ನಮಗೆ ಯಡಿಯೂರಪ್ಪನವರೇ ನಾಯಕರು, ನಾಯಕತ್ವದ ಬದಲಾವಣೆ ಇಲ್ಲ: ಡಿಸಿಎಂ ಅಶ್ವತ್ಹನಾರಾಯಣ

ಸಲ್ಲುವವರಿಗೆ ಎಲ್ಲವೂ ಸಲ್ಲುತ್ತೆ, ಈ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತದೆ, ಅದನ್ನ ನಾವು ಒಪ್ಪುತ್ತೇವೆ. ಈ ವಿಚಾರವಾಗಿ ಚರ್ಚೆ ಮಾಡುವುದು ಬೇಡ ಎಂದರು

ಉಪಮುಖ್ಯಮಂತ್ರಿ ಅಶ್ವತ್ಹನಾರಾಯಣ

ಉಪಮುಖ್ಯಮಂತ್ರಿ ಅಶ್ವತ್ಹನಾರಾಯಣ

  • Share this:
ರಾಮನಗರ(ನವೆಂಬರ್​. 26): ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ ಎಂದು ಉಪಮುಖ್ಯಮಂತ್ರಿ ಅಶ್ವತ್ಹನಾರಾಯಣ ಹೇಳಿಕೆ ನೀಡಿದ್ದಾರೆ. ಮಾಗಡಿಯ ಜೇನುಕಲ್ಲು ಪಾಳ್ಯದ ಬಡವರಿಗೆ ಭೂಮಿಯ ಹಕ್ಕುಪತ್ರ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯುತ್ತಾರೆ, ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಯಡಿಯೂರಪ್ಪನವರೇ ನಮ್ಮ ನಾಯಕರು ಎಂದು ತಿಳಿಸಿದರು. ಇನ್ನು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದರು. ಸೋತವರಿಗೆ ಮಂತ್ರಿ ಸ್ಥಾನ ಸಿಗುವ ವಿಚಾರವಾಗಿ ಮಾತನಾಡಿದ ಅವರು, ಸಲ್ಲುವವರಿಗೆ ಎಲ್ಲವೂ ಸಲ್ಲುತ್ತೆ, ಈ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತದೆ, ಅದನ್ನ ನಾವು ಒಪ್ಪುತ್ತೇವೆ. ಈ ವಿಚಾರವಾಗಿ ಚರ್ಚೆ ಮಾಡುವುದು ಬೇಡ ಎಂದರು. ಇನ್ನೂ ವಿಧಾನ ಪರಿಷತ್​ ಸದಸ್ಯ  ಸಿ.ಪಿ.ಯೋಗೇಶ್ವರ್ ಗೆ ಸಚಿವ ಸ್ಥಾನದ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಅಶ್ವತ್ಹ ನಾರಾಯಣ, ಅವರಿಗೆ ಸಚಿವ ಸ್ಥಾನ ಸಿಗಬೇಕು, ಪಕ್ಷಕ್ಕಾಗಿ ಅವರು ದುಡಿದಿದ್ದಾರೆ.ಅವರಿಗೆ ಸ್ಥಾನ ಸಿಗಲಿದೆ ಎನ್ನುವ ಅಪೇಕ್ಷೆ ಇದೇ ಎಂದು ತಿಳಿಸಿದರು.

ಸದ್ಯ ರಾಜ್ಯ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿರುವ ವಿಚಾರವೆಂದರೆ ಅದು ಸಚಿವ ಸಂಪುಟ ಪುನಾರಚನೆ. ಸಚಿವ ಸ್ಥಾನದ ಆಕಾಂಕ್ಷಿಗಳು ತಮಗೂ ಮಂತ್ರಿ ಸ್ಥಾನ ಬೇಕೆಂದು ಈಗಾಗಲೇ ಸಿಎಂ ಬಿಎಸ್​ ಯಡಿಯೂರಪ್ಪನವರಿಗೆ ದುಂಬಾಲು ಬಿದ್ದಿದ್ದಾರೆ.

ಇದನ್ನೂ ಓದಿ : ಸರ್ಕಾರ ರಚನೆಯಲ್ಲಿ ನಮ್ಮ ಕೊಡುಗೆಯೂ ಇದೆ, 17 ಜನರ ತ್ಯಾಗವೂ ಇದೆ; ವಿವಾದದ ಬಳಿಕ ಎಚ್ಚೆತ್ತ ರೇಣುಕಾಚಾರ್ಯ

ಕೆಲವು ದಿನಗಳ ಹಿಂದೆ ಮಾಜಿ ಸಚಿವ ಎಚ್​.ವಿಶ್ವನಾಥ್ ಕೂಡ ತನಗೆ ಸಚಿವ ಸ್ಥಾನ ಬೇಕೆಂಬ ಇಂಗಿತ ವ್ಯಕ್ತಪಡಿಸಿದ್ದರು. ಈಗ ಆ ಸಾಲಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಕೂಡ ಸೇರಿದ್ದಾರೆ. ನ್ಯೂಸ್​ 18 ಕನ್ನಡದ ಜೊತೆ ಮಾತನಾಡಿದ ಅವರು, ಹಾಲಿ ಸಚಿವರ ಕೈ ಬಿಡಿ, ನಮಗೂ ಅವಕಾಶ ಕೊಡಿ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.

ಮೂರು ಬಾರಿ ಶಾಸಕನಾಗಿದ್ದೇನೆ ನನಗೂ ಅವಕಾಶ ಕೊಡಿ ಎಂದು ಕೇಳಿದ್ದೇನೆ. ಒಂದು ಗಂಟೆ ಕಾಲ ನಳೀನ್ ಕುಮಾರ್​ ಕಟೀಲ್ ಚರ್ಚೆ ಮಾಡಿದ್ದಾರೆ. ನನಗೆ ಅವರು ಯಾವುದೇ ನೋಟಿಸ್ ಕೊಟ್ಟಿಲ್ಲ. ನಾನೇ ಬಂದು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಎಂದಿದ್ದರು,
Published by:G Hareeshkumar
First published: