HOME » NEWS » District » CONGRESS HAS NO FAITH IN THE BASIC ASPIRATIONS OF THE CONSTITUTION SAYS UNION MINISTER PRAHLAD JOSHI PTH HK

ಕಾಂಗ್ರೆಸ್‌ಗೆ ಸಂವಿಧಾನದ ಮೂಲ ಆಶಯಗಳ ಮೇಲೆ ನಂಬಿಕೆಯಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಮಾಜಿ ಸಚಿವರಾದ ವಿನಯ್ ಕುಲಕರ್ಣಿ ಹಾಗೂ ಎಂ.ಬಿ. ಪಾಟೀಲ್ ಅವರು ಬಿಜೆಪಿ‌ ಸೇರ್ಪಡೆಯಾಗುವ ಕುರಿತು ನಮ್ಮ‌ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ.

news18-kannada
Updated:October 26, 2020, 8:14 PM IST
ಕಾಂಗ್ರೆಸ್‌ಗೆ ಸಂವಿಧಾನದ ಮೂಲ ಆಶಯಗಳ ಮೇಲೆ ನಂಬಿಕೆಯಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
  • Share this:
ಹುಬ್ಬಳ್ಳಿ (ಅಕ್ಟೋಬರ್​. 26): ಕಾಂಗ್ರೆಸ್‌ಗೆ ಸಂವಿಧಾನದ ಮೂಲ ಆಶಯಗಳ ಮೇಲೆ ನಂಬಿಕೆಯಿಲ್ಲ. ಕಾಂಗ್ರೆಸ್ ಸತತವಾಗಿ‌ ಪ್ರಜಾಪ್ರಭುತ್ವದ ಅವಹೇಳನ ಮಾಡುತ್ತಾ ಬಂದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ದೀರ್ಘಕಾಲ ಆಡಳಿತ ನಡೆಸಿದರೂ ಯಾವುದೇ ಸಕಾರಾತ್ಮಕ ಬದಲಾವಣೆಯನ್ನು ತರಲು ಆಗಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಹುಲ್‌ ಗಾಂಧಿ ಚೀನಾದ ವಿಚಾರದಲ್ಲಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ. ಹದಿನೈದು ನಿಮಿಷದಲ್ಲಿ ಚೀನಾದ ಸೈನಿಕರನ್ನು ಹೊರಹಾಕುವ ಹೇಳಿಕೆ ನೀಡುತ್ತಾರೆ. ಅವರ ಪಕ್ಷದ ನಾಯಕರೇ ಅವರ ಹೇಳಿಕೆ ಕೇಳಿ‌ ನಗುತ್ತಾರೆ. ಅಕ್ಸ ಚೀನಾ ಮೊದಲು ನಮ್ಮ ಬಾರ್ಡರ್ ಆಗಿರಲಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ರಾಜೀವ್ ಗಾಂಧಿ ಚೀನಾ ಜೊತೆ ಹಲವು ಒಪ್ಪಂದ ಮಾಡಿಕೊಂಡಿದ್ದರು. ಸಂಸತ್ ಅಧಿವೇಶನದಲ್ಲಿ ಡೆಪ್ಯೂಟಿ ಸ್ಪೀಕರ್ ಮೇಲೆ ಹಲ್ಲೆ ಮಾಡಿ ಅಧಿವೇಶನ ತಡೆಯುವ ಯತ್ನ ನಡೆಯಿತು. ಕಾಂಗ್ರೆಸ್‌ಗೆ ಅಧಿಕಾರ ಇಲ್ಲದೆ ಬದುಕುವುದು ಗೊತ್ತಿಲ್ಲ ಎಂದವರು ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಕುರಿತು ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ.‌ ಅವರ ಹೇಳಿಕೆ ಬಗ್ಗೆ ಹೆಚ್ಚೇನು ಹೇಳಲ್ಲಾ. ರಾಜ್ಯದಲ್ಲಿ ನಡೆಯುತ್ತಿರುವ ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳು ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಹುಮತದ ಮೂಲಕ ಬಿಜೆಪಿ ಗೆದ್ದು ಬರಲಿದೆ.‌ ಬಿಹಾರದಲ್ಲಿಯೂ ಕೂಡ 3/4 ಬಹುಮತದಲ್ಲಿ ಎನ್‌ಡಿಎ ಗೆದ್ದು ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಮದ್ಯ ಪ್ರಿಯರಿಗೆ ಕಹಿ ಸುದ್ದಿ: ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ದಿನ ಸಿಗೋದಿಲ್ಲ ಲಿಕ್ಕರ್

ಮಾಜಿ ಸಚಿವರಾದ ವಿನಯ್ ಕುಲಕರ್ಣಿ ಹಾಗೂ ಎಂ.ಬಿ. ಪಾಟೀಲ್ ಅವರು ಬಿಜೆಪಿ‌ ಸೇರ್ಪಡೆಯಾಗುವ ಕುರಿತು ನಮ್ಮ‌ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಸಚಿವ ಜಗದೀಶ್ ಶೆಟ್ಟರ್ ಹಾಗೂ ನನ್ನ ಜೊತೆ ಯಾವುದೇ ನಾಯಕರು ಮಾತನಾಡಿಲ್ಲ‌. ನಮ್ಮ‌ಜೊತೆ ಚರ್ಚಿಸದೆ ಹೇಗೆ ಅವರನ್ನು ಪಕ್ಷಕ್ಕೆ‌ ಕರೆದುಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ನಾನು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು‌‌ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್​​ ಸಂತೋಷ್ ಜೊತೆಗೆ ಚರ್ಚಿಸಿದ್ದೇನೆ. ಪಕ್ಷ ಸೇರ್ಪಡೆ ಕುರಿತು ಯಾವುದೇ ವಿಚಾರಗಳು ಚರ್ಚೆಗೆ ಬಂದಿಲ್ಲ. ಮಾಧ್ಯಮದಲ್ಲಿ ವರದಿ ಬಂದಿದ್ದು ಮಾತ್ರ ನನಗೆ ಗೊತ್ತು ಎಂದವರು ಹೇಳಿದ್ದಾರೆ.
Published by: G Hareeshkumar
First published: October 26, 2020, 8:11 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories