Coronavirus: ಕೇರಳ-ಕೊಡಗು ಗಡಿಯಲ್ಲಿ 3 ಕಡೆ ಕೋವಿಡ್ ತಪಾಸಣಾ ಕೇಂದ್ರ ಕಾರ್ಯಾರಂಭ 

ಕೊಡಗಿನ ಕುಟ್ಟ,  ಮಾಕುಟ್ಟ ಮತ್ತು ಕರಿಕೆ ಚೆಕ್‍ಪೋಸ್ಟ್  ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಕೇರಳದಿಂದ ಬರುವವರಿಗೆ ಆರ್ ಟಿಪಿಸಿಆರ್ ಕೋವಿಡ್ ಟೆಸ್ಟ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ.

ಕೇರಳ-ಕೊಡಗು ಗಡಿ

ಕೇರಳ-ಕೊಡಗು ಗಡಿ

  • Share this:
ಕೊಡಗು(ಆ.01): ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ದೇವರನಾಡು ಕೇರಳದಲ್ಲಿ ಕೋವಿಡ್ ಸೋಂಕು ಮಿತಿ ಮೀರುತ್ತಿದೆ. ದಿನವೊಂದಕ್ಕೆ ಬರೋಬ್ಬರಿ 22 ಸಾವಿರಕ್ಕೂ ಹೆಚ್ಚು ಕೇಸ್ ದಾಖಲಾಗುತ್ತಿವೆ. ಇದು ಕರ್ನಾಟಕ ಕೇರಳ ಗಡಿ ಜಿಲ್ಲೆ ಕೊಡಗಿಗೆ ಆತಂಕ ತಂದೊಡ್ಡಿದೆ. ಹೀಗಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಂಜೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವುದರಿಂದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ವಿಡಿಯೋ ಕಾನ್ಫರೆನ್ಸ್ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಕೇರಳದೊಂದಿಗೆ ಸಂಪರ್ಕ ಇರುವ ಮೂರು ಗಡಿಗಳಲ್ಲೂ ಈಗಾಗಲೇ ಚೆಕ್‍ಪೋಸ್ಟ್ ಗಳನ್ನು ತೆರೆಯಲಾಗಿದೆ. ಜೊತೆಗೆ ಅಂತರ್ ಜಿಲ್ಲೆಗಳ ಗಡಿಗಳಲ್ಲೂ ಚೆಕ್‍ಪೋಸ್ಟ್ ತೆರೆಯಲಾಗಿದ್ದು ಹೊರಗಿನಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸುವಂತೆ ಸಿಎಂ ಸೂಚಿಸಿದ್ದಾರೆ.

ಇದನ್ನೂ ಓದಿ:Karnataka Weather Today: ಕರಾವಳಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ; ಉಳಿದೆಡೆ ಹೇಗಿರಲಿದೆ ಇಂದಿನ ವಾತಾವರಣ?

ಅದರಂತೆ ಕಟ್ಟುನಿಟ್ಟಿನ ಕ್ರಮವಹಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಕೇರಳದಿಂದ ಬರುವವರಿಗೆ 72 ಗಂಟೆಯೊಳಗೆ ಪಡೆದ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಜೊತೆಗೆ ನಿತ್ಯ ಕೇರಳದಿಂದ ಕರ್ನಾಟಕಕ್ಕೆ ಓಡಾಡುವವರಿಗೆ ಸ್ಥಳದಲ್ಲಿಯೇ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ಗೂಡ್ಸ್ ವಾಹನಗಳ ಚಾಲಕರಿಗೂ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ ಎಂದಿದ್ದಾರೆ. ಇನ್ನು ಪ್ರವಾಸಿ ಜಿಲ್ಲೆಯಾಗಿರುವುದರಿಂದ ಹೋಂಸ್ಟೇ ಮತ್ತು ರೆಸಾರ್ಟ್ ಗಳಿಗೆ ಬರುವವರ ಮೇಲೆ ನಿಗಾ ವಹಿಸಲು ಸೂಚಿಸಿದ್ದಾರೆ.

ರಾಜ್ಯದಿಂದ ಗೈಡ್ ಲೈನ್ಸ್ ಬರುತ್ತಿದ್ದಂತೆ ಅವೆಲ್ಲವನ್ನೂ ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ. ಕೇರಳದಲ್ಲಿ ಕೋವಿಡ್ ಸೋಂಕು ಅಬ್ಬರಿಸುತ್ತಿರುವಾಗಲೇ ಕೇರಳದೊಂದಿಗೆ ಅಂತರಾಜ್ಯ ಗಡಿ ಹೊಂದಿರುವ ಕೊಡಗಿನಲ್ಲಿ ಹೈಅಲರ್ಟ್ ಮಾಡಲಾಗಿದೆ. ಕೊಡಗಿನ ಕುಟ್ಟ,  ಮಾಕುಟ್ಟ ಮತ್ತು ಕರಿಕೆ ಚೆಕ್‍ಪೋಸ್ಟ್  ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಕೇರಳದಿಂದ ಬರುವವರಿಗೆ ಆರ್ ಟಿಪಿಸಿಆರ್ ಕೋವಿಡ್ ಟೆಸ್ಟ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ:Delhi Post: ಮುಖ್ಯಮಂತ್ರಿ ಬೊಮ್ಮಾಯಿಗೆ ಪರಿವಾರದ ಕಾಟ; ಸಿ.ಟಿ. ರವಿಗೆ ಶ್ಯಾನೆ ಸಿಟ್ಟು!

ಒಂದು ಡೋಸ್ ಆದರೂ ವ್ಯಾಕ್ಸಿನ್ ಆಗಿರಲೇಬೇಕು. ಇಲ್ಲದಿದ್ದರೆ ಕೊಡಗಿಗೆ ಎಂಟ್ರಿ ನಿರಾಕರಿಸಲಾಗುತ್ತಿದೆ. ಇನ್ನು ನಿತ್ಯವೂ ಕರ್ನಾಟಕದಿಂದ ಕೇರಳಕ್ಕೆ ವಿವಿಧ ಗೂಡ್ಸ್ ಗಳನ್ನು ಸಾಗಿಸುವ ಗೂಡ್ಸ್ ಚಾಲಕರಿಗೆ 15 ದಿನಕ್ಕೊಮ್ಮೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಮಾಕುಟ್ಟ ಚೆಕ್ ಪೋಸ್ಟ್ ಗೆ ಕೊಡಗು ಡಿಎಚ್‍ಓ ಮೋಹನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳದಲ್ಲಿದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಕೋವಿಡ್ ನೆಗೆಟಿವ್ ವರದಿ ಇಲ್ಲದಿದ್ದರೆ ಜಿಲ್ಲೆಗೆ ಬಿಡುವುದು ಬೇಡ ಎಂದು ಸೂಚನೆ ನೀಡಿದರು. ಈಗಾಗಲೇ ಸ್ಥಳದಲ್ಲಿಯೇ ರ್ಯಾಟ್ ಟೆಸ್ಟ್ ಮಾಡಲಾಗುತ್ತಿದ್ದು ಪಾಸಿಟಿವ್ ಬಂದ ಮೂರು ಜನರನ್ನು ಕೇರಳಕ್ಕೆ ವಾಪಸ್ ಕಳುಹಿಸಲಾಗಿದೆ ಎಂದು ಡಿಎಚ್‍ಓ ತಿಳಿಸಿದರು.
Published by:Latha CG
First published: