ತನ್ನ ಅಂಗಡಿಗೆ ತಾನೇ ಬೆಂಕಿ ಹಚ್ಚಿದ ಅಂಗಡಿ ಮಾಲಕ: ಪುತ್ತೂರಿನಲ್ಲೊಂದು ವಿಲಕ್ಷಣ ಘಟನೆ

ಮಹಮ್ಮದ್ ಅವರು ಏಕಾಏಕಿ ತನ್ನ ಅಂಗಡಿಗೆ ಬೆಂಕಿ ಹಚ್ಚಿದ್ದು ಸ್ಥಳಿಯರಲ್ಲಿ ಅಚ್ಚರಿಯನ್ನು ಹುಟ್ಟಿಸಿದೆ. ಘಟನೆಗೆ ಕಾರಣ ಏನೆಂದು ತಿಳಿಯಲು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

news18-kannada
Updated:September 8, 2020, 7:09 AM IST
ತನ್ನ ಅಂಗಡಿಗೆ ತಾನೇ ಬೆಂಕಿ ಹಚ್ಚಿದ ಅಂಗಡಿ ಮಾಲಕ: ಪುತ್ತೂರಿನಲ್ಲೊಂದು ವಿಲಕ್ಷಣ ಘಟನೆ
ಬೆಂಕಿ ನಂದಿಸುತ್ತಿರುವ ವ್ಯಕ್ತಿ
  • Share this:
ಮಂಗಳೂರು(ಸೆಪ್ಟೆಂಬರ್ 08):​ ವ್ಯಾಪಾರ ಮಾಡುತ್ತಿದ್ದ ಅಂಗಡಿಗೆ ಅದರ ಮಾಲಕನೇ ಬೆಂಕಿ ಹಚ್ಚಿ ಅಂಗಡಿಯೊಳಗಿನ ಸಾಮಾಗ್ರಿಗಳನ್ನು ಸುಟ್ಟು ಭಸ್ಮ ಮಾಡಿದ ವಿಚಿತ್ರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ನಿನ್ನೆ ನಡೆದಿದೆ. ತಾಲೂಕಿನ ಈಶ್ವರಮಂಗಲದ ಮಾವಿನಕಟ್ಟೆ ನಿವಾಸಿ ಮಹಮ್ಮದ್ ತನ್ನ ಅಂಗಡಿಗೆ ಬೆಂಕಿ ಹಚ್ಚಿದ ವಿಚಿತ್ರ ವ್ಯಕ್ತಿಯಾಗಿದ್ದಾರೆ‌. ಹಾಡುಹಗಲೇ ಅಂಗಡಿ ಮಾಲಕ ಈ ಕೃತ್ಯವನ್ನು ನಡೆಸಿದ್ದು, ಸ್ಥಳಿಯರ ಈ ಘಟನೆಯನ್ನು ಗಮನಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಇದೇ ಗೂಡಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಇವರು ಲಾಕ್‌ಡೌನ್ ಬಳಿಕ ಕಳೆದ ಎರಡು ತಿಂಗಳಿನಿಂದ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಅಂಗಡಿಯಲ್ಲಿ ಸ್ಟೇಷನರಿ ಸಾಮಾಗ್ರಿ ಮತ್ತು ಚಹಾ ಹೊಂದಿರುವ ಸಣ್ಣ ಕ್ಯಾಂಟೀನ್ ಕೂಡಾ ಅದರೊಳಗಿತ್ತು. ಇಂದು  ಬೆಳಿಗ್ಗೆ ಎಂದಿನಂತೆ ಮಹಮ್ಮದ್‌ರವರು ಅಂಗಡಿ ಬಾಗಿಲು ತೆರೆದಿದ್ದರು.

ಮಧ್ಯಾಹ್ನ ಆಗುತ್ತಲೇ ಅಂಗಡಿಯೊಳಗಿನಿಂದ ಹೊರಗೆ ಬಂದು ತನ್ನ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಅಂಗಡಿಯತ್ತ ಧಾವಿಸಿದ್ದು, ಆ ವೇಳೆ ಬೆಂಕಿ ನಂದಿಸದಂತೆ ಮಾಲಕ ಮಹಮ್ಮದ್‌ರವರು ತಡೆದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬೆಂಕಿ ನಂದಿಸಲು ಅಂಗಡಿ ಕಡೆ ಬಂದ ಸ್ಥಳೀಯರನ್ನು ತಡೆದ ಅಂಗಡಿ ಮಾಲಕ ಎಂದು ಹೇಳಿ ತಡೆದಿದ್ದಾರೆ. ಆದರೆ, ಸ್ಥಳೀಯರು ಮಹಮ್ಮದ್ ಅಲ್ಲಿಂದ ತೆರಳಿದ ಬಳಿಕ ಅಂಗಡಿಯೊಳಗಿನ ಬೆಂಕಿಯನ್ನು ನಂದಿಸಿದ್ದಾರೆ. ಈ ವೇಳೆಗೆ ಸ್ಥಳೀಯರು ಪೊಲೀಸರಿಗೂ ಮಾಹಿತಿ ನೀಡಿದ್ದು, ಸ್ಥಳಕ್ಕೆ ಸಂಪ್ಯ ಪೋಲೀಸರೂ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ : ಪ್ರವಾಹದಿಂದ ರಾಜ್ಯಕ್ಕೆ 8071 ಕೋಟಿ ರೂ ನಷ್ಟ : ಕೇಂದ್ರದ ಅಧ್ಯಯನ ತಂಡಕ್ಕೆ ಸಿಎಂ ಯಡಿಯೂರಪ್ಪ ಮಾಹಿತಿ

ಅವಘಡದಿಂದ ಅಂಗಡಿಯೊಳಗಿದ್ದ ಸುಮಾರು  15 ಸಾವಿರಕ್ಕೂ ಹೆಚ್ಚು ಸ್ಟೇಷನರಿ ಸಾಮಾಗ್ರಿಗಳು ಸುಟ್ಟು ಭಸ್ಮವಾಗಿದೆ. ಅಂಗಡಿಯೊಳಗೆ ಚಹಾ ಮಾಡಲು ಇಟ್ಟಿದ್ದ ಸ್ಟೌವ್‌ನ ಸಣ್ಣ ಗಾತ್ರದ ಸಿಲಿಂಡರ್ ಬೆಂಕಿಗೆ ಆಹುತಿಯಾಗಿ ಸ್ಪೋಟಗೊಂಡಿದ್ದರೂ ಯಾವುದೇ ಹೆಚ್ಚಿನ ಅನಾಹುತ ಉಂಟಾಗಿಲ್ಲ. ಅಂಗಡಿಯ ಮಾಡು ಹೊರತುಪಡಿಸಿ ಉಳಿದೆಲ್ಲವೂ ಬೆಂಕಿಗೆ ಆಹುತಿಯಾಗಿದೆ.

ಮಹಮ್ಮದ್ ಅವರು ಏಕಾಏಕಿ ತನ್ನ ಅಂಗಡಿಗೆ ಬೆಂಕಿ ಹಚ್ಚಿದ್ದು ಸ್ಥಳಿಯರಲ್ಲಿ ಅಚ್ಚರಿಯನ್ನು ಹುಟ್ಟಿಸಿದೆ. ಘಟನೆಗೆ ಕಾರಣ ಏನೆಂದು ತಿಳಿಯಲು ಪೊಲೀಸರು ಮಹಮ್ಮದ್‌ರನ್ನು ವಿಚಾರಣೆ ನಡೆಸುತ್ತಿದ್ದಾರೆ.
Published by: G Hareeshkumar
First published: September 8, 2020, 7:09 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading