ಕೆಲಸದಿಂದ ಏಕಾಏಕಿ ಕೈಬಿಟ್ಟದ್ದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಪೌರ ಕಾರ್ಮಿಕರ ಪ್ರತಿಭಟನೆ

ಹು-ಧಾ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ನಿನ್ನೆ ಕೈಬಿಡಲಾಗಿದೆ. ಇದನ್ನು ವಿರೋಧಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಗುತ್ತಿಗೆ ನೌಕರರ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಗುತ್ತಿಗೆ ನೌಕರರ ಪ್ರತಿಭಟನೆ

  • Share this:
ಹುಬ್ಬಳ್ಳಿ: ಏಕಾಏಕಿ ಪೌರ ಕಾರ್ಮಿಕರನ್ನು ಕೆಲಸದಿಂದ ಕೈಬಿಟ್ಟಿದ್ದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ನೂರಾರು ಪೌರ ಕಾರ್ಮಿಕರು ಪ್ರತಿಭಟನೆ ಮಾಡಿದರು. ಹುಬ್ಬಳ್ಳಿ- ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಮನೆ ಮುಂದೆ ನಿನ್ನೆ ಧರಣಿ‌ ನಡೆಸಿದರು. ಸಂತೋಷ್ ನಗರದ ಶಕ್ತಿ ಕಾಲನಿಯಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುತ್ತಿದ್ದ ಗುತ್ತಿಗೆ ಪೌರ ಕಾರ್ಮಿಕರನ್ನು ನಿನ್ನೆಯಿಂದ ಜಾರಿಗೆ ಬರುವಂತೆ ಕೆಲಸದಿಂದ ಕೈಬಿಡಲಾಗಿದೆ. ಬಹುತೇಕರನ್ನು ಈಗಾಗಲೇ ಪಾಲಿಕೆಯಿಂದ ನೇರ ನೇಮಕಾತಿ ಮಾಡಿಕೊಳ್ಳಲಾಗಿದ್ದು ತಮ್ಮನ್ನು ಮಾತ್ರ ಕೈಬಿಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಪಾಲಿಕೆ ಆಯುಕ್ತರನ್ನು ಸ್ಥಳಕ್ಕೆ ಕರೆಸಿ ಚರ್ಚೆ ನಡೆಸಿದ ಶಾಸಕ ಪ್ರಸಾದ್ ಅಬ್ಬಯ್ಯ, ಪೌರ ಕಾರ್ಮಿಕರ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಟ್ರಾಕ್ಟರ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಕೂಲಿ ಕಾರ್ಮಿಕರ ಸಾವು:

ಟ್ರಾಕ್ಟರ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಘಟಗಿ ತಾಲೂಕಿನ ಗುಡ್ಡದ ಹುಲಿಕಟ್ಟಿ ಬಳಿ ನಡೆದಿದೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂಟು ಜನ ಕೂಲಿ ಕಾರ್ಮಿಕರು ಕೆಲಸಕ್ಕೆಂದು ಆಟೋದಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದೆ. ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದರೆ. ಐವರು ರಕ್ತ ಸ್ರಾವದಿಂದ ಬಳಲುತ್ತಿದ್ದರು. ಸ್ಥಳೀಯರು ಕೂಡಲೆ ಅಂಬ್ಯುಲೆನ್ಸ್ ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಳ್ಳಾರಿಗೆ ಸೇರ್ಪಡೆಯಾಗುತ್ತಾ ಚಿತ್ರದುರ್ಗದ ಮೊಳಕಾಲ್ಮೂರು?; ಜೋರಾಗಿದೆ ಪರ-ವಿರೋಧ ಚರ್ಚೆ

ಹುಬ್ಬಳ್ಳಿಯಲ್ಲಿ ಮಾಸ್ಕ್ ಧರಿಸದೆ ಓಡಾಡುವವರಿಗೆ ಶಾಕ್:

ಹುಬ್ಬಳ್ಳಿಯಲ್ಲಿ ಮಾಸ್ಕ್ ಧರಿಸದೆ ಓಡಾಡುವವರನ್ನು ತಡೆದು ಕೋವಿಡ್ ತಪಾಸಣೆ ಮಾಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಕಾರ್ಯಾಚರಣೆ ನಡೆದಿದೆ. ದುರ್ಗದಬೈಲ್, ಸಿಬಿಟಿ, ಹೊಸ ಬಸ್ ನಿಲ್ದಾಣದ ಬಳಿ ತಪಾಸಣೆ ಮಾಡಲಾಗಿದೆ. ತಪಾಸಣೆಗೆ ನಿರಾಕರಿಸಿ ಓಡುತ್ತಿದ್ದವರನ್ನು ಕರೆತಂದು ಸ್ವ್ಯಾಬ್ ಸಂಗ್ರಹಿಸಲಾಗಿದೆ‌. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದವರಿಗೆ ಅಧಿಕಾರಿಗಳ ಶಾಕ್ ನೀಡಿದ್ದು ವಿಳಾಸ, ಮೊಬೈಲ್ ಸಂಖ್ಯೆ ಪಡೆದು ಸ್ವ್ಯಾಬ್ ಸಂಗ್ರಹಿಸಿ ಕಳುಹಿಸಿದ್ದಾರೆ.

ವರದಿ: ಪರಶುರಾಮ ತಹಶೀಲ್ದಾರ
Published by:Vijayasarthy SN
First published: