ಚಿಕ್ಕಬಳ್ಳಾಪುರ: ಭಾರೀ ಮಳೆಗೆ ಮನೆ ಕುಸಿದು ತಂದೆ-ಮಗ ಸಾವು, ತಾಯಿ-ಮಗಳು ಪ್ರಾಣಾಪಾಯದಿಂದ ಪಾರು

ಈ ಘಟನೆಯಲ್ಲಿ ಮೃತಪಟ್ಟ ಇಬ್ಬರಿಗೆ ಸರ್ಕಾರದಿಂದ ತಲಾ 5 ಲಕ್ಷ ದಂತೆ ಒಟ್ಟು 10 ಲಕ್ಷ ಪರಿಹಾರ ಶೀಘ್ರವಾಗಿ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದರು.

news18-kannada
Updated:October 26, 2020, 10:31 AM IST
ಚಿಕ್ಕಬಳ್ಳಾಪುರ: ಭಾರೀ ಮಳೆಗೆ ಮನೆ ಕುಸಿದು ತಂದೆ-ಮಗ ಸಾವು, ತಾಯಿ-ಮಗಳು ಪ್ರಾಣಾಪಾಯದಿಂದ ಪಾರು
ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ.
  • Share this:
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕಿನ ಕೈವಾರ ಹೋಬಳಿಯ ವೈಜಕೂರು ಗ್ರಾಮದಲ್ಲಿ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ತಂದೆ ಮಗ ಸಾವನ್ನಪ್ಪಿದ್ದು, ತಾಯಿ ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆ ದಾಖಲಿಸಲಾಗಿದ್ದು ಜಿಲ್ಲಾಧಿಕಾರಿ ಆರ್. ಲತಾ  ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಜಿಲ್ಲೆಯ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ಆಕ್ಟೊಬರ್ 23 ರಂದು  ಘಟನೆ ನಡೆದಿದ್ದು, ಭಾರೀ ಮಳೆಯಿಂದಾಗಿ ಬೆಳಗಿನ ಜಾವ 6.30ರ ಸುಮಾರಿಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಮನೆಯ ಯಜಮಾನ ರವಿಕುಮಾರ್ (42), ಮಗ ರಾಹುಲ್ (15) ಮೃತಪಟ್ಟಿದ್ದಾರೆ.

ಮೃತ ರವಿಕುಮಾರ್ ಪತ್ನಿ ಮುನಿರಾಜಮ್ಮ ಹಾಗೂ ಮಗಳು ರುಚಿತಾ ಪ್ರಾಣಾಪಾಯದಿಂದ ಪಾರಾಗಿದ್ದು ಅವರನ್ನು ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಭರವಸೆ ನೀಡಿದ್ದಾರೆ.

ಈ ಘಟನೆಯಲ್ಲಿ ಮೃತಪಟ್ಟ ಇಬ್ಬರಿಗೆ ಸರ್ಕಾರದಿಂದ ತಲಾ 5 ಲಕ್ಷ ದಂತೆ ಒಟ್ಟು 10 ಲಕ್ಷ ಪರಿಹಾರ ಶೀಘ್ರವಾಗಿ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ : ಕೊರೋನಾ ರೋಗಿಗಳನ್ನು ಗುಣಪಡಿಸಲು ಪ್ಲಾಸ್ಮಾ ಥೆರಪಿ ಭಾರತದಲ್ಲಿ ಪರಿಣಾಮಕಾರಿಯಾಗಿದೆ; ಅಧ್ಯಯನದ ವರದಿ

ವರದಿಗಳ ಆಧಾರದ ಮೇಲೆ ಶೀಘ್ರವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಪರಿಹಾರ ಹಣವನ್ನು ಬ್ಯಾಂಕ್ ಗೆ ಜಮೆ ಮಾಡಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ ನೀಡಿದರು ‌. ತಕ್ಷಣ ಗ್ರಾಮದಲ್ಲಿ ಶಿಥಿಲವಾದ ಮನೆಗಳು ಗುರುತಿಸಿ ವರದಿ ಸಲ್ಲಿಸಿ ಸೂರು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಿವೇಶನ ರಹಿತ ಬಡ ಕುಟುಂಬಗಳ ವರದಿ ಸಲ್ಲಿಸಿ ನಿವೇಶನ ಕೂಡಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ವರದಿ  ತಯಾರಿಸಲು ಸುಚನೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಹನುಮಂತಪ್ಪರಾಯಪ್ಪ, ತಾಲ್ಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಮತ್ತಿತರರು ಇದ್ದರು.
Published by: MAshok Kumar
First published: October 26, 2020, 10:31 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading