Coronavirus: ಕೇರಳದಲ್ಲಿ ಕೊರೋನಾ ಸ್ಫೋಟ ಹಿನ್ನಲೆ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ದ.ಕ ಜಿಲ್ಲೆಯಿಂದ ಕೇರಳದ ಕಾಸರಗೋಡು ಜಿಲ್ಲೆಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸುವಂತೆ ಸಂಸದ ನಳೀನ್ ಕುಮಾರ್ ಕಟೀಲ್ ಆದೇಶ ನೀಡಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
 ದಕ್ಷಿಣ ಕನ್ನಡ(ಆ.2): ಕೇರಳದಲ್ಲಿ ಕೊರೊನಾ ಸೋಂಕು ಸ್ಫೋಟವಾಗಿರವ ಹಿನ್ನಲೆಯಲ್ಲಿ ಕೇರಳದ ಗಡಿ ಭಾಗವನ್ನು ಹಂಚಿಕೊಂಡಿರುವ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿ ನಿತ್ಯ ಇಪ್ಪತ್ತು ಸಾವಿರಕ್ಕೂ ಹೆಚ್ಚು ಅಧಿಕ ಪ್ರಕರಣಗಳು ಕೇರಳ ರಾಜ್ಯದಲ್ಲಿ ಕಂಡುಬರುತ್ತಿದ್ದು, ರಾಜ್ಯದಲ್ಲೂ ಹೈ ಅಲರ್ಟ್ ಗೆ ರಾಜ್ಯ ಸರ್ಕಾರ ಸೂಚಿಸಿದೆ. ಕೊರೋನಾ ಸೋಂಕು ಅತೀ ಹೆಚ್ಚು ಇರುವ ಜಿಲ್ಲೆಗಳ ಜಿಲ್ಲಾಧಿಕಾರಿ ಗಳ ಜೊತೆ ವಿಡಿಯೋ ಕಾನ್ಪರೆನ್ಸ್ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇರಳ ಗಡಿ ಭಾಗದ ಜಿಲ್ಲೆಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ದ.ಕ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕೇರಳದದಿಂದ ಬರುವ ಜನರು ವಾಕ್ಸಿನೇಷನ್ ಪಡೆದಿರುವ ಜೊತೆಗೆ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ಹೊಂದಿರಬೇಕೆಂದು ರಾಜ್ಯ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಕೇರಳ ರಾಜ್ಯದೊಂದಿಗೆ ನಿಕಟ ಸಂಪರ್ಕ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಿಎಂ ಸಭೆ ಬಳಿಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಮಾಡಲಾಗಿದ್ದು, ಸಭೆಯಲ್ಲಿ ಮಹತ್ವದ ಆದೇಶವನ್ನು ದ.ಕ ಸಂಸದ ನಳೀನ್ ಕುಮಾರ್ ಕಟೀಲ್ ನೀಡಿದ್ದಾರೆ.

ಇದನ್ನೂ ಓದಿ:Petrol Price Today: ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ಪೆಟ್ರೋಲ್​-ಡೀಸೆಲ್ ದರ ಹೀಗಿದೆ..!

ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ದ.ಕ ಜಿಲ್ಲೆಯಿಂದ ಕೇರಳದ ಕಾಸರಗೋಡು ಜಿಲ್ಲೆಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸುವಂತೆ ಸಂಸದ ನಳೀನ್ ಕುಮಾರ್ ಕಟೀಲ್ ಆದೇಶ ನೀಡಿದ್ದಾರೆ.

ದ.ಕ ಜಿಲ್ಲೆಯಲ್ಲೂ ಕೊರೋನಾ ಪಾಸಿಟಿವಿಟಿ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಹೆಚ್ಚಾಗುತ್ತಿದ್ದು, ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕೊರೋನಾ ಸೋಂಕು ಹರಡದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ.

ಆಗಸ್ಟ್ 1 ರಿಂದ 7 ದಿನ ಮಂಗಳೂರಿನಿಂದ ಕೇರಳ ರಾಜ್ಯದ ಕಾಸರಗೋಡುಗೆ ಹೋಗುವ ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್‍ಗಳ ಸಂಚಾರವನ್ನು ನಿಲ್ಲಿಸಬೇಕು. ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳಲ್ಲಿ ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಇರಬೇಕು, ಮುಖ್ಯವಾಗಿ ಅಲ್ಲಿನ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ತಾವಿರುವ ವಿದ್ಯಾರ್ಥಿ ನಿಲಯಗಳಲ್ಲಿಯೇ ಒಂದು ವಾರ ಹೋಂ ಕ್ವಾರಂಟೈನ್‍ನಲ್ಲಿಯೇ ಇರಬೇಕು.  ಪ್ರತಿ ದಿನ ಅವರುಗಳ ಬಗ್ಗೆ ನಿಗಾ ವಹಿಸಬೇಕು ಅಂತಾ ಅಧಿಕಾರಿಗಳಿಗೆ ಕಟೀಲ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:Karnataka Weather Today: ರಾಜ್ಯದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ?; ಇಲ್ಲಿದೆ ಮಾಹಿತಿ

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ತಪಾಸಣೆಗೆ ಮತ್ತಷ್ಟು ಕ್ರಮಕೈಗೊಳ್ಳಬೇಕು. ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ ಗಳಿಗೆ ದಾಖಲಿಸಬೇಕು,  ಸೋಂಕಿತರು ಅನಗತ್ಯವಾಗಿ ಓಡಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಒಂದೇ ಕುಟುಂಬದಲ್ಲಿ 2ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಮನೆಯನ್ನು ಮೈಕ್ರೋ ಕಂಟೈನ್‍ಮೆಂಟ್ ಜೋನ್ ಎಂದು ಪರಿಗಣಿಸಬೇಕು ಅಂತಾ ಆದೇಶ ನೀಡಿದ್ದಾರೆ.

ಅಲ್ಲದೇ ದ.ಕ ಜಿಲ್ಲೆಯಲ್ಲಿ ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10 ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಬೇಕು. ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರು ಮಾತ್ರ ಸೀಮಿತಗೊಳಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಲ್ಲಿ ಕಲ್ಯಾಣ ಮಂಟಪಗಳ ಮಾಲೀಕರ ಮೇಲೆ ಎಫ್.ಐ.ಆರ್ ದಾಖಲಿಸಬೇಕು. ಇದರ ಬಗ್ಗೆ ನಿಗಾ ವಹಿಸಲು ಹೋಂ ಗಾರ್ಡ್  ನಿಯೋಜಿಸಬೇಕು ಅಂತಾ ಆದೇಶ ನೀಡಿದ್ದಾರೆ.
Published by:Latha CG
First published: