HOME » NEWS » District » CONGRESS PROTESTED AGAINST CENTRAL GOVT FOR INCREASING PETROL AND DIESEL PRICE GNR

ಪೆಟ್ರೋಲ್​​-ಡೀಸೆಲ್​​ ಬೆಲೆ ಏರಿಕೆ - ಬೈಕ್​​ ಶವಯಾತ್ರೆ ಮಾಡಿ ಕೇಂದ್ರದ ವಿರುದ್ಧ ಕಾಂಗ್ರೆಸ್​​ ಪ್ರತಿಭಟನೆ

ಬಳಿಕ‌ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಕೂಡಲೇ ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿಮೆ ಮಾಡಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

news18-kannada
Updated:June 25, 2020, 3:58 PM IST
ಪೆಟ್ರೋಲ್​​-ಡೀಸೆಲ್​​ ಬೆಲೆ ಏರಿಕೆ - ಬೈಕ್​​ ಶವಯಾತ್ರೆ ಮಾಡಿ ಕೇಂದ್ರದ ವಿರುದ್ಧ ಕಾಂಗ್ರೆಸ್​​ ಪ್ರತಿಭಟನೆ
ಪ್ರಾತಿನಿಧಿಕ ಚಿತ್ರ
  • Share this:
ಧಾರವಾಡ(ಜೂ.25): ಮಾರಕ ಕೋವಿಡ್​-19 ಆರ್ಭಟದ ನಡುವೆಯೂ ಜನರ ಜೇಬಿಗೆ ಭಾರೀ ಕತ್ತರಿ ಬೀಳುತ್ತಿದೆ. ಕಳೆದ 20 ದಿನಗಳಿಂದ ದೇಶದಲ್ಲಿ ಸತತವಾಗಿ ಪೆಟ್ರೋಲ್-ಡೀಸೆಲ್‌ ಬೆಲೆಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ದೇಶದ ಮಹಾನಗರಗಳಲ್ಲಿ ತೈಲ ದರಗಳ ಬೆಲೆ ಪ್ರತಿನಿತ್ಯ ಏರುತ್ತಲೇ ಇದೆ. ಹೀಗೆಯೇ ಧಾರವಾಡದಲ್ಲೂ ಪೆಟ್ರೋಲ್​​-ಡೀಸೆಲ್​​ ಬೆಲೆ ಕಡಿಮೆಯೇನು ಇಲ್ಲ. 

ಆದರೀಗ, ನಿತ್ಯವು ಇಂಧನ ಬೆಲೆ ಹೆಚ್ಚಳವಾಗುತ್ತಿವುದನ್ನು ಖಂಡಿಸಿ ಧಾರವಾಡದಲ್ಲಿ ಬೈಕ್ ಶವಯಾತ್ರೆ ಮೂಲಕ ವಿಶಿಷ್ಠವಾಗಿ ಪ್ರತಿಭಟನೆ ನಡೆಸಲಾಗಿದೆ. ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೈಕ್ ಶವಯಾತ್ರೆ ಮಾಡುವ ಕೇಂದ್ರ ಸರ್ಕಾರದ ವಿರುದ್ಧ ವಿಭಿನ್ನವಾಗಿ ಪ್ರತಿಭಟಿಸಿದರು.

ಇದಕ್ಕೂ ಮೊದಲು ಪ್ರತಿಭಟನಾಕಾರರು ತಳ್ಳುಗಾಡಿಯಲ್ಲಿ ಬೈಕ್ ಇಟ್ಟುಕೊಂಡು ರ‍್ಯಾಲಿ ಮೂಲಕ ಡಿಸಿ ಕಚೇರಿಗೆ ಆಗಮಿಸಿದರು. ಬಳಿಕ ಬೈಕ್ ಶವಯಾತ್ರೆ ಮಾಡಿದರು. ದಿನದಿಂದ ದಿನಕ್ಕೆ ಇಂಧನ ಬೆಲೆ ಹೆಚ್ಚಾಗುತ್ತಿದೆ, ಇದರಿಂದ ವಾಹನ ಸವಾರರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಇದಕ್ಕೆಲ್ಲ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಆರೋಪ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು ಕೂಡಲೇ ಇಂಧನ ಬೆಲೆ‌ ಇಳೆಸುವಂತೆ ಒತ್ತಾಯ ಮಾಡಿದ್ದಾರೆ.
Youtube Video

ಇದನ್ನೂ ಓದಿ: ಬಿಜೆಪಿ ಸರ್ಕಾರದ ವಿರುದ್ಧ ಜೂ. 29ರಂದು ಕಾಂಗ್ರೆಸ್ ಪ್ರತಿಭಟನೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಹಿತಿ

ಬಳಿಕ‌ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಕೂಡಲೇ ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿಮೆ ಮಾಡಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
First published: June 25, 2020, 3:54 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories