ಕಲಬುರ್ಗಿ (ಆಗಸ್ಟ್ .20):ಪುಡಿ ರೌಡಿಗಳ ಅಟ್ಟಹಾಸಕ್ಕೆ ಕಲಬುರ್ಗಿ ಮಹಾನಗರದಲ್ಲಿ ಯುವಕನೋರ್ವ ಬಲಿಯಾಗಿದ್ದಾನೆ. ಹಾಡು ಹಗಲೆ ಪುಡಿ ರೌಡಿಗಳು ನಗರದಲ್ಲಿ ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ತುಂತುರು ಮಳೆಯ ನಡುವೆಯೇ ಯುವಕನಿಗೆ ಚಾಕು ಇರಿದ ಘಟನೆ ಕಲಬುರ್ಗಿಯ ಸಾರ್ವಜನಿಕ ಉದ್ಯಾನವನ ಮುಂಭಾಗದಲ್ಲಿ ನಡೆದಿದೆ.
ಬಲ ತೊಡೆಯ ಮೇಲೆ ಚಾಕುವಿನಿಂದ ಇರಿದ ಪರಿಣಾಮ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ದಿದ್ದಾನೆ.
ತೀವ್ರ ರಕ್ತಸ್ರಾವದಿಂದ ಯುವಕ ಕೊನೆಯುಸಿರೆಳೆದಿದ್ದಾನೆ. ಮೃತ ಯುವಕನನ್ನು ವೀರೇಶ್ ಕಡಗಂಚಿ(21) ಎಂದು ಗುರುತಿಸಲಾಗಿದೆ. ರಾಣೇಶ್ ಪೀರ್ ದರ್ಗಾ ಪ್ರದೇಶದ ನಿವಾಸಿಯಾಗಿದ್ದ ವೀರೇಶ್, ಶರಣಬಸವೇಶ್ವರ ಪದವಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಪಲ್ಸರ್ ಬೈಕ್ ನಲ್ಲಿ ಬಂದ ಮೂರು ಜನ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ಏಕಾ ಏಕಿಯಾಗಿ ಯುವಕನ ತೊಡೆಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು, ಕ್ಷಣಾರ್ಧದಲ್ಲಿ ಅಲ್ಲಿಂದ ಪರಾಗಿ ಆಗಿದ್ದಾರೆ.
ತೊಡೆಗೆ ಚಾಕುವಿನಿಂದ ಇರಿದಿದ್ದರಿಂದ ಯುವಕ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ದಾನೆ. ಜಿಟಿ ಜಿಟಿ ಮಳೆಯಿಂದಾಗಿ ಇಡೀ ರಸ್ತೆ ರಕ್ತಮಯಗುವಂತಾಗಿತ್ತು. ಮುಖ್ಯ ರಸ್ತೆಯಲ್ಲಿಯೇ ಘಟನೆ ನಡೆದಿದ್ದರಿಂದ ನೂರಾರು ಜನ ಜಮಾಯಿಸುವಂತಾಗಿತ್ತು. ಯುವತಿಯ ವಿಚಾರಕ್ಕೆ ಸಂಬಂಧಿಸಿ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ದಾಳಿ ಮಾಡಿದವರು ಯಾರೆಂಬ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ವಿದ್ಯಾರ್ಥಿಯ ಸಾವಿನ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರ ರೋದನ ಮುಗಿಲು ಮುಟ್ಟುವಂತೆ ಮಾಡಿದೆ. ದುಷ್ಕರ್ಮಿಗಳ ಕೃತ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆಯೂ ಹಳೆ ಜೇವರ್ಗಿ ರಸ್ತೆಯಲ್ಲಿ ವ್ಯಕ್ತಿಯೋರ್ವನ ಮೇಲೆ ಹಾಡಹಗಲೇ ಪುಡಿ ರೌಡಿಗಳು ದಾಳಿ ಮಾಡಿದ್ದರು. ಮಾರಣಾಂತಿಕ ಹಲ್ಲೆಗೊಳಗಾದಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪದೇ ಪದೇ ಹಾಡಹಗಲೇ ಈ ರೀತಿಯ ಘಟನೆಗಳು ನಡೆಯುತ್ತಿರುವುದು ಕಲಬುರ್ಗಿ ಜನತೆಯನ್ನು ಆತಂಕಕ್ಕೀಡು ಮಾಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ