಣೆ ಮಾಡಲಾಗುತ್ತಿದೆ. ಕಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಯ್ಕೆಗಳನ್ನು ನೀಡಲಾಗಿದೆ. ಯಾವುದೇ ವಿದ್ಯಾರ್ಥಿಗಳ ವಿರುದ್ಧವಾಗಿರುವಂತಹದ್ದು ಏನೂ ಇಲ್ಲ ಎಂದು ಹೇಳಿದ್ದಾರೆ... ಅಂತಹುದು ಏನಾದರು ವಿರುದ್ದವಾದ ಅಂಶಗಳಿದ್ರೆ ತೋರಿಸಿ ಎಂದು ವಿರೋಧಿಸುವವರಿಗೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: Jacqueline Fernandez| ಮನಿ ಲಾಂಡರಿಂಗ್ ಪ್ರಕರಣ; ನಟಿ ಜಾಕ್ವೆಲಿನ್ ಫರ್ನಾಂಡೀಸ್​ರನ್ನು ಸಾಕ್ಷಿಯಾಗಿ ವಿಚಾರಣೆ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆತುರದಲ್ಲಿ ಮಾಡಲು ಹೊರಟಿದ್ದಾರೆ ಅಂತ ಕೆಲವರು ಹೇಳ್ತಿದಾರೆ..ಆದ್ರೆ ಈ ಮಾತು ಸರಿಯಲ್ಲ, ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಈ ನೀತಿ ಕೇಸರೀಕರಣ ಅನ್ನೋದು ಸುಮ್ನನೆ, ಈ ವಾದದಲ್ಲಿ ಹುರುಳಿಲ್ಲ. ಇದರಲ್ಲಿ ವಿದ್ಯಾರ್ಥಿಗಳಿಗೆ ವಿರುದ್ಧವಾದ ಅಂಶಗಳಿದ್ರೆ ತೋರಿಸಿ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ಈಗಿನ ವಿಷಯಗಳನ್ನೇ ಬಳಸುತ್ತೇವೆ.

ಆದ್ರೆ ವಿದ್ಯಾರ್ಥಿಗಳ ಆಯ್ಕೆಗೆ ಪ್ರತ್ಯೇಕವಾದ ಅವಕಾಶವಿದೆ..ಎನ್ಇಪಿ ಯನ್ನು ಅನುಷ್ಠಾನ ಮಾಡಲು ಯೋಜನೆ ರೂಪಿಸಲಾಗಿದೆ, ಆತುರದಲ್ಲಿ ಶಿಕ್ಷಣ ನೀತಿ ಅನುಷ್ಠಾನಗೊ ಳಿಸಲಾಗಿಲ್ಲ. ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಕ್ರಮ‌ಕೈಗೊಳ್ಳಲಾಗುತ್ತಿದೆ. ಶಿಕ್ಷಣ ಕ್ಷೇತ್ರದ ಮೂಲತತ್ವಗಳಲ್ಲಿ ಸುಧಾರಣೆ ಮಾಡಲಾಗುತ್ತಿದೆ. ಕಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಯ್ಕೆಗಳನ್ನು ನೀಡಲಾಗಿದೆ. ಅಂತರ್ ಶಿಸ್ತು ಪಾಲನೆಗೆ ಆದ್ಯತೆ ನೀಡಲಾಗುತ್ತದೆ.

ಇದನ್ನೂ ಓದಿ: CC Patil| ಸರ್ವಋತು ರಸ್ತೆ ನಿರ್ಮಾಣಕ್ಕೆ ಯತ್ನ, ಹೆಚ್ಚಿನ ಅನುದಾನಕ್ಕಾಗಿ ಅಧಿಕಾರಿಗಳೊಂದಿಗೆ ಚರ್ಚೆ; ಸಚಿವ ಸಿ.ಸಿ. ಪಾಟೀಲ್

ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಇಲ್ಲಾಂದ್ರೆ ನಿಂತ ನೀರಾಗುತ್ತದೆ..ನಮ್ಮ ವಿದ್ಯಾರ್ಥಿಗಳು ವಿಶ್ವಮಟ್ಟದಲ್ಲಿ ಸ್ಪರ್ಧೆ ಮಾಡಬೇಕಿದೆ. ನರ್ಸರಿ ಯಿಂದ ಉನ್ನತ ಶಿಕ್ಷಣದವರೆಗೆ ಎನ್ಇಪಿಯಲ್ಲಿ ಸುಧಾರಣೆಯಾಗಲಿದೆ. ಈ ಸುಧಾರಣೆ ವಿಶ್ವ ವ್ಯಾಪ್ತಿಯಲ್ಲಿ ಸಾಬೀತಾಗಿರು ವಂತಹದ್ದು. ಯಾವುದೇ ವಿದ್ಯಾರ್ಥಿಗಳ ವಿರುದ್ಧವಾಗಿರುವಂತಹದ್ದು ಏನೂ ಇಲ್ಲ..ಮುಂದಿನ ವರ್ಷಗಳಲ್ಲಿ ಆಡಳಿತಾತ್ಮಕ ಸುಧಾರಣೆ ಕ್ರಮಗಳಾಗಲಿವೆ. ಕೋವಿಡ್ ಹಿನ್ನೆಲೆಯಲಿ ಸ್ವಲ್ಪ ಅಡಚಣೆಗಳಾಗಿವೆ ಎಂದು ಸಮರ್ಥನೆ ಮಾಡಿದ್ದಾರೆ.

ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದಲ್ಲಿ ಭಾರೀ ಭದ್ರತೆಯ  ನಡುವೆಯು ಸಿ.ಎಫ್.ಐ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ಮಾಡಿರೋದು ಭಧ್ರತಾ ವೈಫಲ್ಯ ಎಂಬ ದೂರುಗಳೂ ಕೇಳಿಬಂದಿದೆ.
Published by:MAshok Kumar
First published: