Unlock| ಇಳಿಯುತ್ತಿರುವ ಕೊರೋನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್​ಡೌನ್ ಸಡಿಲಿಕೆ!

ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ  ಭಕ್ತರ ಹಲವು ವಾಹನಗಳನ್ನು ಪೊಲೀಸರು ವಾಪಾಸು ಕಳುಹಿಸಿದ್ದಾರೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಕಾರ್ಯಾಚರಣೆ ಮಾಡಿದ್ದಾರೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

  • Share this:
ದಕ್ಷಿಣ ಕನ್ನಡ  (ಜೂನ್ 20); ಜಿಲ್ಲೆಯಲ್ಲಿ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಜೂನ್ 21ರಿಂದ ಬೆಳಗ್ಗೆ  7ಗಂಟೆಯಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಅನ್ ಲಾಕ್ 1.0 ಭಾಗವಾಗಿ ಅಗತ್ಯವಸ್ತು ಖರೀದಿ ಅವಧಿ ವಿಸ್ತರಣೆ ಮಾಡಲಾಗಿದೆ. ಆದರೆ ಜಿಲ್ಲೆಯಾದ್ಯಂತ ರಾತ್ರಿ 7 ಗಂಟೆಯಿಂದ, ಬೆಳಗ್ಗೆ 7 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ. ವಾರಾಂತ್ಯದ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆ. 7ರವರೆಗೆ ವೀಕೆಂಡ್ ಕರ್ಪ್ಯೂ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಆದರೆ, ಜಿಲ್ಲೆಯಾದ್ಯಂತ ಯಾವುದೇ ಬಸ್ ಸಂಚಾರಕ್ಕೂ ಅನುಮತಿ ‌ನೀಡಲಾಗಿಲ್ಲ. ಜೂನ್ 21ರಿಂದ ಜುಲೈ 5ರ ಸಂಜೆಯವರೆಗೂ ಆದೇಶ ವಿಸ್ತರಿಸಲಾಗಿದೆ. ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿಬದಿ ವ್ಯಾಪಾರ ಮತ್ತು ಮದ್ಯ ಪಾರ್ಸೆಲ್ ಗಷ್ಟೇ ಮಧ್ಯಾಹ್ನ 1ರವರೆಗೆ ಅವಕಾಶ ನೀಡಲಾಗಿದೆ.

ಆದರೆ ಜಿಲ್ಲೆಯಲ್ಲಿ ಪಾರ್ಕ್ ಮತ್ತು ಸಾರ್ವಜನಿಕ ಉದ್ಯಾನ ತೆರೆಯಲು ಅವಕಾಶ ಇಲ್ಲ. ನಿರ್ಮಾಣ ಚಟುವಟಿಕೆ ಮತ್ತು ಸ್ಟೀಲ್, ಸಿಮೆಂಟ್ ಅಂಗಡಿಗಳಿಗೆ ಅನುಮತಿ ನೀಡಲಾಗಿದೆ. ಇನ್ನುಳಿದಂತೆ ಅಟೋ ರಿಕ್ಷಾ ಮತ್ತು ಟ್ಯಾಕ್ಸಿಯಲ್ಲಿ ಇಬ್ಬರು ಪ್ರಯಾಣಿಕರ ಸಹಿತ ಸಂಚರಿಸಬಹುದಾಗಿದೆ. ಕೆಎಸ್ಆರ್ ಟಿಸಿ ಬಸ್ಸು ಜಿಲ್ಲೆಯಿಂದ ಹೊರಗೆ ಹಾಗೂ ಒಳಗೆ ಓಡಾಟವಿಲ್ಲ . ಹೊರ ಜಿಲ್ಲೆಯಿಂದಲೂ ಕೆಎಸ್ ಆರ್ ಟಿಸಿ ಬಸ್ಸು ಓಡಾಟಕ್ಕೆ ಅವಕಾಶ ಇಲ್ಲ ಅಂತಾ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಇನ್ನು ಲಾಕ್ ಡೌನ್ ನಡುವೆಯೂ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ದೇವಸ್ಥಾನಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ನೊಟೀಸ್ ಕೊಟ್ಟ ಹಿನ್ನಲೆಯಲ್ಲಿ ತೆರೆದಿದ್ದ ದೇವಸ್ಥಾನಗಳು ಮತ್ತೆ ಬಾಗಿಲು ಮುಚ್ಚಿವೆ. ಲಾಕ್ ಡೌನ್ ಇದ್ದರೂ ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನಗಳಿಗೆ ಬರುವ ಭಕ್ತರ ವಾಹನವನ್ನು ಸೀಝ್ ಮಾಡಲು ಜಿಲ್ಲಾಧಿಕಾರಿ ಆದೇಶ ನೀಡಿದ ಹಿನ್ನಲೆಯಲ್ಲಿ ಪೊಲೀಸರು ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ವನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಶ್ರೀ  ಕ್ಷೇತ್ರ ಧರ್ಮಸ್ಥಳ ಕ್ಕೆ ಬರುವ  ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಭಕ್ತರ ತಡೆಗೆ ಪೋಲೀಸರು ಕಾರ್ಯಾಚರಣೆಗಿಳಿದಿದ್ದಾರೆ.

ಇದನ್ನೂ ಓದಿ: Indian Economi| ಆರ್ಥಿಕತೆಯನ್ನು ಕಾಡುತ್ತಿದೆ ಕೊರೋನಾ, ಬಡವರ ತವರಾಯಿತೇ ಭಾರತ? ಇಲ್ಲಿದೆ ಜಿಡಿಪಿ ಕುಸಿತದ ವಾಸ್ತವ ಚಿತ್ರಣ!

ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ  ಭಕ್ತರ ಹಲವು ವಾಹನಗಳನ್ನು ಪೊಲೀಸರು ವಾಪಾಸು ಕಳುಹಿಸಿದ್ದಾರೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಕಾರ್ಯಾಚರಣೆ ಮಾಡಿದ್ದಾರೆ.

ಶನಿವಾರ ತಡರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ವಿವಿಧ ಜಿಲ್ಲೆಗಳಿಂದ ಆಗಮಿಸಿದ ಭಕ್ತರ  ,ಸುಮಾರು 100 ಕ್ಕೂ ಹೆಚ್ಚು ವಾಹನಗಳನ್ನು ವಾಪಾಸು ಕಳುಹಿಸಿದ್ದಾರೆ..ಸರ್ಕಾರದ ಮುಂದಿನ ನಿರ್ಧಾರದ ತನಕ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿಬಾರದೆಂದು ಪೊಲೀಸರು ಸೂಚನೆ ನೀಡಿದ್ದಾರೆ.. ಮತ್ತೆ ಬಂದರೆ ವಾಹನಗಳನ್ನು ಸೀಝ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: Explained| ಪ್ರಧಾನಿ ಮೋದಿ ಅವಧಿಯಲ್ಲಾದ ಐದು ಮಹಾ ಪ್ರಮಾದಗಳು; ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದ ಬಿಜೆಪಿ!

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಹಾಸನ ಗಡಿಭಾಗವಾದ ಗುಂಡ್ಯ,ಸುಬ್ರಹ್ಮಣ್ಯ, ಚಿಕ್ಕಮಗಳೂರು ಗಡಿಭಾಗವಾದ ಚಾರ್ಮಾಡಿ, ಉಜಿರೆ ಮತ್ತು ಸುಬ್ರಹ್ಮಣ್ಯ ಕ್ಕೆ ಸಂಪರ್ಕಿಸುವ ಬಿಸಿಲೆಘಾಟ್,ಪೆರಿಯಶಾಂತಿ ಮತ್ತು ಕುಲ್ಕುಂದ,ಮತ್ತು ಧರ್ಮಸ್ಥಳ ದ ಸ್ನಾನಘಟ್ಟದ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ತಪಾಸಣೆ ಮಾಡುತ್ತಿದ್ದಾರೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published: