HOME » NEWS » District » DAKSHINA KANNADA FARMERS DO NOT DEPOSITED THEM GUNS DURING ELECTION TIME RHHSN KKM

ಚುನಾವಣೆ ಸಮಯದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ರೈತರು ಕೋವಿಗಳನ್ನು ತಮ್ಮ ಬಳಿಯೇ ಇರಿಸಿಕೊಳ್ಳಬಹುದು!

ಕರಾವಳಿಯಲ್ಲಿ ಭತ್ತ, ಅಡಿಕೆ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಾರೆ. ಹೀಗಾಗಿ ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳು ಅತ್ಯಗತ್ಯವಾಗಿದೆ. ಇದೀಗ ಜಿಲ್ಲಾಧಿಕಾರಿಗಳ ಈ ಆದೇಶದಿಂದ ರೈತರು ಫುಲ್ ಖುಷಿಯಾಗಿದ್ದಾರೆ.

news18-kannada
Updated:December 17, 2020, 2:36 PM IST
ಚುನಾವಣೆ ಸಮಯದಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ರೈತರು ಕೋವಿಗಳನ್ನು ತಮ್ಮ ಬಳಿಯೇ ಇರಿಸಿಕೊಳ್ಳಬಹುದು!
ಕೋವಿ
  • Share this:
ದಕ್ಷಿಣ ಕನ್ನಡ; ಚುನಾವಣೆ ಸಮಯದಲ್ಲಿ ರೈತರು ಸೇರಿದಂತೆ ಎಲ್ಲರೂ ತಮ್ಮ ಪರವಾನಗಿಯುಳ್ಳ ಕೋವಿಗಳನ್ನು ಸಮೀಪದ ಠಾಣೆಯಲ್ಲಿ ಠೇವಣಿ ಇಡಬೇಕಾಗುತ್ತೆ. ಇದೀಗ ಗ್ರಾಮ ಪಂಚಾಯತಿ ಎಲೆಕ್ಷನ್ ಬಂದಿದ್ದೂ ರಾಜ್ಯದೆಲ್ಲೆಡೆ ಈ ಆದೇಶ ಜಾರಿಯಲ್ಲಿದೆ. ಆದರೆ, ದಕ್ಷಿಣಕನ್ನಡ ಜಿಲ್ಲೆಯ ರೈತರಿಗೆ ಮಾತ್ರ ಜಿಲ್ಲಾಧಿಕಾರಿಗಳು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಠೇವಣಿ ಇಡುವ ವಿಚಾರದಲ್ಲಿ ಕೆಲ ಸಡಿಲಿಕೆಗಳನ್ನು ಮಾಡಿದ್ದಾರೆ. ಚುನಾವಣೆ ಬಂದಾಗ ಸಾರ್ವಜನಿಕ ಶಾಂತಿ ಮತ್ತು ಶಿಸ್ತುಪಾಲಾನ ಮುಂಜಾಗ್ರತ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶಿಸಲಾಗುತ್ತೆ.

ಇದೀಗ ಗ್ರಾಮ ಪಂಚಾಯತ್ ಚುನಾವಣೆ ಬಂದಿರುವುದರಿಂದ ಶಸ್ತ್ರಾಸ್ತ್ರ ಡೆಪಾಸಿಟ್ ಮಾಡುವಂತೆ ರಾಜ್ಯದಲ್ಲಿ ಆದೇಶ ಮಾಡಲಾಗಿದೆ. ಆದರೆ ಈ ಆದೇಶದಿಂದಾಗಿ ಬೆಳೆ ರಕ್ಷಣೆಗಾಗಿ ಕೋವಿಗಳನ್ನು ಹೊಂದಿರುವ ರೈತರಿಗೆ ತೊಂದರೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿಯೂ ಪ್ರಾರಂಭದಲ್ಲಿ ಜಿಲ್ಲಾಧಿಕಾರಿ ಈ ಆದೇಶವನ್ನು ಮಾಡಿದ್ದರು. ಆದರೆ ಆ ಬಳಿಕ ರೈತರಿಗೆ ಆಗುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರು. ಹೀಗಾಗಿ ಇದೀಗ ಜಿಲ್ಲಾಧಿಕಾರಿಗಳು ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಅಪರಾಧ ಹಿನ್ನಲೆ ಹೊರತುಪಡಿಸಿ ಉಳಿದ ರೈತರಿಗೆ ಶಸ್ತ್ರಾಸ್ತ್ರ ಠೇವಣಿಯಲ್ಲಿ ವಿನಾಯಿತಿ ನೀಡಿದ್ದಾರೆ.

ಇದನ್ನು ಓದಿ: Farmers Protest: ಎಲ್ಲರಿಗೂ ಪ್ರತಿಭಟಿಸುವ ಹಕ್ಕಿದೆ, ರೈತರ ಹೋರಾಟ ಮುಂದುವರೆಯಬೇಕು; ಸುಪ್ರೀಂ ಕೋರ್ಟ್​

ಶಸ್ತ್ರಾಸ್ತ್ರ ಕಾಯ್ದೆಯಡಿ ಪರವಾನಿಗೆದಾರರಿಗೆ ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರದ ಅವಶ್ಯಕತೆ ಇದ್ದರೆ ಪೂರಕ ದಾಖಲೆಗಳೊಂದಿಗೆ ತಾಲೂಕು ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದಕ್ಕಾಗಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸ್ಕ್ರೀನಿಂಗ್ ಸಮಿತಿಗಳನ್ನು ರಚಿಸಲಾಗಿದ್ದು,ಈ ಸಮಿತಿಗಳಿಗೆ  ಅಹವಾಲುಗಳನ್ನು ಸಲ್ಲಿಸಬಹುದು. ಈ ಸ್ಕ್ರೀನಿಂಗ್ ಸಮಿತಿಗಳಿಗೆ ಅಹ೯ ಪ್ರಕರಣಗಳಲ್ಲಿ ಶಸ್ತ್ರಾಸ್ತ್ರಗಳನ್ನು ಹಾಗೂ ಆತ್ಮ ರಕ್ಷಣೆಗಾಗಿ ಆಯುಧದ ಅವಶ್ಯಕತೆ ಇದ್ದವರಿಗೆ ಠೇವಣಿ ಇಡುವುದರಿಂದ ವಿನಾಯಿತಿ ನೀಡಲು ಅವಕಾಶ ನೀಡಲಾಗಿದೆ.

ಕರಾವಳಿಯಲ್ಲಿ ಭತ್ತ, ಅಡಿಕೆ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಾರೆ. ಹೀಗಾಗಿ ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳು ಅತ್ಯಗತ್ಯವಾಗಿದೆ. ಇದೀಗ ಜಿಲ್ಲಾಧಿಕಾರಿಗಳ ಈ ಆದೇಶದಿಂದ ರೈತರು ಫುಲ್ ಖುಷಿಯಾಗಿದ್ದಾರೆ.
Published by: HR Ramesh
First published: December 17, 2020, 2:36 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories