• ಹೋಂ
  • »
  • ನ್ಯೂಸ್
  • »
  • ಜಿಲ್ಲೆ
  • »
  • ಚನ್ನಪಟ್ಟಣಕ್ಕೆ ಹೆಚ್​ಡಿಕೆ ಕೊಡುಗೆ; 50 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ

ಚನ್ನಪಟ್ಟಣಕ್ಕೆ ಹೆಚ್​ಡಿಕೆ ಕೊಡುಗೆ; 50 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ

ಕುಮಾರಸ್ವಾಮಿ

ಕುಮಾರಸ್ವಾಮಿ

ರಾಮನಗರ ಜಿಲ್ಲೆಯಿಂದ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಹೆಚ್.ಡಿ. ಕುಮಾರಸ್ವಾಮಿ ಈಗ ಜಿಲ್ಲೆಯಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ ಮಾಡುವ ಮೂಲಕ ಈ ಭಾಗದ ಜನರ ಮೆಚ್ವುಗೆ ಗಳಿಸಿದ್ದಾರೆ.

  • Share this:

ಚನ್ನಪಟ್ಟಣ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆಗಾಗಿ ಯೋಜನೆ ರೂಪಿಸಿದ್ದ ಹೆಚ್​ಡಿಕೆ ಕನಸು ಈಗ ನನಸಾಗುವ ಕಾಲ ಬಂದಿದೆ. ಈ ಯೋಜನೆಗೆ ಬೊಂಬೆನಗರಿಯ ಜನ ಸಂತಸಗೊಂಡಿದ್ದಾರೆ. ಅವಳಿ ನಗರಗಳಂತಿರುವ ರಾಮನಗರ- ಚನ್ನಪಟ್ಟಣ ಮಧ್ಯ ಭಾಗದಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಸುಮಾರು 20 ಎಕರೆ ಪ್ರದೇಶದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣವಾಗಲಿದೆ. ಹೆಚ್‌.ಡಿ. ಕುಮಾರಸ್ವಾಮಿ ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಈ ಯೋಜನೆಗೆ ಅನುಮೋದನೆ ನೀಡಿದ್ದರು ಎಂದು ರಾಮನಗರ ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ರಾಜಶೇಖರ್‌ ತಿಳಿಸಿದ್ದಾರೆ.


ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಸುಮಾರು 20 ಎಕರೆ ಜಾಗದ ಅಗತ್ಯ ಇತ್ತು. ರಾಮನಗರದಲ್ಲಿ ಪ್ರಸ್ತುತ ಇರುವ ಮಾರುಕಟ್ಟೆ ಹಾಗೂ ಅದರ ಪಕ್ಕದಲ್ಲಿ ಗುರುತಿಸಲಾದ ಖಾಲಿ ಜಾಗ ಸೇರಿ ಕೇವಲ 4 ಎಕರೆ ಭೂಮಿ ಮಾತ್ರ ಲಭ್ಯ ಇತ್ತು. ಹೀಗಾಗಿ ಚನ್ನಪಟ್ಟಣದ ಪೊಲೀಸ್‌ ತರಬೇತಿ ಶಾಲೆಯ ಪಕ್ಕ ಖಾಲಿ ಇರುವ ಸರ್ಕಾರಿ ಮಾದರಿ ಬಿತ್ತನೆ ಕೋಟಿ ಮತ್ತು ರೇಷ್ಮೆ ತರಬೇತಿ ಕೇಂದ್ರಗಳಿಗೆ ಸೇರಿದ 38 ಎಕರೆ ಭೂಮಿಯಲ್ಲಿ ಹೊಸ ಮಾರುಕಟ್ಟೆ ನಿರ್ಮಿಸಲು ಕುಮಾರಸ್ವಾಮಿ ಯೋಜನೆ ರೂಪಿಸಿದರು. ಇದಕ್ಕಾಗಿ 70 ಕೋಟಿ ವೆಚ್ಚ ಅಂದಾಜಿಸಲಾಗಿತ್ತು. ಇದೀಗ 50 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ಹಾಸನದಲ್ಲಿ ನಿರ್ಗತಿಕ ಮಹಿಳೆ ಮೇಲೆ ಅತ್ಯಾಚಾರ; ಆರೋಪಿಯ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆ


ಮಾರುಕಟ್ಟೆಯ ಜೊತೆಗೆ ಗೂಡು ಮಾರಾಟಕ್ಕೆ ಬರುವ ರೈತರಿಗೆ, ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಗಳು, ವಾಹನ ನಿಲ್ದಾಣ, ಫುಡ್ ರೆಸ್ಟೋರೆಂಟ್ ಹೀಗೆ ಮೂಲ ಸೌಕರ್ಯಗಳನ್ನೂ ಇಲ್ಲಿ ಕಲ್ಪಿಸಲಾಗುತ್ತದೆ ಎನ್ನಲಾಗುತ್ತಿದೆ. ಕಳೆದ ಸುಮಾರು ವರ್ಷಗಳಿಂದ ರಾಮನಗರ ರೇಷ್ಮೆ ಮಾರುಕಟ್ಟೆಗೆ ಹೈಟೆಕ್ ರೂಪ ಕೊಡಬೇಕೆಂಬ ಕೂಗು ಕೇಳಿ ಬರುತ್ತಿತ್ತು. ಆದರೆ ಈಗ ಆ ಕನಸು ನನಸಾಗಿದೆ ಎಂದು ಜೆಡಿಎಸ್ ಮುಖಂಡರು ತಿಳಿಸಿದ್ದಾರೆ.
ಒಟ್ಟಾರೆ ರಾಮನಗರ ಜಿಲ್ಲೆಯಿಂದ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಹೆಚ್.ಡಿ. ಕುಮಾರಸ್ವಾಮಿ ಈಗ ಜಿಲ್ಲೆಯಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ ಮಾಡುವ ಮೂಲಕ ಈ ಭಾಗದ ಜನರ ಮೆಚ್ವುಗೆ ಗಳಿಸಿದ್ದಾರೆ. ಅದರಲ್ಲೂ ಕಾರ್ಯಕ್ಷೇತ್ರ ಚನ್ನಪಟ್ಟಣದಲ್ಲಿ ನಿರ್ಮಾಣವಾಗುತ್ತಿರೋದಕ್ಕೆ ಬೊಂಬೆನಾಡಿನ ಜನರು ಸಂತಸ ವ್ಯಕ್ತಪಡಿಸಿದ್ದಾರೆ.


ವರದಿ: ಎ.ಟಿ.ವೆಂಕಟೇಶ್

Published by:Vijayasarthy SN
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು