ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಿಗೆ ಸದಸ್ಯನಿಂದಲೇ ಲೈಂಗಿಕ ಕಿರುಕುಳ; ಮಹಿಳಾ ಠಾಣೆಯಲ್ಲಿ ದೂರು ದಾಖಲು

ತಾಯಿಗೆ ಎಚ್.ಐ.ವಿ. ಇದ್ದ ಹಿನ್ನೆಲೆಯಲ್ಲಿ ಮಗುವಿಗೆ ಟೆಸ್ಟ್ ಮಾಡಿಸಲು, ಇತರೆ ಚಿಕಿತ್ಸೆ ಕೊಡಿಸಲು ಖಾಸಗಿ ಆಸ್ಪತ್ರೆಗೆ ಮಗುವನ್ನು ಕರೆದೊಯ್ಯುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಜಿಲ್ಲಾ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಬೈಕ್ ಮೇಲೆ ಮಗುವನ್ನು ಕರೆದೊಯ್ಯುವಾಗ ಮೈ ಮುಟ್ಟಿ ಅಶ್ಲೀಲವಾಗಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ.

news18-kannada
Updated:June 6, 2020, 2:36 PM IST
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಿಗೆ ಸದಸ್ಯನಿಂದಲೇ ಲೈಂಗಿಕ ಕಿರುಕುಳ; ಮಹಿಳಾ ಠಾಣೆಯಲ್ಲಿ ದೂರು ದಾಖಲು
ಸಾಂದರ್ಭಿಕ ಚಿತ್ರ
  • Share this:
ಕಲಬುರ್ಗಿ; ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಿಗೆ ಸಮಿತಿಯ ಸದಸ್ಯರೊಬ್ಬರೇ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕಲಬುರ್ಗಿಯಲ್ಲಿ ಕೇಳಿಬಂದಿದೆ. ಈ ಸಂಬಂಧ ಮಕ್ಕಳ ಕಲ್ಯಾಣ ಸಮಿತಿ ಸದಸ್ಯನ ವಿರುದ್ಧ ಪ್ರಕರಣ ದಾಖಲಾಗಿದೆ.

ಸೂರ್ಯಕಾಂತ್ ಆರೋಪಕ್ಕೆ ಗುರಿಯಾದ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಗುವೊಂದನ್ನು ಬೈಕ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕಲಬುರ್ಗಿಯ ಜಿಲ್ಲಾ ಆಸ್ಪತ್ರೆಯಲ್ಲಿ ಎಚ್.ಐ.ವಿ. ಪೀಡಿತ ಮಹಿಳೆಗೆ ಮಗುವೊಂದು ಜನಿಸಿತ್ತು. ಆ ಮಹಿಳೆ ಮಗುವನ್ನು ತಾನು ಸಾಕಲಾಗದೆ, ಸರ್ಕಾರಕ್ಕೆ ಕೊಡಲು ನಿರ್ಧರಿಸಿದ್ದಳು. ಈ ಸಂಬಂಧ ಮಕ್ಕಳ ಕಲ್ಯಾಣ ಸಮಿತಿ ಸಭೆ ಸೇರಿ, ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳುವ ನಿರ್ಧಾರ ಕೈಗೊಂಡಿತ್ತು. ತಾಯಿಗೆ ಎಚ್.ಐ.ವಿ. ಇದ್ದ ಹಿನ್ನೆಲೆಯಲ್ಲಿ ಮಗುವಿಗೆ ಟೆಸ್ಟ್ ಮಾಡಿಸಲು, ಇತರೆ ಚಿಕಿತ್ಸೆ ಕೊಡಿಸಲು ಖಾಸಗಿ ಆಸ್ಪತ್ರೆಗೆ ಮಗುವನ್ನು ಕರೆದೊಯ್ಯುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಜಿಲ್ಲಾ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಬೈಕ್ ಮೇಲೆ ಮಗುವನ್ನು ಕರೆದೊಯ್ಯುವಾಗ ಮೈ ಮುಟ್ಟಿ ಅಶ್ಲೀಲವಾಗಿ ಮಾತನಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಬೈಕ್ ನಿಲ್ಲಿಸಿ ತಾನು ಕಿರುಚಿಕೊಂಡಾಗ, ಮತ್ತೊಮ್ಮೆ ಹೀಗೆ ಮಾಡುವುದಿಲ್ಲವೆಂದು ಹೇಳಿದ್ದ. ಆದರೆ ಈ ಹಿಂದೆಯೂ ಹಲವಾರು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಸಿ.ಡಬ್ಲ್ಯು.ಸಿ. ಅಧ್ಯಕ್ಷೆ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನು ಓದಿ: Dawood Ibrahim - ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು ನಿಜವಾ? ಅವರ ಸಹೋದರ ಏನಂತಾರೆ?

ಪ್ರಕರಣವನ್ನು ಮೊದಲು ಜಿಲ್ಲಾ ಮಟ್ಟದ ಮಹಿಳೆಯರ ವಿರುದ್ಧದ ಲೈಂಗಿಕ ದೌರ್ಜನ್ಯ ಸಮಿತಿಗೆ ಜಿಲ್ಲಾಧಿಕಾರಿಗಳು ಒಪ್ಪಿಸಿ ವಿಚಾರಣೆಗೆ ಸೂಚಿಸಿದ್ದರು. ಅದರ ವಿಚಾರಣೆ ಮುಗಿದಿದ್ದು, ಇದೀಗ ಸಿ.ಡಬ್ಲ್ಯು.ಸಿ. ಅಧ್ಯಕ್ಷೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರು ಮಹಿಳಾ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
First published: June 6, 2020, 2:36 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading