HOME » NEWS » District » COUNTDOWN TO GRAMAPANCHAYAT ELECTION IN CHITRADURGA 158 SENSITIVE 652 VERY SENSITIVE BOOTHS VTC MAK

ಚಿತ್ರದುರ್ಗದಲ್ಲಿ ಗ್ರಾಪಂ ಚುನಾವಣೆ; 158 ಸೂಕ್ಷ್ಮ, 652 ಅತಿ ಸೂಕ್ಷ್ಮ ಮತಗಟ್ಟೆಗಳು!

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ಕಾಲುವೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾದಲಗಟ್ಟೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಹರಾಜಿನ ಮೂಲಕ ಆಯ್ಕೆ ಮಾಡುತ್ತಿರುವ ಕುರಿತು ತಿಳಿದುಬಂದಿದೆ.

news18-kannada
Updated:December 22, 2020, 7:56 AM IST
ಚಿತ್ರದುರ್ಗದಲ್ಲಿ ಗ್ರಾಪಂ ಚುನಾವಣೆ; 158 ಸೂಕ್ಷ್ಮ, 652 ಅತಿ ಸೂಕ್ಷ್ಮ ಮತಗಟ್ಟೆಗಳು!
ಚಿತ್ರದುರ್ಗದಲ್ಲಿ ಚುನಾವಣೆಗೆ ಸಿದ್ದತೆ.
  • Share this:
ಚಿತ್ರದುರ್ಗ: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನಲೆ ಮೊದಲ ಹಂತದಲ್ಲಿ ಚಿತ್ರದುರ್ಗ, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕಿನ 100 ಗ್ರಾಮ ಪಂಚಾಯಿತಿಗಳ 1588 ಸದಸ್ಯ ಸ್ಥಾನಗಳಿಗೆ ಇಂದು  ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ  ಮತದಾನ ನಡೆಯಲಿದೆ. ಮೊದಲ ಹಂತದ ಚುನಾವಣೆಯಲ್ಲಿ 810 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ಕೋವಿಡ್-19 ಮಾರ್ಗಸೂಚಿಯಂತೆ ಮುನ್ನಚ್ಚರಿಕೆ ವಹಿಸಲಾಗಿದ್ದು, ಜೊತೆಗೆ ಬಂದೋಬಸ್ತ್ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಒಟ್ಟು 3640 ಜನರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 158 ಸೂಕ್ಷ್ಮ ಮತಗಟ್ಟೆಗಳು,  652  ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಮಸ್ಟರಿಂಗ್, ಡಿ-ಮಸ್ಟರಿಂಗ್ ಹಾಗೂ ಮತ ಎಣೆಕೆ ಕೇಂದ್ರವನ್ನು ನಗರದ ಬಿ.ಡಿ.ರಸ್ತೆಯ ಸರ್ಕಾರಿ  ವಿಜ್ಞಾನ ಕಾಲೇಜುನಲ್ಲಿ  ಹೊಸದುರ್ಗ ತಾಲ್ಲೂಕಿನ   ಶ್ರೀಮತಿ ತಾಯಮ್ಮ ಸದ್ದಿವಾಲ್ ಲಿಂಗಯ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ , ಹೊಳಲ್ಕೆರೆ ತಾಲ್ಲೂಕಿನ  ಮಸ್ಟರಿಂಗ್, ಡಿ-ಮಸ್ಟರಿಂಗ್ ಹಾಗೂ ಮತ ಎಣೆಕೆ ಕೇಂದ್ರವನ್ನು ಹೊಳಲ್ಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ.

ಇನ್ನೂ  ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ಕಾಲುವೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾದಲಗಟ್ಟೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಹರಾಜಿನ ಮೂಲಕ ಆಯ್ಕೆ ಮಾಡುತ್ತಿರುವ ಕುರಿತು ತಹಶೀಲ್ದಾರ್, ಚಳ್ಳಕೆರೆ ತಾಲ್ಲೂಕು ರವರು ಸೆಕ್ಟರ್ ಅಧಿಕಾರಿಗಳು ಹಾಗೂ ಇತರೆ ಕಂದಾಯ ಅಧಿಕಾರಿಗಳೊಂದಿಗೆ ಡಿ.11 ರಂದು ಚಳ್ಳಕೆರೆ ತಾಲ್ಲೂಕು ಕಾಲುವೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾದಲಗಟ್ಟೆ ಗ್ರಾಮಕ್ಕೆ ಖುದ್ದಾಗಿ ಭೇಟಿ ನೀಡಿ ಗ್ರಾಮಸ್ಥರ ಸಮಕ್ಷಮ ಪ್ರಸ್ತುತ ಸ್ಥಿತಿಯ ಕುರಿತು ವರದಿ ಮೇರೆಗೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್, ತಳಕು ಠಾಣೆ, ಚಳ್ಳಕೆರೆ ತಾಲ್ಲೂಕು ಚಿತ್ರದುರ್ಗ ಜಿಲ್ಲೆ ರವರು ಪ್ರಕರಣದ ಕುರಿತು ಸೆಕ್ಟರ್ ಅಧಿಕಾರಿಗಳಿಂದ ದೂರನ್ನ ಪಡೆದು ಎಫ್‍ಐಆರ್ ಕೇಸ್ ಸಂ.146/2020 ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Coronavirus Mutation: ಮ್ಯೂಟಂಟ್​ ಕೊರೋನಾ ವೈರಸ್​; ಬ್ರಿಟನ್​ನ ಈ ಸೋಂಕಿನ ಬಗ್ಗೆ ಇರಲಿ ಎಚ್ಚರ

ಅಲ್ಲದೇ  ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮತಗಟ್ಟೆ ಪ್ರವೇಶಿಸುವ ಮೊದಲು ತಮ್ಮ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಂಡು ಮತ ಚಲಾಯಿಸುವುದು. ಕೋವಿಡ್ ಸೋಂಕಿತರು ಹಾಗೂ ಕೋವಿಡ್ ಶಂಕಿತರನ್ನು ಅಗತ್ಯ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸಂಬಂಧಪಟ್ಟ ಮತಗಟ್ಟೆಗಳಿಗೆ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಕರೆತಂದು ಮತದಾನದ ನಂತರ ಅವರನ್ನು ಸ್ವಸ್ಥಾನಕ್ಕೆ ಮರಳಿ ಕರೆದುಕೊಂಡು ಹೋಗುವುದು.
Youtube Video

ಮೊದಲ ಹಂತದಲ್ಲಿ ಜಿಲ್ಲೆಯ ಚಿತ್ರದುರ್ಗ, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳ 100 ಗ್ರಾಮಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣೆಗೆ ಮುನ್ನವೇ 158 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಇನ್ನೂ ಮೊದಲ ಹಂತದಲ್ಲಿ  100 ಗ್ರಾಮ ಪಂಚಾಯಿತಿಗಳ 1753 ಸ್ಥಾನಗಳಿದ್ದು, ಇದರಲ್ಲಿ 6 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದೇ ಖಾಲಿ ಉಳಿದಿದ್ದು, 158 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Published by: MAshok Kumar
First published: December 22, 2020, 7:55 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories