ಸಿಎಂ ಮೊದಲ ಭೇಟಿಯಲ್ಲಿಯೇ ಹಾವೇರಿಗೆ ಭರಪೂರ ಕೊಡುಗೆ; ಬೊಮ್ಮಾಯಿ ಹೋದಲ್ಲೆಲ್ಲಾ ಜನಜಂಗುಳಿ

ಹಿರೇಕೆರೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಕೆಲ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು.

ಹಾವೇರಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ

ಹಾವೇರಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ

  • Share this:
ಹಾವೇರಿ(ಆ.28): ಬಸವರಾಜ ಬೊಮ್ಮಾಯಿ ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ತವರು ಜಿಲ್ಲೆ ಹಾವೇರಿಗೆ ಭೇಟಿ ಕೊಟ್ಟಿದ್ದು, ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹಿರೇಕೆರೂರು, ರಾಣೆಬೆನ್ನೂರು ಮತ್ತು ಹಾವೇರಿ ಗಳಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಕೆರೆ ತುಂಬಿಸುವ ಕಾಮಗಾರಿಗಳಿಗೂ ಚಾಲನೆ ನೀಡಿದರು. ಆದರೆ ಸಿಎಂ ಭೇಟಿ ನೀಡುವಲ್ಲೆಲ್ಲ ಜನಜಂಗುಳಿಯಾಗಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರು. ಮುಖಂಡರು ಶಾಸಕ ಬೊಮ್ಮಾಯಿ ಜೊತೆ ಗುಂಪು ಗುಂಪಾಗಿ ಸಂಚರಿಸಿ ಕೋವಿಡ್ ಗೆ ಡೋಂಟ್ ಕೇರ್ ಎಂದರು.

ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದ ಪೊಲೀಸ್ ಪರೇಡ್ ಮೈದಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಹಿರೇಕೆರೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಕೆಲ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು. ಸಿಎಂ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಪಾಡದೆ ಜನ ಕೋವಿಕ್ ನಿಯಮ ಉಲ್ಲಂಘಿಸಿದರು. ಮೈದಾನದಲ್ಲಿ  ಸಾವಿರಾರು ಜನ ಜಮಾಯಿಸಿದ್ದರು.

ಮಾಸ್ಕ್ ಹಾಕದೆ ಸಾಮಾಜಿಕ ಅಂತರ ಕಾಪಾಡದೆ ಜನ ಕಾರ್ಯಕ್ರಮದಲ್ಲಿ ಭಾಗಿಯಾದರು. ಈ ವೇಳೆ ಮಾಸ್ಕ್ ಗಾಗಿ ನೂಕು ನುಗ್ಗಲು ಏರ್ಪಟ್ಟಿತು. ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸೋ ಮುನ್ನ ಕೃಷಿ ಸಚಿವ ಬಿ.ಸಿ.ಪಾಟೀಲ ಹೆಸರಿನ ಮಾಸ್ಕ್ ಗಾಗಿ ನೂಕು ನುಗ್ಗಲು ಏರ್ಪಟ್ಟಿತು. ತರಾತುರಿಯಲ್ಲಿಯೇ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಸಿಎಂ, ಕೃಷಿ ಸಚಿವ ಬಿ.ಸಿ.ಪಾಟೀಲ ನಿವಾಸಕ್ಕೆ ಊಟಕ್ಕೆಂದು ತೆರಳಿದರು.

ಇದನ್ನೂ ಓದಿ:Mysuru Gang Rape Case: ಮೈಸೂರು ಗ್ಯಾಂಗ್​ ರೇಪ್​ ಪ್ರಕರಣ; ಐವರು ಆರೋಪಿಗಳು ಅರೆಸ್ಟ್, ಮಾಹಿತಿ ಬಿಚ್ಚಿಟ್ಟ ಡಿಜಿಪಿ

ಕೆರೆ ತುಂಬಿಸೋ ಕಾಮಗಾರಿಗೆ ಚಾಲನೆ

ಹಿರೇಕೆರೂರು ತಾಲೂಕಿನ ದುರ್ಗಾದೇವಿ ಕೆರೆ ತುಂಬಿಸೋ ಯೋಜನೆಗೆ ಚಾಲನೆ ನೀಡಿದರು. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚನ್ನಳ್ಳಿ ಗ್ರಾಮದ ಬಳಿ ಚಾಲನೆ ನೀಡಿದ ಸಿಎಂ ಪೂಜೆ ಸಲ್ಲಿಸಿದರು. ನಂತರ ಕೆರೆಗೆ ಬಾಗಿನ ಅರ್ಪಿಸಿದರು. ಮದಗಮಾಸೂರು ಕೆರೆಯಿಂದ ದುರ್ಗಾದೇವಿ ಕೆರೆ ತುಂಬಿಸೋ ಮಹತ್ವಾಕಾಂಕ್ಷಿ ಯೋಜನೆಯಾಗಿದೆ.

ಡಿಕೆಶಿ ವಿರುದ್ಧ ಕಿಡಿ ಕಾರಿದ ಸಿಎಂ

ಮೈಸೂರು ಯುವತಿ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ ಎಂಬ ಡಿಕೆಶಿ ಹೇಳಿಕೆಗೆ ಮುಖ್ಯಮಂತ್ರಿ ಬವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರು ಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆಗೆ ಅಸಮಾಧಾನ ವ್ಯಕ್ಯಪಡಿಸಿದರು.

ಯಾರು ಏನೇ ಹೇಳಲಿ, ನಮ್ಮ  ಪೊಲೀಸರು ಸಮರ್ಥರಿದ್ದಾರೆ. ಮೈಸೂರು ಅತ್ಯಾಚಾರ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಪ್ರತಿಪಕ್ಷದವರು ಈ ವಿಷಯದಲ್ಲಿ ಏನು ಬೇಕಾದರೂ ಹೇಳಿಕೊಳ್ಳಲಿ. ಮೈಸೂರು ಪ್ರಕರಣ ಸೇರಿದಂತೆ ಎಲ್ಲ ಅಪರಾಧ ಪ್ರಕರಣ ನಿಭಾಯಿಸುವಲ್ಲಿ ನಮ್ಮ ಪೊಲೀಸರು ಸಮರ್ಥರಿದ್ದಾರೆ. ಅವರು ತಮ್ಮ ಕರ್ತವ್ಯವನ್ನು ಸಮರ್ಥವಾಗಿ ಮಾಡ್ತಾರೆ ಎಂದರು.

ಇದನ್ನೂ ಓದಿ:Health Tips: ನೀವು ಸಾತ್ವಿಕ ಆಹಾರ ಸೇವಿಸಿದ್ದೀರಾ? ಇದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪಟ್ಟು  ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಯಾವುದೇ ಪರ ಮತ್ತು ವಿರೋಧದ ಚರ್ಚೆಗಳು ನಡೆದಿಲ್ಲ. ಕೆಲವರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಆಗಸ್ಟ್ 30 ರಂದು ತಜ್ಞರ ಸಮಿತಿ ನಡೆಸಲಿದ್ದು ಅಂದೇ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಮಹದಾಯಿ ಮತ್ತು ಮೇಕೆದಾಟು ಯೋಜನೆಗಳನ್ನ ಆದಷ್ಟು ಬೇಗ ಕೈಗೆತ್ತಿಕೊಳ್ಳುತ್ತೇವೆ. ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುತ್ತಿದ್ದೇವೆ. ಅಕ್ಟೋಬರ್ 01 ರಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಾರಂಭಗೊಳ್ಳಲಿದೆ. ಸಮಿತಿ ಅಧ್ಯಯನ ವರದಿ ಆಧಾರದ ಮೇಲೆ ಶಿಕ್ಷಣ ನೀತಿ ಜಾರಿಗಳಿಸಲಾಗುವುದು ಎಂದರು.
Published by:Latha CG
First published: