• Home
  • »
  • News
  • »
  • district
  • »
  • ಹುಬ್ಬಳ್ಳಿ ಕಿಮ್ಸ್​ನಲ್ಲಿ 14 ದಿನಗಳಲ್ಲಿ ರೆಡಿಯಾಯ್ತು 66 ಬೆಡ್​ಗಳ ಕೋವಿಡ್ ಕ್ಯಾಜುಯಾಲಿಟಿ; ಇಂದಿನಿಂದ ಸೇವೆಗೆ ಮುಕ್ತ

ಹುಬ್ಬಳ್ಳಿ ಕಿಮ್ಸ್​ನಲ್ಲಿ 14 ದಿನಗಳಲ್ಲಿ ರೆಡಿಯಾಯ್ತು 66 ಬೆಡ್​ಗಳ ಕೋವಿಡ್ ಕ್ಯಾಜುಯಾಲಿಟಿ; ಇಂದಿನಿಂದ ಸೇವೆಗೆ ಮುಕ್ತ

ಕಿಮ್ಸ್  ಆಸ್ಪತ್ರೆಯ ಆವರಣದಲ್ಲಿ ಕೋವಿಡ್ ವಾರ್ಡ್​ ಉದ್ಘಾಟಿಸಿದ ಸಚಿವ ಜಗದೀಶ್ ಶೆಟ್ಟರ್.

ಕಿಮ್ಸ್  ಆಸ್ಪತ್ರೆಯ ಆವರಣದಲ್ಲಿ ಕೋವಿಡ್ ವಾರ್ಡ್​ ಉದ್ಘಾಟಿಸಿದ ಸಚಿವ ಜಗದೀಶ್ ಶೆಟ್ಟರ್.

ವಿದ್ಯುತ್ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಪ್ರತಿ ಕೇಂದ್ರ 22 ಹಾಸಿಗೆಗಳ ಸಾಮಾರ್ಥ್ಯ ಹೊಂದಿದೆ. ಕ್ಯಾಜ್ಯಯಾಲಿಟಿ ಕೇಂದ್ರ ಮಧ್ಯದಲ್ಲಿ ವೈದ್ಯರು ಹಾಗೂ ನರ್ಸ್‌ಗಳು ಕಾರ್ಯ ನಿರ್ವಹಿಸಲು ಪ್ರತ್ಯೇಕ ಸ್ಥಳಾವಕಾಶವಿದೆ.

  • Share this:

ಹುಬ್ಬಳ್ಳಿ; ಕಿಮ್ಸ್  ಆಸ್ಪತ್ರೆಯ ಆವರಣದಲ್ಲಿ 14 ದಿನದಲ್ಲಿ 66 ಬೆಡ್‌ಗಳ ಕೋವಿಡ್ ಆಸ್ಪತ್ರೆ ನಿರ್ಮಿಸಲಾಗಿದೆ. ಮೇಕ್ ಶಿಫ್ಟ್ ಮಾದರಿಯಲ್ಲಿ ನಿರ್ಮಿಸಲಾಗಿರುವ ಆಸ್ಪತ್ರೆಯನ್ನು ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹಾಗೂ ಮಾಜಿ ಸಿಎಂ, ಬೃಹತ್ ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ನಿಧಿಯ 66 ಲಕ್ಷ ವೆಚ್ಚದಲ್ಲಿ ಒಟ್ಟು 1500 ಚದುರ ಮೀಟರ್ ವಿಸ್ತೀರ್ಣದಲ್ಲಿ ಮೂರು ಕ್ಯಾಜುಯಾಲಿಟಿ ಕೇಂದ್ರಗಳನ್ನು ನಿರ್ಮಿಸಲಾಗಿದೆ.


ವಿದ್ಯುತ್ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಪ್ರತಿ ಕೇಂದ್ರ 22 ಹಾಸಿಗೆಗಳ ಸಾಮಾರ್ಥ್ಯ ಹೊಂದಿದೆ. ಕ್ಯಾಜ್ಯಯಾಲಿಟಿ ಕೇಂದ್ರ ಮಧ್ಯದಲ್ಲಿ ವೈದ್ಯರು ಹಾಗೂ ನರ್ಸ್‌ಗಳು ಕಾರ್ಯ ನಿರ್ವಹಿಸಲು ಪ್ರತ್ಯೇಕ ಸ್ಥಳಾವಕಾಶವಿದೆ. 250 ಚದುರ ಮೀಟರ್ ವಿಸ್ತೀರ್ಣದಲ್ಲಿಮಹಿಳೆಯರು ಹಾಗೂ ಪುರುಷರಿಗಾಗಿ ಪ್ರತ್ಯೇಕವಾಗಿ 6 ಬಾತ್ ರೂಮ್ ಹಾಗೂ 6 ಶೌಚಾಲಯಗಳನ್ನು ನಿರ್ಮಿಸಲಾಗಿದೆ.


ನೀರು, ಶಬ್ದ ನಿರೋಧಕವಾಗಿರುವ ಆಸ್ಪತ್ರೆ 20 ವರ್ಷಗಳ ಕಾಲ ಬಾಳಿಕೆ ಬರಲಿದೆ. ಅಗತ್ಯವಿದ್ದೆಡೆ ಆಸ್ಪತ್ರೆಯನ್ನು ಸ್ಥಳಾಂತರಿಸಬಹದು. ಆಸ್ಪತ್ರೆಯನ್ನು ಕೋವಿಡ್ ರೋಗಿಗಳ ತತ್ಕಾಲಿಕ ಆರೈಕೆಗೆ ಬಳಕೆ ಮಾಡಬಹುದಾಗಿದೆ. ಜಿಲ್ಲಾಡಳಿತದಿಂದ ಆಕ್ಸಿಜನ್ ಸಿಲಿಂಡರ್ ಹಾಗೂ ಆಕ್ಸಿಜನ್ ಕಾನ್ಸಂಟ್ರೇಟರ್ಸ್‌ಗಳನ್ನು ನೀಡಲಾಗಿದೆ.


ಕೋವಿಡ್ ಅಲೆ ತ್ರೀವ್ರತೆ ಇಳಿದ ಬಳಿಕ ಆಸ್ಪತ್ರೆಯನ್ನು ಲಸಿಕಾ ಕೇಂದ್ರ ಸೇರಿದಂತೆ ಇತರೆ ಉದ್ದೇಶಗಳಿಗೆ ಬಳಸಲು ಉದ್ದೇಶಿಸಲಾಗಿದೆ. ಇಕೋ ಇನ್ ಬಾಕ್ಸ್ ಸ್ಪೇಸ್ ಪ್ರೈವ್ಹೇಟ್ ಲಿಮಿಟೆಡ್ ನಿರ್ಮಾಣ ನಿರ್ವಹಣೆಯ ಜವಬ್ದಾರಿ ಹೊತ್ತಿದೆ. ಈ ಸಂದರ್ಭದಲ್ಲಿ ಶಾಸಕ ಅಬ್ಬಯ್ಯ ಪ್ರಸಾದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಲಾಕ್​ಡೌನ್ ಇದ್ರೂ ನಿಲ್ಲದ ವಾಹನ ಸಂಚಾರ;


ಲಾಕ್​ಡೌನ್ 6 ನೇ ದಿನಕ್ಕೆ ಕಾಲಿಟ್ಟಿದೆ. ದಿನೇ ದಿನೇ ಕೊರೋನಾ ವ್ಯಾಪಿಸುತ್ತಿದ್ದರೂ ಹುಬ್ಬಳ್ಳಿ ಜನ ಎಚ್ಚೆತ್ತುಕೊಳ್ಳಂಡಿಲ್ಲ. ನಗರದಲ್ಲಿ ವಾಹನ ದಟ್ಟಣೆ ಹೆಚ್ಚಳವಾಗಿದೆ. ನಗರದ ಬಹುತೇಕ ಕಡೆ ಬ್ಯಾರಿಕೇಡ್ ಹಾಕಿ ವಾಹನ ತಪಾಸಣೆ ಮುಂದುವರಿದಿದೆ. ಪೊಲೀಸರ ಸರ್ವ ಪ್ರಯತ್ನದ ನತರವೂ ಅನಗತ್ಯ ವಾಹನ ಸಂಚಾರಕ್ಕೆ ಬ್ರೇಕ್ ಬಿದ್ದಿಲ್ಲ. ವಾಹನ ಸೀಜ್ ಮಾಡಿ, ದಂಡದ ಬಿಸಿ ಮುಟ್ಟಿಸಿದರೂ ಜನ ಎಚ್ಚೆತ್ತುಕೊಂಡಿಲ್ಲ.


ಕೆಲ ವೃತ್ತಗಳ ಲ್ಲಿ ಟ್ರಾಫಿಕ್ ಜಾಮ್ ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಮಾರುಕಟ್ಟೆಯಲ್ಲಿ ಖರೀದಿಯಲ್ಲಿ ಜನ ಮುಗಿಬಿದ್ದಿದ್ದಾರೆ. ಸಾಮಾಜಿಕ ಅಂತರ ಇಲ್ಲದೆ ಖರೀದಿಯಲ್ಲಿ ಜನ ನಿರತರಾಗಿದ್ದಾರೆ. ಜನರ ವರ್ತನೆಯಿಂದ ಕೋವಿಡ್ ಮತ್ತಷ್ಟು ವ್ಯಾಪಕವಾಗೋ ಭೀತಿ ಸೃಷ್ಟಿಯಾಗಿದೆ.


ಭಾರತದಲ್ಲಿ ಕೊರೋನಾ ಆರ್ಭಟ:


ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌, ಏಪ್ರಿಲ್ 21ರಿಂದ ದಿನ‌ ಒಂದರಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಹಾಗೂ ಏಪ್ರಿಲ್ 30ರಿಂದ ದಿನ‌ ಒಂದರಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ತುಸು ಕಡಿಮೆಯಾಗಿ ಮೂರುವರೆ ಲಕ್ಷದಷ್ಟು ಜನ ಸೋಂಕು ಪೀಡಿತರಾಗುತ್ತಿದ್ದಾರೆ.


ಇದನ್ನೂ ಓದಿ: Covid-19 Death: ರಾಜ್ಯದಲ್ಲಿ ನಡೆದ ಲೋಕ-ವಿಧಾನಸಭಾ ಉಪ ಚುನಾವಣೆ; ಕಾರ್ಯನಿರ್ವಹಿಸಿದ 35 ಶಿಕ್ಷಕರುಗಳು ಕೊರೋನಾಗೆ ಬಲಿ!


ಶುಕ್ರವಾರ 3,43,144 ಪ್ರಕರಣಗಳು ಪತ್ತೆಯಾಗಿವೆ. ಡಿಸ್ಚಾರ್ಜ್ ಆದವರು 3,44,776 ಜನ. ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,40,46,809ಕ್ಕೆ ಏರಿಕೆ ಆಗಿದೆ.‌ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದೆ. ಶುಕ್ರವಾರ 4,000 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 2,62,317ಕ್ಕೆ ಏರಿಕೆ ಆಗಿದೆ.


ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಆಗ ಸೋಂಕು ಪೀಡಿತರ ಸಂಖ್ಯೆ ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಅತಿಹೆಚ್ಚಾಗಿತ್ತು.


(ವರದಿ - ಶಿವರಾಮ ಅಸುಂಡಿ)

Published by:MAshok Kumar
First published: