HOME » NEWS » District » COVID ALERT IN CHITRADURGA TRAVELERS FROM STATE AND ABROAD NEED TO TEST VTC SKTV

ಚಿತ್ರದುರ್ಗದಲ್ಲಿ Corona Alert; ಹೊರರಾಜ್ಯ, ಕುಂಭಮೇಳ, ವಿದೇಶದಿಂದ ಬಂದವರ ಮೇಲೆ ಹದ್ದಿನ ಕಣ್ಣು, ಪರೀಕ್ಷೆ ಕಡ್ಡಾಯ

ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಚಿತ್ರದುರ್ಗಕ್ಕೆ ವಾಹನಗಳಲ್ಲಿ ಆಗಮಿಸುವ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು. ಬೆಂಗಳೂರಿನಿಂದ ಹಿರಿಯೂರಿಗೆ ಬಹಳಷ್ಟು ಜನರು ಪ್ರಯಾಣಿಸುತ್ತಾರೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನಿಂದ ಹಿರಿಯೂರಿಗೆ ಬರುವ ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸಿಬೇಕು ಎಂದಿದ್ದಾರೆ.

news18-kannada
Updated:April 20, 2021, 10:32 AM IST
ಚಿತ್ರದುರ್ಗದಲ್ಲಿ Corona Alert; ಹೊರರಾಜ್ಯ, ಕುಂಭಮೇಳ, ವಿದೇಶದಿಂದ ಬಂದವರ ಮೇಲೆ ಹದ್ದಿನ ಕಣ್ಣು, ಪರೀಕ್ಷೆ ಕಡ್ಡಾಯ
ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿಗಳ ಸಭೆ
  • Share this:
ಚಿತ್ರದುರ್ಗ: ಯಾರೇ ಆಗಲಿ ಹೊರರಾಜ್ಯ, ಹೊರದೇಶದಿಂದ ಜಿಲ್ಲೆಗೆ ಆಗಮಿಸುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿ 10 ದಿನ ಸ್ವಯಂಪ್ರೇರಿತರಾಗಿ ಹೋಂ ಕ್ವಾರಂಟೈನ್ ಆಗಬೇಕು. ಜಿಲ್ಲೆಯಿಂದ ಕುಂಭಮೇಳಕ್ಕೆ ಹೋದವರು ಮುನ್ನೆಚ್ಚರಿಕೆಯಿಂದ ಸ್ವಯಂ ಐಸೋಲೇಟ್ ಆಗಿ ಕೋವಿಡ್ ಟೆಸ್ಟ್ ಮಾಡಿಸಬೇಕು ಎಂದು ಚಿತ್ರದುರ್ಗ  ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ದಿನೇ ದಿನೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದರಿಂದ ಜಿಲ್ಲೆಯ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ  ಕೊರೋನಾ ನಿಯಂತ್ರಣ ಕುರಿತ ವಿವಿಧ ಇಲಾಖೆಯ ಅಧಿಕಾರಿಗಳ  ಸಭೆ ನಡೆಸಿದ್ರು. ಸಭೆಯಲ್ಲಿ ಮಾತನಾಡಿದ ಡಿಸಿ ಕವಿತಾ ಎಸ್ ಮನ್ನಿಕೇರಿ, ಜಿಲ್ಲೆಯಲ್ಲಿ  ಕೊರೋನಾ  ಸೋಂಕಿತರಿಗೆ ಸಂಬಂಧಿಸಿದಂತೆ 10 ಪ್ರಾಥಮಿಕ ಸಂಪರ್ಕಿತರು ಹಾಗೂ 20 ದ್ವಿತೀಯ ಸಂಪರ್ಕಿತರು ಸೇರಿದಂತೆ ಒಂದು ಕೋವಿಡ್ ಪ್ರಕರಣಕ್ಕೆ ಕನಿಷ್ಟ 30 ಸಂಪರ್ಕಿತರನ್ನು ಕಡ್ಡಾಯವಾಗಿ ಗುರುತಿಸಿ ತಪಾಸಣೆಗೆ ಒಳಪಡಿಸಬೇಕು ಎಂದು ಸೂಚನೆ ನೀಡಿದರು.

ಅಲ್ಲದೇ ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ತಹಶೀಲ್ದಾರ್, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಕಡ್ಡಾಯವಾಗಿ ಗುರುತಿಸುವ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಚಿತ್ರದುರ್ಗಕ್ಕೆ ವಾಹನಗಳಲ್ಲಿ ಆಗಮಿಸುವ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು. ಬೆಂಗಳೂರಿನಿಂದ ಹಿರಿಯೂರಿಗೆ ಬಹಳಷ್ಟು ಜನರು ಪ್ರಯಾಣಿಸುತ್ತಾರೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನಿಂದ ಹಿರಿಯೂರಿಗೆ ಬರುವ ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸಿಬೇಕು ಎಂದಿದ್ದಾರೆ.

ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾತನಾಡಿ, ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುವವರನ್ನು ತಪಾಸಣೆಗೆ ಒಳಪಡಿಸಿಬೇಕು. ಹಿರಿಯೂರು, ಮೊಳಕಾಲ್ಮೂರು, ರಾಂಪುರ, ರಾಯದುರ್ಗ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಲ್ಲಿ ತಪಾಸಣಾ ಸ್ಥಳಗಳನ್ನು ಗುರುತಿಸಿ, ಪೊಲೀಸ್, ತಾಲ್ಲೂಕು ಆಡಳಿತ, ಆರೋಗ್ಯ ಇಲಾಖೆ ತಂಡದೊಂದಿಗೆ ತಪಾಸಣೆ ಮಾಡಲು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು. ಅಲ್ಲದೇ ಹೊರರಾಜ್ಯ, ಹೊರ ದೇಶದಿಂದ ಬಂದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿಸಿ 10 ದಿನ ಸ್ವಯಂಪ್ರೇರಿತರಾಗಿ ಹೋಂ ಕ್ವಾರಂಟೈನ್ ಆಗಬೇಕು.
Youtube Video

ಜಿಲ್ಲೆಯಿಂದ ಕುಂಭಮೇಳಕ್ಕೆ ಹೋದವರು ಮುನ್ನೆಚ್ಚರಿಕಾ ಕ್ರಮವಾಗಿ ಸ್ವಯಂ ಐಸೋಲೇಟ್ ಆಗಿ ಕೋವಿಡ್ ಟೆಸ್ಟ್ ಮಾಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು. ಇನ್ನೂ ಜಿಲ್ಲೆಯಲ್ಲಿ  ಮದುವೆ ಸಮಾರಂಭಗಳಿಗೆ ಕಲ್ಯಾಣ ಮಂಟಪಕ್ಕೆ ಸಂಬಂಧಿಸಿದಂತೆ ಒಳಾಂಗಣ ಸಭಾಂಗಣ 100, ಹೊರಾಂಗಣ ಆವರಣದಲ್ಲಿ ನಡೆದರೆ 200 ಜನರಿಗೆ ಅವಕಾಶವಿದ್ದು, ಆಯಾ ತಾಲ್ಲೂಕಿನ ತಹಶೀಲ್ದಾರ್‍ಗಳಿಂದ ಪಾಸ್ ಪಡೆಯುವುದು ಕಡ್ಡಾಯವಾಗಿದೆ. ಕಲ್ಯಾಣ ಮಂಟಪದ ಮಾಲೀಕರು ಕಡ್ಡಾಯವಾಗಿ ಕೋವಿಡ್ ನಿಯಮಾವಳಿ ಪಾಲಿಸಬೇಕು, ನಿಯಮ ಪಾಲನೆ ಮಾಡದಿದ್ದರೆ ಕಲ್ಯಾಣ ಮಂಟಪದ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Published by: Soumya KN
First published: April 20, 2021, 10:32 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories