ಚಾಮರಾಜನಗರದಲ್ಲಿ ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವಲ್ಲಿ ನಿರ್ಲಕ್ಷ್ಯ: 22 ಪಿಡಿಒಗಳಿಗೆ ಷೋಕಾಸ್ ನೋಟಿಸ್ ಜಾರಿ

ನೋಟಿಸ್ ತಲುಪಿದ 24 ಗಂಟೆಯೊಳಗೆ ವಿವರಣೆ ಸಲ್ಲಿಸಬೇಕು. ತಪ್ಪಿದಲ್ಲಿ ಸಮಜಾಯಿಷಿ ಏನು ಇರುವುದಿಲ್ಲವೆಂದು ಪರಿಗಣಿಸಿ ಶಿಸ್ತಿನ ಕ್ರಮ ಕೈಗೊಳ್ಳಲು ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಷೋಕಾಸ್ ನೋಟಿಸ್ ನಲ್ಲಿ ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲಾಡಳಿತ ಭವನ

ಚಾಮರಾಜನಗರ ಜಿಲ್ಲಾಡಳಿತ ಭವನ

  • Share this:
ಚಾಮರಾಜನಗರ (ಏ. 28) ಕೋವಿಡ್ ಸಂಬಂಧಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿದ 22 ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ (ಪಿ.ಡಿ.ಒ) ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಷೋಕಾಸ್  ನೋಟಿಸ್ ಜಾರಿ ಮಾಡಿದ್ದಾರೆ.  ಕೋವಿಡ್-19 ಸೋಂಕಿತ ವ್ಯಕ್ತಿಗಳ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತ ವ್ಯಕ್ತಿಗಳನ್ನು ನಿಗದಿತ ಅವಧಿಯಲ್ಲಿ ಪತ್ತೆ ಹಚ್ಚುವ ಕಾರ್ಯಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಲಾಗಿತ್ತು. ಆದರೆ ಈ ಕಾರ್ಯದಲ್ಲಿ  ಯಾವುದೇ ಸಂಪರ್ಕಿತರನ್ನು ಪತ್ತೆ ಹಚ್ಚದೆ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ತೋರಿದ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ವಿವರವನ್ನು ಕಾಂಟಾಕ್ಟ್ ಟ್ರೇಸಿಂಗ್ ತಂಡದ ನೋಡಲ್ ಅಧಿಕಾರಿಗಳು  ಜಿಲ್ಲಾಧಿಕಾರಿಗೆ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಕೋವಿಡ್ ಸಂಬಂಧಿತ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿದ 22 ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿಪತ್ತು ನಿರ್ವಹಣಾ ಕಾಯ್ದೆ 2005 ಸೆಕ್ಷನ್ 51 ರಿಂದ 60, ಐಪಿಸಿ ಸೆಕ್ಷನ್ 158ರ ಅಡಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನು ಓದಿ: ಕೊರೋನಾ ಸೃಷ್ಟಿಸಿದ ಭಯದ ವಾತಾವರಣ: ರಸ್ತೆಯಲ್ಲಿ ಬಿದ್ದು ಒದ್ದಾಡಿದರೂ ತಿರುಗಿ ನೋಡದ ಜನ..!

ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮ ಪಂಚಾಯಿತಿಯ ಪಿ.ಡಿ.ಒ  ಬಿ.ಮಹದೇವಯ್ಯ, ಚಂದಕವಾಡಿ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಎಂ.ಸಿದ್ದರಾಜು, ಕೆಂಪನಪುರ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಕೆ.ಎನ್.ರಾಮೇಗೌಡ, ಬಾಗಳಿ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಶಿವಕುಮಾರ್, ಉಮ್ಮತ್ತೂರು ಗ್ರಾಮ ಪಂಚಾಯಿತಿಯ ಪಿ.ಡಿ.ಒ ಡಿ.ಭಾಗ್ಯಲಕ್ಷ್ಮಿ, ಕುದೇರು ಗ್ರಾಮ ಪಂಚಾಯಿತಿಯ ಪಿ.ಡಿ.ಒ ಎಂ.ಎಸ್.ಚಂದ್ರು, ಸಾಗಡೆ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಕೆ.ಎನ್. ಸೋಮಶೇಖರ, ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಕೆ.ಜಿ.ದಯಾನಂದ, ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಕೆ.ರಾಜಕುಮಾರ್, ರಾಮಾಪುರ ಗ್ರಾಮ ಪಂಚಾಯಿತಿಯ ಪಿ.ಡಿ.ಒ ವಿ.ಮಹದೇವಸ್ವಾಮಿ, ಕಣ್ಣೂರು ಗ್ರಾಮ ಪಂಚಾಯಿತಿಯ ಪಿ.ಡಿ.ಒ ಬಿ.ನಾಗರಾಜು, ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಬಸವಣ್ಣ, ಗೌಡಹಳ್ಳಿ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಶಿವಕುಮಾರ್, ಯರಗಂಬಳ್ಳಿ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಬಿ.ಆದಿಶೇಷ ಮೂರ್ತಿ, ಹೊನ್ನೂರು ಗ್ರಾಮ ಪಂಚಾಯಿತಿಯ ಪಿ.ಡಿ.ಒ ಕೆ.ಪಿ.ಸುನೀತಾ, ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಎಸ್. ಮಹದೇವಪ್ಪ, ಬಲಚವಾಡಿ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಕೆ.ಸೋಮಶೇಖರ, ಬರಗಿ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಹೆಚ್.ಆರ್.ಮೋಹನ್ ಕುಮಾರ್, ಬೇರಂಬಾಡಿ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಡಿ.ಶೀಲ, ಹಂಗಳ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಕುಮಾರಸ್ವಾಮಿ, ಕೆಲಸೂರು ಗ್ರಾಮ ಪಂಚಾಯಿತಿಯ ಪಿ.ಡಿ.ಒ ಆರ್.ರವಿ, ಕಬ್ಬಳ್ಳಿ ಗ್ರಾಮ ಪಂಚಾಯಿತಿಯ ಪಿ.ಡಿ.ಒ ಸಿ.ಎಸ್.ಉಷಾರಾಣಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ನೋಟಿಸ್ ತಲುಪಿದ 24 ಗಂಟೆಯೊಳಗೆ ವಿವರಣೆ ಸಲ್ಲಿಸಬೇಕು. ತಪ್ಪಿದಲ್ಲಿ ಸಮಜಾಯಿಷಿ ಏನು ಇರುವುದಿಲ್ಲವೆಂದು ಪರಿಗಣಿಸಿ ಶಿಸ್ತಿನ ಕ್ರಮ ಕೈಗೊಳ್ಳಲು ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಷೋಕಾಸ್ ನೋಟಿಸ್ ನಲ್ಲಿ ತಿಳಿಸಿದ್ದಾರೆ.

ವರದಿ: ಎಸ್.ಎಂ.ನಂದೀಶ್
Published by:HR Ramesh
First published: