PSI Suicide : ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಆತ್ಮಹತ್ಯೆ - ಸಮವಸ್ತ್ರದಲ್ಲಿಯೇ ನೇಣಿಗೆ ಶರಣು

ಇಂದು ಚನ್ನರಾಯಪಟ್ಟಣಕ್ಕೆ ಐಜಿ-ಎಸ್ಪಿ ಭೇಟಿ ನೀಡಲಿದ್ದರು. ಆದರೆ ಅದಕ್ಕೂ ಮುನ್ನ ಪಿಎಸ್ಐ ಕಿರಣ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ

ಆತ್ಮಹತ್ಯೆ ಮಾಡಿಕೊಂಡ ಪಿಎಸ್ಐ ಕಿರಣ್​​

ಆತ್ಮಹತ್ಯೆ ಮಾಡಿಕೊಂಡ ಪಿಎಸ್ಐ ಕಿರಣ್​​

  • Share this:
ಹಾಸನ(ಜುಲೈ.31): ಪಿಎಸ್​ಐ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿರು ವ್ಯಕ್ತಿಯನ್ನು ಸಬ್​​ ಇನ್ಸ್​​ಪೇಕ್ಟರ್ ಕಿರಣ್​​ ಎಂದು ಗುರುತಿಸಲಾಗಿದೆ. 

ಇವರು ಚನ್ನರಾಯಪಟ್ಟಣದ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್​ಐ​​ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಚನ್ನರಾಯಪಟ್ಟಣದ ತಮ್ಮ ಮನೆಯಲ್ಲಿ ಸಮವಸ್ತ್ರದಲ್ಲಿ ಫ್ಯಾನ್​ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ  ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.

ಆರೋಪಿಗಳನ್ನು ಬಂಧಿಸುವಲ್ಲಿ ರಾಜಕೀಯ ಒತ್ತಡವಿತ್ತು ಎಂದು ಹೇಳಲಾಗುತ್ತಿದೆ, ಚನ್ನರಾಯಪಟ್ಟಣದಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು.

ಇದನ್ನೂ ಓದಿ : ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ಸುಳ್ಳು ಆರೋಪ - ಸಿದ್ಧರಾಮಯ್ಯ, ಡಿಕೆಶಿಗೆ ನೋಟೀಸ್ ; ರವಿಕುಮಾರ್

ಕೊಲೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ಮೃತ ಎಸ್‌ಐ ಕಿರಣ್ ನಡೆಸಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಎಎಸ್‌ಪಿ ನಂದಿನಿ, ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ಇಂದು ಚನ್ನರಾಯಪಟ್ಟಣಕ್ಕೆ ಐಜಿ-ಎಸ್ಪಿ ಭೇಟಿ ನೀಡಲಿದ್ದರು. ಆದರೆ ಅದಕ್ಕೂ ಮುನ್ನ ಕಿರಣ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸ್ ಅಧಿಕಾರಿಯ ಆತ್ಮಹತ್ಯೆಯಿಂದ ಪೊಲೀಸ್ ವಲಯದಲ್ಲಿ ದಿಗ್ಭ್ರಮೆ ಉಂಟಾಗಿದೆ.
Published by:G Hareeshkumar
First published: