• Home
  • »
  • News
  • »
  • district
  • »
  • ಯಲಹಂಕದ ಗ್ರಾಮ ಪಂಚಾಯತಿಯಲ್ಲಿ ಅಕ್ರಮ ಆರೋಪ: ದಲಿತ ಸಂಘಟನೆಗಳ ಪ್ರತಿಭಟನೆ

ಯಲಹಂಕದ ಗ್ರಾಮ ಪಂಚಾಯತಿಯಲ್ಲಿ ಅಕ್ರಮ ಆರೋಪ: ದಲಿತ ಸಂಘಟನೆಗಳ ಪ್ರತಿಭಟನೆ

ಜೈಭೀಮ್ ದಲಿತ ಕ್ರಿಯಾ ಸಮಿತಿ ಸದಸ್ಯರು

ಜೈಭೀಮ್ ದಲಿತ ಕ್ರಿಯಾ ಸಮಿತಿ ಸದಸ್ಯರು

ಯಲಹಂಕದ ಬಂಡಿಕೊಡಿಗೆಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬೃಹತ್ ಕೈಗಾರಿಕಾ ಪ್ರದೇಶಗಳಿದ್ದು ತೆರಿಗೆ ವಂಚನೆ ಮಾಡಿ ಸರ್ಕಾರಕ್ಕೆ ಮತ್ತು ಸಾರ್ವಜನಿಕರ ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ಜೈ ಭೀಮ್ ದಲಿತ ಸಂಘಟನೆಯ ಸದಸ್ಯರು ದೂರು ದಾಖಲಿಸಿದ್ದಾರೆ.

  • Share this:

ಯಲಹಂಕ: ಗ್ರಾಮ ಪಂಚಾಯತಿ ಕಾಮಗಾರಿಗಳು ಮತ್ತು ಹಣ ಬಿಡುಗಡೆಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಜೈ ಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಸದಸ್ಯರು ಯಲಹಂಕ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ಮಾಡಿ ಜಿಲ್ಲಾ ಪಂಚಾಯತಿ ಇ.ಓ ಕಿಶೋರ್ ಅವರಿಗೆ ಮನವಿ ಸಲ್ಲಿಸಿದರು. 


ಬೆಂಗಳೂರು ಉತ್ತರ ಯಲಹಂಕ ತಾಲ್ಲೂಕು ವ್ಯಾಪ್ತಿಯ ಬಂಡಿಕೊಡಿಗೇಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಸುಮಾರು 14 ಕೋಟಿಯಷ್ಟು ಹಣ ದುರುಪಯೋಗ ಆಗಿದ್ದು ಅಧಿಕಾರಿಗಳು ಕಾಮಗಾರಿಗಳನ್ನೇ ಮಾಡದೆ ಹಣ ಬಿಡುಗಡೆ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಜೈ ಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಅಧ್ಯಕ್ಷ ಬಿ.ಆರ್. ಮುನಿರಾಜು ಅವರು ಅಧಿಕಾರಿಗಳನ್ನ ಈ ಅಕ್ರಮದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಮುನಿರಾಜು ಮೇಲೆ ಬೆದರಿಕೆ ಹಾಕಲಾಯಿತು ಎಂದು ಬಾಗಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಆ ದೂರಿನ ತನಿಖೆ ಮುಂದುವರೆಸಿದ್ದಾರೆ.


ಇದನ್ನೂ ಓದಿ: ಗಾಂಜಾ ಸೇವಿಸಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್ ಚಾಲನೆ; ಪ್ರಶ್ನಿಸಿದ ಪೊಲೀಸ್ ಕಾನ್ಸ್​​​ಟೇಬಲ್​​ಗೆ ಹಲ್ಲೆ


ಬಂಡಿಕೊಡಿಗೆಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬೃಹತ್ ಕೈಗಾರಿಕಾ ಪ್ರದೇಶಗಳಿದ್ದು ತೆರಿಗೆ ವಂಚನೆ ಮಾಡಿ ಸರ್ಕಾರಕ್ಕೆ ಮತ್ತು ಸಾರ್ವಜನಿಕರ ವಂಚನೆ ಮಾಡಲಾಗಿದೆ. ಹಲವು ಕಾಮಗಾರಿಗಳಿಗೆ ಹಣ ಬಿಡುಗಡೆ ಆಗಿದ್ದು ಕಾಮಗಾರಿಗಳು ಪೂರ್ಣಗೊಳ್ಳದೆ, ಕೆಲವು ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡಿದ್ದಷ್ಟೆಕ್ಕೆ ಹಣ ಬಿಡುಗಡೆ ಮಾಡಿ ವಂಚನೆ ಮಾಡಿದ್ದಾರೆ ಎಂದು ಜೈ ಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಸದಸ್ಯರು ಆರೋಪ ಮಾಡಿದ್ದಾರೆ.
ಜೈ ಭಿಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಸದಸ್ಯರ ತಂಡ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕಿಶೋರ್ ಅವರಿಗೆ ಮನವಿ ಸಲ್ಲಿಸಿದ್ದು ಕಾನೂನು ರೀತ್ಯ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.


ನ್ಯೂಸ್ 18 ಜೊತೆ ಮಾತನಾಡಿದ ಕಿಶೋರ್, ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಅರ್ಜಿ ರವಾನೆ ಮಾಡಲಾಗಿದೆ. ತಪ್ಪಿತಸ್ಥರು ಯಾರೇ ಇದ್ದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.


ವರದಿ: ನವೀನ್ ಕುಮಾರ್

Published by:Vijayasarthy SN
First published: