HOME » NEWS » District » CHITRADURGA ZP GETS READY TO SORT DRINKING WATER SCARCITY IN SUMMER VTC SKTV

ಚಿತ್ರದುರ್ಗದಲ್ಲಿ ಬೇಸಿಗೆ ತಯಾರಿ, ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕ್ರಮ

ಬೇಸಿಗೆ ಕಾಲ ಈಗಾಗಲೇ  ಪ್ರಾರಂಭ ಆಗಿದ್ದು ಜಿಲ್ಲೆಯ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಪಟ್ಟಂತೆ ಅನೇಕ ದೂರುಗಳು ಬರುತ್ತಿವೆ.

news18-kannada
Updated:April 17, 2021, 7:17 AM IST
ಚಿತ್ರದುರ್ಗದಲ್ಲಿ ಬೇಸಿಗೆ ತಯಾರಿ, ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕ್ರಮ
ಸಾಂದರ್ಭಿಕ ಚಿತ್ರ
  • Share this:
ಚಿತ್ರದುರ್ಗ: ಬರದ ಹಣೆಪಟ್ಟಿ ಹೊತ್ತಿರೋ ಚಿತ್ರದುರ್ಗ ಜಿಲ್ಲೆಯಲ್ಲಿ ಬಿರು ಬಿಸಿಲಿನ ತಾಪ ಏರುತ್ತಿದ್ದು ಕುಡಿಯುವ ನೀರಿನ ಅಭಾವ ಹೆಚ್ಚಾಗಬಹುದು ಅನ್ನೋ ಆತಂಕ ಮೂಡುತ್ತಿದೆ. ಇದರಿಂದ ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆ ಪೂರ್ತಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ಚರ್ಚೆ, ಪ್ರಶ್ನೆ ಉತ್ತರಗಳು ಕೇಳಿ ಬಂದವು. 

ಬೇಸಿಗೆ ಕಾಲ ಈಗಾಗಲೇ  ಪ್ರಾರಂಭ ಆಗಿದ್ದು ಜಿಲ್ಲೆಯ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಪಟ್ಟಂತೆ ಅನೇಕ ದೂರುಗಳು ಬರುತ್ತಿವೆ. ಹಾಗಾಗಿ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಪಂಚಾಯಿತಿ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದ ಅವರು, ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗಬಾರದು. ಸಮಸ್ಯೆ ಇರುವ ಗ್ರಾಮಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಕ್ರಮವಹಿಸಿ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಜ್ಞಾನೇಶ್, ಬೇಸಿಗೆಯ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ 251 ಜನವಸತಿ ಪ್ರದೇಶಗಳನ್ನು ಈಗಾಗಲೇ ಪಟ್ಟಿ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗೆ ಸಂಬಂಧಪಟ್ಟಂತೆ 14 ಕೋಟಿ ರೂಪಾಯಿ ಕ್ರಿಯಾ ಯೋಜನೆ ತಯಾರಿಸಿ ಇಲಾಖೆಗೆ ಸಲ್ಲಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದರು. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಪಟ್ಟಿ ಮಾಡಿ ತಾಲ್ಲೂಕುವಾರು ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಅನುಮೋದನೆ ಪಡೆಯಬೇಕು. ನಂತರ ಸಮಸ್ಯೆ ಇರುವ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ ಕೆ ನಂದಿನಿ ದೇವಿ ತಿಳಿಸಿದರು.

ಕೊರೊನಾ ಸೋಂಕು ಹೆಚ್ಚಳ ಹಾಗೂ ಬೇಸಿಗೆ ಇರುವುದರಿಂದ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪರಿಶೀಲಿಸಿ, ಸಮಪರ್ಕವಾಗಿರಿಸಿಕೊಂಡು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮವಹಿಸಬೇಕು ಎಂದು ಅಧ್ಯಕ್ಷರು ಸೂಚಿಸಿದರು. ಜಿಲ್ಲೆಯ ಎಲ್ಲಾ ಆರ್ ಒ  ಘಟಕಗಳನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ಇಲಾಖೆಯಿಂದ ಆರು ತಾಲ್ಲೂಕುಗಳ ಆರ್ ಓ ಘಟಕಗಳ ರಿಪೇರಿಗೆ ಟೆಂಡರ್ ಕರೆದು ಮೂರು ಗುತ್ತಿಗೆ ಸಂಸ್ಥೆಗಳಿಗೆ ವಹಿಸಲಾಗಿದೆ.

ಈ ಸಂಸ್ಥೆಯವರು  ಘಟಕಗಳ ರಿಪೇರಿ ಮಾಡಬೇಕು.ಈಗಾಗಲೇ ಸಂಸ್ಥೆಯವರಿಗೆ ಹಣವನ್ನು ನೀಡಲಾಗಿದೆ ಆದರೂ ಇದುವರೆಗೂ ಘಟಕಗಳನ್ನು ಯಾಕೆ ರಿಪೇರಿ ಮಾಡಿಲ್ಲ ಎಂದು ಪ್ರಶ್ನಿಸಿದ ಜಿ.ಪಂ ಅಧ್ಯಕ್ಷರು, ರಿಪೇರಿ ಮಾಡದ ಗುತ್ತಿಗೆ ಸಂಸ್ಥೆಯ ಟೆಂಡರ್ ರದ್ದುಗೊಳಿಸಿ, ನೋಟಿಸ್ ನೀಡಲು ಸೂಚನೆ ನೀಡಿದರು.
Published by: Soumya KN
First published: April 17, 2021, 7:17 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories