ಹಾಸನ (ಜೂನ್ 17) ; ಕೋವಿಡ್-19 ಲಾಕ್ಡೌನ್ ವೇಳೆ ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳಿಗೆ ರಾಜ್ಯ ಸರ್ಕಾರ ಘೋಷಿಸಿರುವ ಆರ್ಥಿಕ ನೆರವಿನ ಪ್ಯಾಕೇಜ್ ಸಕಾಲದಲ್ಲಿ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಸಚಿವರಾದ ಕೆ. ಗೋಪಾಲಯ್ಯ ಅವರು ತಿಳಿಸಿದ್ದಾರೆ.
ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು "ಹೂ, ಹಣ್ಣು ತರಕಾರಿ ಬೆಳೆಗಾರರಿಗೆ ಘೋಷಿಸಿದ ಪರಿಹಾರದ ಪ್ಯಾಕೇಜ್ ಹಾಗೂ ಕಟ್ಟಡ ಕಾರ್ಮಿಕರು, ಅಗಸ ಮತ್ತು ಸವಿತಾ ಸಮಾಜಕ್ಕೆ ಬಿಡುಗಡೆ ಮಾಡಿರುವ ಅನುದಾನವೂ ಆದಷ್ಟು ಬೇಗ ಎಲ್ಲಾ ಅರ್ಹರಿಗೆ ತಲುಪಬೇಕು. ನಿಖರವಾಗಿ ಸಮೀಕ್ಷೆ ಮಾಡಿ, ವ್ಯಾಪಕ ಪ್ರಚಾರ ನೀಡಿ ಯಾರೂ ಕೈಬಿಟ್ಟು ಹೋಗದಂತೆ ನಿಗಾ ವಹಿಸಿ
ವಿಧವಾ ವೇತನ, ವೃದ್ಧಾಪ್ಯ ವೇತನ, ವಿಕಲ ಚೇತನರೂ ಸೇರಿದಂತೆ ಎಲ್ಲಾ ರೀತಿಯ ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ಪ್ರತಿ ತಿಂಗಳು ಮಾಸಿಕ ಪಿಂಚಣಿ ನೀಡಬೇಕು. ಕೋವಿಡ್-19 ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ಇತರೆ ರೋಗಿಗಳಿಗೂ ಹೆಚ್ಚಿನ ಚಿಕಿತ್ಸೆ ದೊರೆಯುವಂತೆ ಅಗತ್ಯ ಕ್ರಮವಹಿಸಬೇಕು" ಎಂದು ಸೂಚಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ