ಕೊರೋನಾ ಸಂಕಷ್ಟ; ಕಡೂರು ಖಾಸಗಿ ಶಾಲೆಯ ಶಿಕ್ಷಕರ ನೆರವಿಗೆ ಧಾವಿಸಿದ ಹಳೇ ವಿದ್ಯಾರ್ಥಿಗಳು

ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದ ಬ್ರೈಟ್ ಫ್ಯೂಚರ್ ಇಂಗ್ಲೀಷ್ ಸ್ಕೂಲಿನ ಹಳೇ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ನೆರವಿಗೆ ಧಾವಿಸಿದ್ದಾರೆ. ಕೊರೋನಾ ಕಾಲದಲ್ಲಿ ಕಳೆದ ಐದಾರು ತಿಂಗಳಿಂದ ಖಾಸಗಿ ಶಾಲೆಯ ಶಿಕ್ಷಕರು ತೀವ್ರ ಸಂಕಷ್ಟದಲ್ಲಿದ್ದರು. ಶಾಲಾ ಆಡಳಿತ ಮಂಡಳಿ ಕೂಡ ಶಿಕ್ಷಕರಿಗೆ ಅರ್ಧ ಸಂಬಳ ನೀಡಿತ್ತು. ಹಾಗಾಗಿ, ಹಳೇ ವಿದ್ಯಾರ್ಥಿಗಳು ಶಿಕ್ಷಕರ ನೆರವಿಗೆ ಧಾವಿಸಿದ್ದಾರೆ.

ಶಿಕ್ಷಕರಿಗೆ ಸಹಾಯ ಮಾಡಿದ ವಿದ್ಯಾರ್ಥಿಗಳು.

ಶಿಕ್ಷಕರಿಗೆ ಸಹಾಯ ಮಾಡಿದ ವಿದ್ಯಾರ್ಥಿಗಳು.

  • Share this:
ಚಿಕ್ಕಮಗಳೂರು; ಕೊರೋನಾ ಕಾರಣದಿಂದಾಗಿ ಕಳೆದ ಆರು ತಿಂಗಳಿನಿಂದ ಇಡೀ ದೇಶ ಸ್ತಬ್ಧವಾಗಿದೆ. ಎಲ್ಲಾ ವ್ಯವಹಾರಗಳು, ಉದ್ದಿಮೆಗಳು ಅಷ್ಟೇ ಏಕೆ ಸರ್ಕಾರಿ ಸೇವಾ ಕ್ಷೇತ್ರಗಳೂ ಸಹ ಕೆಲಸವಿಲ್ಲದೆ ಬಾಗಿಲು ಎಳೆದುಕೊಂಡಿವೆ. ಪರಿಣಾಮ ಅನೇಕರು ಉದ್ಯೋಗ ಕಳೆದುಕೊಂಡು ಸಂಕಷ್ಟದಲ್ಲಿ ದಿನದೂಡುವಂತಾಗಿದೆ. ಕೊರೋನಾ ಕಾರಣದಿಂದಾಗಿ ಹೀಗೆ ಬಾಗಿಲು ಎಳೆದುಕೊಂಡ ಕ್ಷೇತ್ರಗಳ ಪೈಕಿ ಪ್ರಮುಖ ಕ್ಷೇತ್ರ ಶಿಕ್ಷಣ ಕ್ಷೇತ್ರ. ಈ ಸಾಲಿನ ಶೈಕ್ಷಣಿಕ ವರ್ಷ ಆರಂಭವಾದರೂ ಸಹ ಈವರೆಗೆ ಶಾಲಾ ಕಾಲೇಜುಗಳು ತೆರೆದಿಲ್ಲ. ಇಂತಹ ಸಂದರ್ಭದಲ್ಲಿ ಸರ್ಕಾರಿ ಶಾಲೆಯಲ್ಲಿ ಕೆಲಸದಲ್ಲಿರುವ ಶಿಕ್ಷಕ ವೃಂದಕ್ಕೆ ಯಾವುದೇ ಆರ್ಥಿಕ ಸಮಸ್ಯೆ ಇಲ್ಲ. ಆದರೆ, ಖಾಸಗಿ ಶಾಲಾ ಶಿಕ್ಷಕರ ಪಾಡು ಪಾತ್ರ ಹೇಳತೀರದಾಗಿದೆ. ಹೀಗೆ ಕೊರೋನಾದಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಇದೀಗ ಅವರ ಹಳೆ ವಿದ್ಯಾರ್ಥಿಗಳೇ ನೆರವಾಗಿರುವ ಮಾನವೀಯ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾಗಿದೆ. 

ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದ ಬ್ರೈಟ್ ಫ್ಯೂಚರ್ ಇಂಗ್ಲೀಷ್ ಸ್ಕೂಲಿನ ಹಳೇ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ನೆರವಿಗೆ ಧಾವಿಸಿದ್ದಾರೆ. ಕೊರೋನಾ ಕಾಲದಲ್ಲಿ ಕಳೆದ ಐದಾರು ತಿಂಗಳಿಂದ ಖಾಸಗಿ ಶಾಲೆಯ ಶಿಕ್ಷಕರು ತೀವ್ರ ಸಂಕಷ್ಟದಲ್ಲಿದ್ದರು. ಶಾಲಾ ಆಡಳಿತ ಮಂಡಳಿ ಕೂಡ ಶಿಕ್ಷಕರಿಗೆ ಅರ್ಧ ಸಂಬಳ ನೀಡಿತ್ತು. ಹಾಗಾಗಿ, ಹಳೇ ವಿದ್ಯಾರ್ಥಿಗಳು ಶಿಕ್ಷಕರ ನೆರವಿಗೆ ಧಾವಿಸಿದ್ದಾರೆ.

ಇದನ್ನೂ ಓದಿ : ಕನ್ಹಯ್ಯ ಕುಮಾರ್ ಪೌರತ್ವ ರದ್ದುಗೊಳಿಸಿ ಎಂದು ಅರ್ಜಿ ಸಲ್ಲಿಸಿದ್ದ ವ್ಯಕ್ತಿಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್‌

ಈ ಶಾಲೆಯಲ್ಲಿ ಓದಿದ್ದ ವಿದ್ಯಾರ್ಥಿಗಳು ಅಮೆರಿಕಾ, ಜರ್ಮನಿಯಲ್ಲಿ ಉತ್ತಮ ಕೆಲಸದಲ್ಲಿದ್ದಾರೆ. ಕೆಲವರು ವೈದ್ಯರು, ಇಂಜಿನಿಯರ್ ಆಗಿದ್ದಾರೆ. ಉತ್ತಮ ಸ್ಥಾನದಲ್ಲಿರೋ ಸುಮಾರು 30 ವಿದ್ಯಾರ್ಥಿಗಳು ಹಣ ಹಾಕಿ ಇದೀಗ ಶಿಕ್ಷಕರ ನೆರವಿಗೆ ಬಂದಿದ್ದಾರೆ. ಇದೇ ವೇಳೆ ಶಾಲೆಯ ಭೋದಕೇತರ ವರ್ಗದ 18 ಜನರಿಗೂ ಒಂದು ತಿಂಗಳ  ಸಾಮಾಗ್ರಿಯ ಕಿಟ್‌ ಜೊತೆಗೆ ಎಲ್ಲರಿಗೂ ಹಣವನ್ನೂ ಸಹ ನೀಡಿ ಸಹಾಯ ಮಾಡಿದ್ದಾರೆ. ವಿದ್ಯಾರ್ಥಿಗಳ ಪ್ರೀತಿ ಹಾಗೂ ಗೌರವಕ್ಕೆ ಆಡಳಿತ ಮಂಡಳಿ, ಶಿಕ್ಷಕ ವೃಂದ ಸಹ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.

ಒಟ್ಟಾರೆ, ಕೊರೊನಾ ಕಾಲದಲ್ಲಿ ಖಾಸಗಿ ಶಾಲೆಯ ಶಿಕ್ಷಕರು ಪರಿಸ್ಥಿತಿ ಹೇಳತೀರದಂತಾಗಿತ್ತು. ಕೆಲಸವಿಲ್ಲದೆ ಸಂಬಳವಿಲ್ಲದೆ ಬದುಕು ದುಸ್ಥರವಾಗಿತ್ತು. ಇಂತಹ ಸಮಯದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಹಳೆ ವಿದ್ಯಾರ್ಥಿಗಳ ಕಾರ್ಯಕ್ರಮದ ಅಂಗವಾಗಿ ಇಲ್ಲಿನ ವಿದ್ಯಾರ್ಥಿಗಳು ಶಿಕ್ಷಕರ ನೆರವಿಗೆ ದಾವಿಸಿರೋದು ಈ ಮೂಲಕ ತಮ್ಮ ಗುರು ವೃಂದಕ್ಕೆ ಗೌರವ ಸಮರ್ಪಿಸಿರುವುದು ಸಮಾಜಕ್ಕೆ ಮಾದರಿಯಾಗಿದೆ.
Published by:MAshok Kumar
First published: