news18-kannada Updated:July 7, 2020, 6:14 PM IST
ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಬಂದಿರೋ ವಿಧಾನ ಪರಿಷತ್ ಸದಸ್ಯರೊಬ್ಬರ ಜೊತೆ ಸಂಪರ್ಕದಲ್ಲಿದ್ದ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮಾಜಿ ಬಿಜೆಪಿ ನಗರಸಭಾ ಸದಸ್ಯರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ನಗರಸಭೆ ಮಾಜಿ ಸದಸ್ಯರ ಪತ್ನಿಗೂ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಈಗಾಗಲೇ ಮೂವರನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.
ವಿಧಾನಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಅವರೊಂದಿಗೆ ಸಂಪರ್ಕ ಹೊಂದಿದ್ದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಬಿಜೆಪಿ ನಗರಸಭೆ ಮಾಜಿ ಸದಸ್ಯನಿಗೆ ಪಾಸಿಟಿವ್ ಪತ್ತೆಯಾಗಿರುವುದರಿಂದ ಇನ್ನುಳಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೂ ಕೊರೋನ ಆತಂಕ ಎದುರಾಗಿದೆ. ಇದೀಗ ಜಿಲ್ಲಾ ಬಿಜೆಪಿ ವಲಯದಲ್ಲಿ ತೀವ್ರ ಆತಂಕ ಎದುರಾಗಿದ್ದು ಮೂಡಿಗೆರೆ ತಾಲೂಕಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಕೊರೋನಾ ಪರೀಕ್ಷೆಗೆ ಮುಂದಾಗಿದ್ದಾರೆ. ಸಾಲದಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಗರಸಭೆ ಮಾಜಿ ಸದಸ್ಯರ ಸಂಪರ್ಕದಲ್ಲಿದ್ದ ಜನಸಾಮಾನ್ಯರು ತೀವ್ರ ಆತಂಕಕ್ಕೀಡಾಗಿದ್ದಾರೆ. ಅಷ್ಟೇ ಅಲ್ಲದೆ ಇವರಿಬ್ಬರು ಸಚಿವ ಸಿಟಿ ರವಿ ಅವರ ಜೊತೆ ಸಂಪರ್ಕದಲ್ಲಿದ್ದ ಹಿನ್ನೆಲೆ ಸಚಿವ ಸಿ.ಟಿ. ರವಿ ಅವರು ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಅಲ್ಲದೆ, ಕೋವಿಡ್ ಪರೀಕ್ಷೆ ಕೂಡ ಈಗಾಗಲೇ ಮಾಡಿಸಿದ್ದು ವರದಿಗಾಗಿ ಸಚಿವರು ಕಾಯುತ್ತಿದ್ದಾರೆ. ಸಚಿವರ ಸಂಪರ್ಕದಲ್ಲಿದ್ದ ಮೂವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಸಚಿವರಲ್ಲೂ ಆತಂಕ ಎದುರಾಗಿದೆ. ಈಗಾಗಲೇ ನಗರಸಭೆ ಮಾಜಿ ಸದಸ್ಯರ ಏರಿಯಾವನ್ನು ಕೂಡ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡದಲ್ಲಿ ಉದ್ದೇಶಿತ ಕಾರ್ಯಗಳಿಗೆ ಬಳಕೆಯಾಗದ ಸಿಎ ನಿವೇಶನಗಳನ್ನು ಹಿಂಪಡೆಯಲು ಕ್ರಮ
ಇಷ್ಟು ದಿನಗಳ ಕಾಲ ಜನಸಾಮಾನ್ಯರಲ್ಲಿ ಮಾತ್ರ ಕೊರೊನಾ ಪತ್ತೆಯಾಗುತ್ತಿತ್ತು. ಇದೀಗ ರಾಜಕಾರಣಿಗಳಲ್ಲೂ ಕೊರೊನಾ ಪತ್ತೆಯಾಗಿರುವುದರಿಂದ ಜನಸಾಮಾನ್ಯರು ಭಯಭೀತರಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜಿಲ್ಲೆಯಲ್ಲಿ ಪತ್ತೆಯಾದ ನಾಲ್ಕು ಪ್ರಕರಣಗಳು ILI ಗುಣಲಕ್ಷಣಗಳಿದ್ದವಾಗಿವೆ. ಇದರಿಂದ ಜಿಲ್ಲೆಯ ಜನರಲ್ಲಿ ಕೊರೋನಾ ಸಮುದಾಯಕ್ಕೆ ಹರಡಿದೆಯಾ ಎಂಬ ಅನುಮಾನ ಮೂಡಿದೆ.
ವರದಿ: ವೀರೇಶ್ ಹೆಚ್ ಜಿ
Published by:
Vijayasarthy SN
First published:
July 7, 2020, 6:14 PM IST