ಕಲಬುರ್ಗಿಯಲ್ಲಿ ಕೊರೋನಾ ರುದ್ರನರ್ತನ ; ನಗರ ಪ್ರದೇಶದ ಸಂಪೂರ್ಣ ಲಾಕ್ ಡೌನ್ ಗೆ ಸರ್ಕಾರಕ್ಕೆ ಡಿಸಿ ಪತ್ರ

ಒಂದು ವಾರದ ಅವಧಿಗೆ ಕಲಬುರ್ಗಿ ನಗರಕ್ಕೆ ಲಾಕ್ ಡೌನ್ ಜಾರಿಗೆ ಅನುಮತಿ ನೀಡುವಂತೆ ಕಲಬುರ್ಗಿ ಜಿಲ್ಲಾಧಿಕಾರಿ ಶರತ್ ಬಿ. ಸಭೆಯ ನಡಾವಳಿಗಳನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕಳುಹಿಸಿಕೊಟ್ಟಿದ್ದಾರೆ. 

news18-kannada
Updated:July 12, 2020, 7:41 PM IST
ಕಲಬುರ್ಗಿಯಲ್ಲಿ ಕೊರೋನಾ ರುದ್ರನರ್ತನ ; ನಗರ ಪ್ರದೇಶದ ಸಂಪೂರ್ಣ ಲಾಕ್ ಡೌನ್ ಗೆ ಸರ್ಕಾರಕ್ಕೆ ಡಿಸಿ ಪತ್ರ
ಸಾಂದರ್ಭಿಕ ಚಿತ್ರ
  • Share this:
ಕಲಬುರ್ಗಿ(ಜುಲೈ.12): ಕಲಬುರ್ಗಿ ಜಿಲ್ಲೆಯಲ್ಲಿ ಕೊರೋನಾ ರುದ್ರ ತಾಂಡವವಾಡುತ್ತಿದೆ. ಸೋಂಕಿತರ ಸಂಖ್ಯೆ 2024ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಸೋಂಕಿತರ ಮತ್ತು ಸಾವನ್ನಪ್ಪುತ್ತಿರುವವರ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಅಲ್ಲದೆ ಟ್ರಾವೆಲ್ ಹಿಸ್ಟರಿ ಇಲ್ಲದ ಸೋಂಕಿತರ ಸಂಖ್ಯೆ ದುಪ್ಪಟ್ಟಾಗಿದೆ.

ಜಿಲ್ಲಾಡಳಿತ ಏನೆಲ್ಲಾ ಪ್ರಯತ್ನಗಳನ್ನು ನಡೆಸಿದರೂ ಸೋಂಕು ನಿಯಂತ್ರಣಕ್ಕೆ ಬಾರದಂತಾಗಿದೆ. ಈ ಹಿನ್ನೆಲೆಯಲ್ಲಿ ಕಲಬುರ್ಗಿ ನಗರದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಇಡೀ ನಗರ ಲಾಕ್‌ಡೌನ್‌ಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಜಿಲ್ಲಾಧಿಕಾರಿ ಶರತ್ ಬಿ. ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಇತ್ತೀಚಿನ ದಿನಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣದ ಜೊತೆಗೆ ಸಾವಿನ ಸಂಖ್ಯೆಯೂ ಗರಿಷ್ಠ ಮಟ್ಟದಲ್ಲಿ ಏರಿಕೆಯಾಗಿದೆ. ನಗರ ಪ್ರದೇಶದಲ್ಲಿನ ಸೋಂಕು ಗ್ರಾಮೀಣ ಪ್ರದೇಶಕ್ಕೆ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ. ಅಲ್ಲದೆ ನಗರದ ಪ್ರದೇಶದಲ್ಲಿಯೂ ಬೇರೆ ಬೇರೆ ಬಡಾವಣೆಗಳಿಗೆ ವ್ಯಾಪಕವಾಗಿ ಹಬ್ಬದಂತೆ ನಿಯಂತ್ರಣಕ್ಕಾಗಿ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ. ಈ ಸಂಬಂಧ ಜುಲೈ 10 ರಂದು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.ಜಿಲ್ಲಾ ಮಟ್ಟದ ಉನ್ನತಾಧಿಕಾರಿಳ ಸಭೆಯಲ್ಲಿ ಎಲ್ಲಾ ಅಧಿಕಾರಿಗಳು ಕನಿಷ್ಟ ಒಂದು ವಾರದವರೆಗೆ ಕಲಬುರ್ಗಿ ನಗರಕ್ಕೆ ಸೀಮಿತವಾಗುವಂತೆ ಲಾಕ್ ಡೌನ್ ಮಾಡುವುದು ಸೂಕ್ತವೆಂದು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಒಂದು ವಾರದ ಅವಧಿಗೆ ಕಲಬುರ್ಗಿ ನಗರಕ್ಕೆ ಲಾಕ್ ಡೌನ್ ಜಾರಿಗೆ ಅನುಮತಿ ನೀಡುವಂತೆ ಕಲಬುರ್ಗಿ ಜಿಲ್ಲಾಧಿಕಾರಿ ಶರತ್ ಬಿ. ಸಭೆಯ ನಡಾವಳಿಗಳನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕಳುಹಿಸಿಕೊಟ್ಟಿದ್ದಾರೆ.

ಇದನ್ನೂ ಓದಿ : ಉತ್ತರ ಕನ್ನಡದಲ್ಲಿ ಟ್ರಾವೆಲ್ ಹಿಸ್ಟರಿ ಮುಚ್ಚಿಡುವ ಜನ ; ಕೊರೋನಾ ಸೋಂಕಿತರ ಸಂಖ್ಯೆಯ ಪ್ರಮಾಣ ಹೆಚ್ಚಳ

ಜಿಲ್ಲೆಯಲ್ಲಿನ ಕೊರೋನಾ ಸೋಂಕಿನ ಅಂಕಿ-ಅಂಶಗಳನ್ನೂ ನೀಡಿರುವ ಜಿಲ್ಲಾಧಿಕಾರಿ, ಲಾಕ್ ಡೌನ್ ಗೆ ಅನುವತಿ ನೀಡುವಂತೆಯೂ ಮನವಿ ಮಾಡಿದ್ದಾರೆ. ಸರ್ಕಾರ ಒಪ್ಪಿಗೆ ಸೂಚಿಸಿದ್ದಲ್ಲಿ ಕಲಬುರ್ಗಿ ನಗರ ಲಾಕ್‌ಡೌನ್ ಆಗುವುದು ಪಕ್ಕಾ ಆಗಿದೆ. ಮುಖ್ಯಮಂತ್ರಿಗಳ ಜೊತೆ ನಾಳೆ ನಡೆಯಲಿರುವ ಜಿಲ್ಲಾಧಿಕಾರಿಗಳ ವೀಡಿಯೋ ಕಾನ್ಫರೆನ್ಸ್ ನಲ್ಲಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.

ಲಾಕ್‌ಡೌನ್ ಜಾರಿಯಾದಲ್ಲಿ ಕಲಬುರ್ಗಿ ನಗರಕ್ಕೆ ಪ್ರವೇಶಿಸುವ ವಾಹನಗಳಿಗೆ ನಿರ್ಬಂಧ ಹಾಕಲಾಗುತ್ತದೆ. ಅಂತರ ಜಿಲ್ಲಾ ಹಾಗೂ ಗ್ರಾಮೀಣ ಪ್ರದೇಶದ ಸಾರಿಗೆ ಬಸ್ ಗಳೂ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ. ದಿನೇ ದಿನೇ ಸೋಂಕಿನ ಪ್ರಮಾಣ ವ್ಯಾಪಕಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಕೊರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
Published by: G Hareeshkumar
First published: July 12, 2020, 7:32 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading