ಕೊರೋನಾ ವೈದ್ಯಕೀಯ ಉಪಕರಣ ಖರೀದಿ ಭ್ರಷ್ಟಾಚಾರವನ್ನು ಸಿಬಿಐಗೆ ವಹಿಸಿ; ಬಿಎಸ್‌ಪಿ ಆಗ್ರಹ

ಕೊರೋನಾ ಸಂಕಷ್ಟ ಕಾಲದಲ್ಲಿ ವೈದ್ಯಕೀಯ ಉಪಕರಣ ಖರೀದಿಯಲ್ಲಿ ಸರ್ಕಾರ 2,100 ಕೋಟಿ ರೂಪಾಯಿ ವ್ಯಾಪಕ ಭ್ರಷ್ಟಾಚಾರ ಮಾಡಿದೆ. ಈ ಕುರಿತು ಎಲ್ಲಾ ವಿರೋಧ ಪಕ್ಷಗಳು ಸರ್ಕಾರವನ್ನು ಕಟು ಟೀಕೆಗೆ ಒಳಪಡಿಸುತ್ತಿವೆ. ಹೀಗಾಗಿ ಈ ಹಗರಣದ ತನಿಖೆಯನ್ನು ಸಿಬಿಐ ಗೆ ವಹಿಸಬೇಕು ಎಂದು ಬಿಎಸ್‌ಪಿ ಪಕ್ಷದ ರಾಜ್ಯಾಧ್ಯಕ್ಷ ಕೃಷ್ಟಮೂರ್ತಿ ಒತ್ತಾಯಿಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿರುವ ರಾಜ್ಯ ಬಿಎಸ್‌ಪಿ ನಾಯಕರು.

ಪತ್ರಿಕಾಗೋಷ್ಠಿ ನಡೆಸಿರುವ ರಾಜ್ಯ ಬಿಎಸ್‌ಪಿ ನಾಯಕರು.

  • Share this:
ರಾಮನಗರ: ರಾಜ್ಯ ಸರ್ಕಾರ ಕೊರೋನಾ ವೈದ್ಯಕೀಯ ಉಪಕರಣ ಖರೀದಿಯಲ್ಲಿ ನಡೆಸಿರುವ 2,100  ಕೋಟಿ ರೂಪಾಯಿ ಹಗರಣವನ್ನು ಸಿಬಿಐ ತನಿಖೆ ಮಾಡಬೇಕು. ಸತ್ಯಾಂಶವನ್ನು ಬಯಲಿಗೆ ಎಳೆಯಬೇಕು ಎಂದು ರಾಜ್ಯ ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ಆಗ್ರಹಿಸಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಬಿಎಸ್‌ಪಿ ಪಕ್ಷದ ರಾಜ್ಯಾಧ್ಯಕ್ಷ ಕೃಷ್ಟಮೂರ್ತಿ, "ಕೊರೋನಾ ಸಂಕಷ್ಟ ಕಾಲದಲ್ಲಿ ವೈದ್ಯಕೀಯ ಉಪಕರಣ ಖರೀದಿಯಲ್ಲಿ ಸರ್ಕಾರ 2,100 ಕೋಟಿ ರೂಪಾಯಿ ವ್ಯಾಪಕ ಭ್ರಷ್ಟಾಚಾರ ಮಾಡಿದೆ. ಈ ಕುರಿತು ಎಲ್ಲಾ ವಿರೋಧ ಪಕ್ಷಗಳು ಸರ್ಕಾರವನ್ನು ಕಟು ಟೀಕೆಗೆ ಒಳಪಡಿಸುತ್ತಿವೆ. ಹೀಗಾಗಿ ಈ ಹಗರಣದ ತನಿಖೆಯನ್ನು ಸಿಬಿಐ ಗೆ ವಹಿಸಬೇಕು" ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಕೋವಿಡ್ ಚಿಕಿತ್ಸೆಗೆ 50 ಹಾಸಿಗೆಯುಳ್ಳ ಹಾನಗಲ್ ತಾಲೂಕು ಆಸ್ಪತ್ರೆ ಒಂದು ವಾರದಲ್ಲಿ ಸಿದ್ಧ; ಸಿಇಓ ರಮೇಶ್‌ ದೇಸಾಯಿ

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯ ಕುರಿತು ಕಿಡಿಕಾರಿರುವ ಅವರು, "ಕಳೆದ ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ 10.5 ರೂ, ಹಾಗೂ ಡಿಸೇಲ್ 11.5 ರೂ ಏರಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರ ಕೂಡಲೇ ತೈಲ ಬೆಲೆಯನ್ನು ಇಳಿಸಬೇಕು. ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡಲು ಹೊರಟಿರುವ ಯತ್ನವನ್ನು ನಿಲ್ಲಿಸಬೇಕು. ಅಲ್ಲದೆ, ರಾಜ್ಯ ಸರ್ಕಾರ ದೇಶದ ಶ್ರೀಮಂತರಿಗೆ ರೈತನ್ನು ಬಲಿಕೊಡಲು ತಂದಿರುವ ಭೂ ಸುಧಾರಣೆ ಕಾಯ್ದೆಯನ್ನು ಹಿಂಪಡೆಯಬೇಕು" ಎಂದು ಬಿಎಸ್‌ಪಿ ಪಕ್ಷದ ರಾಜ್ಯಾಧ್ಯಕ್ಷ ಕೃಷ್ಟಮೂರ್ತಿ ಆಗ್ರಹಿಸಿದ್ದಾರೆ.
Published by:MAshok Kumar
First published: