CC Patil| ಸರ್ವಋತು ರಸ್ತೆ ನಿರ್ಮಾಣಕ್ಕೆ ಯತ್ನ, ಹೆಚ್ಚಿನ ಅನುದಾನಕ್ಕಾಗಿ ಅಧಿಕಾರಿಗಳೊಂದಿಗೆ ಚರ್ಚೆ; ಸಚಿವ ಸಿ.ಸಿ. ಪಾಟೀಲ್

ಮುಖ್ಯಮಂತ್ರಿಯವರು ಜಿಲ್ಲೆಯ ನೆರೆ ಪೀಡಿತ ಹಾಗೂ ಭೂ ಕುಸಿತ ಸ್ಥಳಗಳನ್ನು ಪರಿಶೀಲಿಸಿ ಜಿಲ್ಲೆಗೆ 210 ಕೋಟಿ ರೂ. ಅನುದಾನ ನೀಡಿದ್ದಾರೆ. ಸಚಿವ ಶಿವರಾಮ್ ಹೆಬ್ಬಾರ್‌ ನೇತೃತ್ವದಲ್ಲಿ ರಸ್ತೆ ಕುಸಿತದ ತೆರವು ಹಾಗೂ ಭೂಕುಸಿತ ಪ್ರದೇಶಗಳಲ್ಲಿ ಕಾಮಗಾರಿ ಭರದಿಂದ ಸಾಗುತ್ತಿದೆ ಎಂದು ಸಚಿವ ಸಿಸಿ ಪಾಟೀಲ್ ತಿಳಿಸಿದ್ದಾರೆ.

ಸಚಿವ ಸಿಸಿ ಪಾಟೀಲ್.

ಸಚಿವ ಸಿಸಿ ಪಾಟೀಲ್.

 • Share this:
  ಉತ್ತರ ಕನ್ನಡ (ಆಗಸ್ಟ್​ 30); ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸರ್ವಋತು ರಸ್ತೆಗಳ ಪುನರ್ನಿರ್ಮಾಣಕ್ಕೆ ಮತ್ತು ಇತರ ಕಾಮಗಾರಿಗಳಿಗೆ ಹೆಚ್ಚಿನ ಅನುದಾನಕ್ಕಾಗಿ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಲೋಕೋಪಯೋಗಿ ಸಚಿವರಾದ ಶ್ರೀ ಸಿ.ಸಿ. ಪಾಟೀಲ್ ಭರವಸೆ ನೀಡಿದ್ದಾರೆ. ಇಂದು ಕಾರ್ಮಿಕ ಸಚಿವ ಶ್ರೀ ಶಿವರಾಮ್ ಹೆಬ್ಬಾರ್‌ ಅವರೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮಕ್ಕೆ ಭೇಟಿ ನೀಡಿದ ಅವರು ಅತಿವೃಷ್ಟಿಯಿಂದ ಭೂ ಕುಸಿತವಾದ ಪ್ರದೇಶಗ ಳನ್ನು ಖುದ್ದಾಗಿ ಪರಿಶೀಲನೆ ನಡೆಸಿ ಮಾತನಾಡಿರುವ ಸಚಿವ ಸಿಸಿ ಪಾಟೀಲ್,

  "ಬೆಂಗಳೂರಿನಿಂದ ನಿರ್ಣಯ ತೆಗೆದುಕೊಳ್ಳುದಕ್ಕೂ ಹಾಗೂ ಸ್ಥಳ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ. ಈಗಾಗಲೇ ಮುಖ್ಯಮಂತ್ರಿಯವರು ಜಿಲ್ಲೆಯ ನೆರೆ ಪೀಡಿತ ಹಾಗೂ ಭೂ ಕುಸಿತ ಸ್ಥಳಗಳನ್ನು ಪರಿಶೀಲಿಸಿ ಜಿಲ್ಲೆಗೆ 210 ಕೋಟಿ ರೂ. ಅನುದಾನ ನೀಡಿದ್ದಾರೆ. ಸಚಿವ ಶಿವರಾಮ್ ಹೆಬ್ಬಾರ್‌ ಅವರ ನೇತೃತ್ವದಲ್ಲಿ ರಸ್ತೆ ಕುಸಿತದ ತೆರವು ಹಾಗೂ ಭೂಕುಸಿತ ಪ್ರದೇಶಗಳಲ್ಲಿ ಕಾಮಗಾರಿ ಭರದಿಂದ ಸಾಗುತಿದ್ದು, ಪಿ.ಡಬ್ಲ್ಯೂ. ಡಿ.ಇಲಾಖೆಯಿಂದ ಕಳಚೆ ಹಾಗೂ ಹಾನಿಯಾದ ಪ್ರದೇಶದಲ್ಲಿ ಸರ್ವಋತು ರಸ್ತೆ ನಿರ್ಮಾಣ ಮಾಡಲಾಗುವುದು ಹಾಗೂ ಹೆಚ್ಚಿನ ಅನುದಾನಕ್ಕಾಗಿ ಕೂಡಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು" ಎಂದರು.

  ಸಚಿವ ಶಿವರಾಮ್ ಹೆಬ್ಬಾರ್ ಮಾತನಾಡಿ, "ಜನರು ಭಯ ಪಡುವ ಅಗತ್ಯವಿಲ್ಲ. ಆದಷ್ಟು ಬೇಗ ಮೂಲಸೌಕರ್ಯ ಹಾಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು" ಎಂದು ಹೇಳಿದರು.

  ಇದನ್ನೂ ಓದಿ: School Reopen| ಪಾಸಿಟಿವಿಟಿ ದರ ಶೇ.2 ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ 6 ರಿಂದ 8ನೇ ತರಗತಿ ಓಪನ್; ಸಿಎಂ ಸಭೆಯಲ್ಲಿ ತೀರ್ಮಾನ

  ಜಿಲ್ಲೆಗೆ ಆಗಮಿಸಿದ ಲೋಕೋಪಯೋಗಿ ಸಚಿವರ ಸಹಕಾರದೊಂದಿಗೆ ಜಿಲ್ಲೆಯ ಲೋಕೋಪಯೋಗಿ ಅಧಿಕಾರಿಗಳು ಮತ್ತು ಅರಣ್ಯ ಅಧಿಕಾರಿಗಳು ರಸ್ತೆ ತೆರವು ಕಾರ್ಯದಲ್ಲಿ ಸಾಕಷ್ಟು ಶ್ರಮಿಸಿದ್ದು ಅವರಿಗೆ ಕೃತಜ್ಞತೆ ಸಲ್ಲಿಸಿದರು. ಸಚಿವರು ಭೇಟಿ ನೀಡಿದ ಪ್ರದೇಶಗಳಲ್ಲಿ ಶಿರಸಿಯ ಸಹಾಯಕ ಆಯುಕ್ತರಾದ ಆಕೃತಿ ಬನ್ಸಾಲ್, ಯಲ್ಲಾಪುರ ಮತ್ತು ಶಿರಸಿ ತಾಲೂಕಿನ ತಹಶೀಲ್ದಾರ್‌ರು ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದು ಅಗತ್ಯ ಮಾಹಿತಿ ನೀಡಿದರು.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: