ಪಾಸಿಟಿವಿಟಿ ರೇಟ್ ಕಡಿಮೆಯಾಗಿದ್ರೂ ಧಾರವಾಡ ಜಿಲ್ಲೆಗಿಲ್ಲ ಅನ್​ಲಾಕ್​ ಭಾಗ್ಯ; ಸರ್ಕಾರದ ನಿರ್ಧಾರಕ್ಕೆ ಅತೃಪ್ತಿ!

ಹುಬ್ಬಳ್ಳಿಯಲ್ಲಿ ಸೆಮಿ ಲಾಕ್ ಡೌನ್ ಪ್ರಕ್ರಿಯೆಯನ್ನು ಪೊಲೀಸರು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದ್ದಾರೆ. ಅನ್ ಲಾಕ್ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿದೇ ಇರೋದಕ್ಕೆ ಧಾರವಾಡ ಜಿಲ್ಲೆ ಜನರ ಬೇಸರ ವ್ಯಕ್ತಪಡಿಸಿದೆ. ಸರ್ಕಾರದ ನಿರ್ಧಾರದಿಂದ ವರ್ತಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಾತಿನಿಧಿಕ ಚಿತ್ರ (ಧಾರವಾಡ ಜಿಲ್ಲೆ).

ಪ್ರಾತಿನಿಧಿಕ ಚಿತ್ರ (ಧಾರವಾಡ ಜಿಲ್ಲೆ).

  • Share this:
ಹುಬ್ಬಳ್ಳಿ; ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಇಳಿಮುಖವಾಗುತ್ತಿದೆ. ಸೋಂಕಿತರ ಸಂಖ್ಯೆ ಎರಡಂಕಿಗೆ ಬಂದಿದ್ದು, ಪಾಸಿಟಿವಿಟಿ ದರ ಐದಕ್ಕಿಂತ ಕೆಳಗಿದೆ. ಆದ್ರೆ ರಾಜ್ಯ ಸರ್ಕಾರ ಪ್ರಕಟಿಸಿರೋ ಅನ್ ಲಾಕ್ ಜಿಲ್ಲೆಗಳ ಪಟ್ಟಿಯಲ್ಲಿ ಧಾರವಾಡ ವನ್ನು ಸೇರಿಸಿಲ್ಲ. ಇದರಿಂದಾಗಿ ಜನರಿಗೆ ಬೇಸರಗೊಂಡಿದ್ದಾರೆ. ಇದಕ್ಕಿಂತಲೂ ಮುಖ್ಯವಾಗಿ ವರ್ತಕರು ತೀವ್ರ ಅಸಮಾಧಾನಗೊಂಡಿದ್ದು, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ, ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ಆಗ್ರಹಿಸಿದ್ದಾರೆ. ಧಾರವಾಡ ಜಿಲ್ಲೆಯ ಪಾಸಿಟಿವಿಟಿ ರೇಟ್ 2.5 ಗೆ ಇಳಿಕೆ ಕಂಡಿದ್ದರೂ ಲಾಕ್ ಡೌನ್ ನಿಂದ ವಿನಾಯಿತಿ ಸಿಕ್ಕಿಲ್ಲ. ಧಾರವಾಡ ಜಿಲ್ಲೆಯ ವಾರದ ಪಾಸಿಟಿವಿಟಿ ರೇಟ್ 4.15 ರಷ್ಟಿದೆ. ನಿನ್ನೆಯ ಪಾಸಿಟಿವಿಟಿ ದರ 2.5 ರಷ್ಟಿದೆ. ಶೇ. 5 ಕ್ಕಿಂತ ಕಡಿಮೆ ಪಾಸಿಟಿವಿಟಿ ಇರೋ ಕಡೆ ರಾಜ್ಯ ಸರ್ಕಾರ ಲಾಕ್ ಡೌನ್ ನಲ್ಲಿ ಸಡಿಲಿಕೆ ನೀಡಿದೆ. ನಾಳೆಯಿಂದ ಕೆಲ ಜಿಲ್ಲೆಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭಗೊಳ್ಳುತ್ತಿದೆ.

ಆದರೆ ಧಾರವಾಡ ಜಿಲ್ಲೆಯಲ್ಲಿ ಯಥಾಸ್ಥಿತಿ ಸೆಮಿ ಲಾಕ್ ಡೌನ್ ಮುಂದುವರಿಯಲಿದೆ. ಬೆಳಿಗ್ಗೆ 6 ಗಂಟೆಯಿಂದ ಮದ್ಯಾಹ್ನ 2 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಕಿರಾಣಿ, ಹಾಲು, ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮದ್ಯದ ಅಂಗಡಿ, ಮಾಂಸ, ಹೋಟೆಲ್ ಪಾರ್ಸೆಲ್ ಹಾಗೂ ಬೀದಿ ಬದಿಯ ವ್ಯಾಪಾರಕ್ಕೆ ಅನುಮತಿ ನೀಡಲಾಗಿದೆ. ರಾತ್ರಿ ಕರ್ಫ್ಯು ಮತ್ತು ವಾರಾಂತ್ಯದ ಲಾಕ್ ಡೌನ್ ಯಥಾ ರೀತಿ ಮುಂದುವರಿಯಲಿದೆ.

ಹುಬ್ಬಳ್ಳಿಯಲ್ಲಿ ಸೆಮಿ ಲಾಕ್ ಡೌನ್ ಪ್ರಕ್ರಿಯೆಯನ್ನು ಪೊಲೀಸರು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದ್ದಾರೆ. ಅನ್ ಲಾಕ್ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿದೇ ಇರೋದಕ್ಕೆ ಧಾರವಾಡ ಜಿಲ್ಲೆ ಜನರ ಬೇಸರ ವ್ಯಕ್ತಪಡಿಸಿದೆ. ಸರ್ಕಾರದ ನಿರ್ಧಾರದಿಂದ ವರ್ತಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ವರ್ತಕರು ಭೇಟಿಯಾಗಿದ್ದಾರೆ. ಚೇಂಬರ್ ಆಫ್ ಕಾಮರ್ಸ್ ನೇತೃತ್ವದಲ್ಲಿ ಹುಬ್ಬಳ್ಳಿಯ ಮಥುರಾ ಕಾಲೊನಿಯಲ್ಲಿರುವ ಜಗದೀಶ್ ಶೆಟ್ಟರ್ ನಿವಾಸಕ್ಕೆ ವರ್ತಕರು ಭೇಟಿಯಾಗಿದ್ದಾರೆ. ಕಿರಾಣಿ ವರ್ತಕರ ಜೊತೆ ಬಟ್ಟೆ, ಬಂಗಾರ, ಪಾತ್ರೆ ಇತ್ಯಾದಿ ಅಂಗಡಿಗಳ ಮಾಲೀಕರು ಭೇಟಿಯಾಗಿದ್ದಾರೆ. ಸರ್ಕಾರದ ಧೋರಣೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: Explained| ಪ್ರಧಾನಿ ಮೋದಿ ಅವಧಿಯಲ್ಲಾದ ಐದು ಮಹಾ ಪ್ರಮಾದಗಳು; ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದ ಬಿಜೆಪಿ!

ಕಳೆದ ಒಂದು ವಾರದ ಕೋವಿಡ್ ಪ್ರಕರಣಗಳನ್ನು ತೆಗೆದುಕೊಂಡಾಗ ಧಾರವಾಡ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ 5 ಕ್ಕಿಂತ ಕಡಿಮೆ ಇದೆ. ಸರ್ಕಾರದ ಮಾರ್ಗಸೂಚಿಯ ಪ್ರಕಾರ ಲಾಕ್ ಡೌನ್ ತೆರವುಗೊಳಿಸಬೇಕಿತ್ತು. ಆದರೆ ನಿನ್ನೆ ಮುಖ್ಯಮಂತ್ರಿಗಳು ಪ್ರಕಟಿಸಿದ ಅನ್ ಲಾಕ್ ಪ್ರಕ್ರಿಯೆ ಜಿಲ್ಲೆಗಳ ಪಟ್ಟಿಯಲ್ಲಿ ಧಾರವಾಡ ಇಲ್ಲ. ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ವರ್ತಕರು ಆರೋಪಿಸಿದ್ದಾರೆ. ಇತರೆ ಜಿಲ್ಲೆಗಳಂತೆ ಇಲ್ಲಿಯೂ ಲಾಕ್ ಡೌನ್ ತೆರವುಗೊಳಿಸುವಂತೆ ಜಗದೀಶ್ ಶೆಟ್ಟರ್ ಅವರನ್ನು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Indian Economi| ಆರ್ಥಿಕತೆಯನ್ನು ಕಾಡುತ್ತಿದೆ ಕೊರೋನಾ, ಬಡವರ ತವರಾಯಿತೇ ಭಾರತ? ಇಲ್ಲಿದೆ ಜಿಡಿಪಿ ಕುಸಿತದ ವಾಸ್ತವ ಚಿತ್ರಣ!

ಈ ಕುರಿತು ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್, ರಾಜ್ಯ ಸರ್ಕಾರದ ನಿರ್ಧಾರ ನನಗೂ ಅಚ್ಚರಿ ತಂದಿದೆ. ಸರ್ಕಾರದ ನಿಯಮಗಳ ಪ್ರಕಾರವೇ ಧಾರವಾಡ ಜಿಲ್ಲೆ ಅನ್ ಲಾಕ್ ಪ್ರಕ್ರಿಯೆಗೆ ಅರ್ಹ ಗೊಂಡಿದೆ. ಕೊರೋನಾ ಸೋಂಕು ಹೆಚ್ಚಿದ್ದಾಗ ಎಲ್ಲವನ್ನೂ ಬಂದ್ ಮಾಡೋಣ. ಆದರೆ ಸೋಂಕು ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಅಂಗಡಿಗಳನ್ನು ತೆಗೆಯಲು ಅವಕಾಶ ನೀಡಬೇಕಾಗುತ್ತದೆ.

ಈ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡ್ತೇನೆ. ಅಧಿಕಾರಿಗಳ ಸಭೆ ನಡೆಸಿ ರಾಜ್ಯ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡ್ತೇನೆ. ಲಾಕ್ ಡೌನ್ ಪ್ರಕ್ರಿಯೆ ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ. ಶೆಟ್ಟರ್ ಭರವಸೆಯ ನಂತರ ವರ್ತಕರು ಅಲ್ಲಿಂದ ಹೊರಟು ಹೋಗಿದ್ದಾರೆ. ಒಟ್ಟಾರೆ ಸರ್ಕಾರದ ನಿರ್ಧಾರದಿಂದಾಗಿ ಜನತೆಯಲ್ಲಿ ಗೊಂದಲ ಸೃಷ್ಟಿಯಾಗಿದ್ದು, ವರ್ತಕರ ಅತೃಪ್ತಿಗೂ ದಾರಿ ಮಾಡಿಕೊಟ್ಟಿದೆ.

(ವರದಿ - ಶಿವರಾಮ ಅಸುಂಡಿ)
Published by:MAshok Kumar
First published: