news18-kannada Updated:August 24, 2020, 8:11 PM IST
ವೆಂಟಿಲೇಟರ್ (ಸಂಗ್ರಹ ಚಿತ್ರ)
ಹಾಸನ; ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ, ಡೆಡಿಕೇಟೆಡ್ ಕೋವಿಡ್ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಆಮ್ಲಜನಕದ ಸರಬರಾಜಿಗೆ ಪೈಪ್ಲೈನ್ ಅಳವಡಿಕೆಯನ್ನು ಆ. 30 ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ವೈದ್ಯಕೀಯ ಆಮ್ಲಜನಕ ಉಪಕರಣಗಳ ಪೂರೈಕೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಗಿರೀಶ್ ಅವರು, ಈಗಾಗಲೇ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕದ ಅಗತ್ಯವಿರುವ ಸೋಂಕಿತರ ಸಂಖ್ಯೆ ಮಿತಿಗಿಂತಲೂ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕು ಆಸ್ಪತ್ರೆಗಳಲ್ಲಿಯೂ ಸಹ ವೆಂಟಿಲೇಟರ್ ಸೌಲಭ್ಯವುಳ್ಳ ಕೋವಿಡ್ ಚಿಕಿತ್ಸೆ ನೀಡಬೇಕಾದ ಪರಿಸ್ಥಿತಿ ಉಂಟಾಗುತ್ತಿರುವುದರಿಂದ ಜಿಲ್ಲೆಗೆ ಆಮ್ಲಜನಕ ಪೂರೈಕೆಯಲ್ಲಿ ಕೊರತೆ ಉಂಟಾಗದಂತೆ ನಿಗಾ ವಹಿಸಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದನ್ನು ಓದಿ: Coronavirus Karnataka Update : ರಾಜ್ಯದಲ್ಲಿ ಇಂದು ಒಂದೇ ದಿನ 5851 ಕೊರೋನಾ ಕೇಸ್ ಪತ್ತೆ, 130 ಮಂದಿ ಸಾವು
ಕೋವಿಡ್-19 ಸೊಂಕಿತರ ತಪಾಸಣೆಗೆ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕಯುಕ್ತ ಹಾಸಿಗೆಗಳನ್ನು ಅಳವಡಿಸಿದ ನಂತರ ಅದನ್ನು ನಿರ್ವಹಿಸಲು ಸಿಬ್ಬಂದಿಗೆ ಸೂಕ್ತ ತರಬೇತಿ ನೀಡುವಂತೆ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಆಮ್ಲಜನಕದ ಕೊರತೆಯುಂಟಾಗಬಾರದು. ಈ ನಿಟ್ಟಿನಲ್ಲಿ ಅಗತ್ಯ ಮಾನವ ಸಂಪನ್ಮೂಲ ಹಾಗೂ ಇತರೆ ವ್ಯವಸ್ಥೆಗಳನ್ನು ಸಮರ್ಪಕವಾಗಿ ಮಾಡಿಕೊಳ್ಳಬೇಕು, ಕೈಗಾರಿಕಾ ಆಮ್ಲಜನಕ ಹಾಗೂ ವೈದ್ಯಕೀಯ ಆಮ್ಲಜನಕ ಎರಡು ಒಂದೇ ರೀತಿಯದ್ದಾಗಿರುವುದರಿಂದ ತುರ್ತು ಸಂದರ್ಭಗಳಲ್ಲಿ ಕೈಗಾರಿಕಾ ಆಮ್ಲಜನಕವನ್ನು ವೈದ್ಯಕೀಯ ಆಮ್ಲಜನಕವನ್ನಾಗಿ ಪರಿವರ್ತಿಸಿ ಸಿಲಿಂಡರ್ಗಳನ್ನು ಭರ್ತಿಮಾಡಿಕೊಡಲು ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಿ, ಸಿಬ್ಬಂದಿಗಳ ಪ್ರತ್ಯೇಕ ತಂಡಗಳನ್ನು ರಚಿಸಿಕೊಳ್ಳಿ ಎಂದು ಅವರು ಸೂಚನೆಗಳನ್ನು ನೀಡಿದರು.
Published by:
HR Ramesh
First published:
August 24, 2020, 8:11 PM IST