ಧಾರವಾಡ: ಖಾಸಗಿ ಆಸ್ಪತ್ರೆಗಳಲ್ಲಿನ ಬಡ ರೋಗಿಗಳ ಕೊರೋನಾ ಸ್ವಾಬ್ ಟೆಸ್ಟ್ ಉಚಿತಕ್ಕೆ ಜಿಲ್ಲಾಡಳಿತ ಸೂಚನೆ
ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಚಿಕಿತ್ಸೆಗೆ ದಾಖಲಾಗುವ ಎಲ್ಲಾ ಒಳ ಮತ್ತು ಹೊರ ರೋಗಿಗಳ ಸ್ವ್ಯಾಬ್ ಸಂಗ್ರಹಿಸಿ ಅವರಿಗೆ ಶುಲ್ಕ ವಿಧಿಸಿಲ್ಲ ಎಂಬ ಲಿಖಿತ ಟಿಪ್ಪಣಿಯೊಂದಿಗೆ ಹುಬ್ಬಳ್ಳಿಯ ಕಿಮ್ಸ್ ಮತ್ತು ಧಾರವಾಡದ ಡಿಮ್ಹಾನ್ಸ್ ಗೆ ಕಳುಹಿಸಿ ಕೊಟ್ಟರೆ ಅಲ್ಲಿ ಸರ್ಕಾರದ ವೆಚ್ಚದಲ್ಲಿಯೇ ಪರೀಕ್ಷೆ ಮಾಡಿ ವರದಿ ನೀಡಲಾಗುವುದು.
ಧಾರವಾಡ : ಕೊರೊನಾ ವೈರಸ್ ದಿಂದ ಇಡೀ ಮಾನವ ಕುಲವೇ ಕಂಗೆಟ್ಟು ಹೋಗಿದೆ. ನಿತ್ಯವು ಸೋಂಕಿತರ ಸಂಖ್ಯೆ ಮಾತ್ರ ಏರುತ್ತಲೇ ಇದೆ. ಅಲ್ಲದೇ ಯಾವುದೇ ಚಿಕಿತ್ಸೆ ಪಡೆಯ ಬೇಕಿದ್ದರು ಕೊರೊನಾ ಟೆಸ್ಟ್ ಮಾಡಿಸಲೇ ಬೇಕಿದೆ. ಆದ್ರೆ ಖಾಸಗಿ ಆಸ್ಪತ್ರೆಗೆ ದಾಖಲಾದ ಬಡರೋಗಿಗಳಿಗೆ ಹಣ ಕಟ್ಟಿ ಕೊರೊನಾ ಟೆಸ್ಟ್ ಮಾಡಿಸುವುದು ಕಷ್ಟಕರವಾಗುತ್ತಿತ್ತು, ಆದ್ರೆ ಈಗ ಬಡ ರೋಗಿಗಳ ಸ್ವಾಬ್ ಟೆಸ್ಟ್ ಉಚಿತ ಮಾಡಲು ಜಿಲ್ಲಾಧಿಕಾರಿ ಸಜ್ಜಾಗಿದ್ದಾರೆ. ಹೌದು ಜಿಲ್ಲೆಯಲ್ಲಿ ದಿನೇದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ರೆ, ಇತ್ತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗುವ ಒಳರೋಗಿಗಳು ಹಾಗೂ ಎಲ್ಲಾ ಹೊರರೋಗಿಗಳನ್ನು ಕಡ್ಡಾಯವಾಗಿ ಕೊರೊನಾ ತಪಾಸಣೆಗೆ ಒಳಪಡಿಸಬೇಕಿದೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಟೆಸ್ಟ್ ಗೆ ಶುಲ್ಕ ಪಾವತಿಸಬೇಕಿದೆ. ಆದರೆ ಕೆಲವು ಬಡ ರೋಗಿಗಳು ಭರಿಸಲು ಸಾಧ್ಯವಾಗುವುದಿಲ್ಲ. ಇಂತಹ ಬಡ ರೋಗಿಗಳ ಸ್ವ್ಯಾಬ್ ಸಂಗ್ರಹಿಸಿ ಸರ್ಕಾರದ ಕಿಮ್ಸ್ ಮತ್ತು ಡಿಮ್ಹಾನ್ಸ್ ಪ್ರಯೋಗಾಲಯಗಳಿಗೆ ಕಳುಹಿಸಿದರೆ ಉಚಿತವಾಗಿ ಪರೀಕ್ಷಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಪ್ರತಿನಿಧಿಗಳ ಸಭೆಯಲ್ಲಿ ಸೂಚನೆ ನೀಡಿದರು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ತಪಾಸಣೆಯ ಶುಲ್ಕ ಭರಿಸುವ ಸಾಮರ್ಥ್ಯ ಇಲ್ಲದ ಜನರು ಪರೀಕ್ಷೆ ಮತ್ತು ಚಿಕಿತ್ಸೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ.
ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಚಿಕಿತ್ಸೆಗೆ ದಾಖಲಾಗುವ ಎಲ್ಲಾ ಒಳ ಮತ್ತು ಹೊರ ರೋಗಿಗಳ ಸ್ವ್ಯಾಬ್ ಸಂಗ್ರಹಿಸಿ ಅವರಿಗೆ ಶುಲ್ಕ ವಿಧಿಸಿಲ್ಲ ಎಂಬ ಲಿಖಿತ ಟಿಪ್ಪಣಿಯೊಂದಿಗೆ ಹುಬ್ಬಳ್ಳಿಯ ಕಿಮ್ಸ್ ಮತ್ತು ಧಾರವಾಡದ ಡಿಮ್ಹಾನ್ಸ್ ಗೆ ಕಳುಹಿಸಿ ಕೊಟ್ಟರೆ ಅಲ್ಲಿ ಸರ್ಕಾರದ ವೆಚ್ಚದಲ್ಲಿಯೇ ಪರೀಕ್ಷೆ ಮಾಡಿ ವರದಿ ನೀಡಲಾಗುವುದು. ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಯ ಜೀವಗಳು ಅಮೂಲ್ಯವಾಗಿರುವದರಿಂದ ಇದು ಉತ್ತಮ ಕ್ರಮವಾಗಲಿದೆ ಎಂದು ಹೇಳಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ಸ್ವ್ಯಾಬ್ ಸಂಗ್ರಹಣೆ ಸಂದರ್ಭದಲ್ಲಿಯೇ ವ್ಯಕ್ತಿಗಳ ಸಮರ್ಪಕ ವಿಳಾಸ, ಸಂಪರ್ಕ ಸಂಖ್ಯೆ ಮತ್ತು ಜಿಲ್ಲೆಯ ಹೆಸರನ್ನು ನಿಖರವಾಗಿ ದಾಖಲಾಗಿಸಬೇಕು. ಅನ್ಯ ಜಿಲ್ಲೆಗಳ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಬೇಕು ಆದರೆ ಧಾರವಾಡ ಜಿಲ್ಲೆಯ ಹೆಸರಲ್ಲಿ ನೋಂದಾಯಿಸಬಾರದು.
ಅವರ ಸ್ವಂತ ಜಿಲ್ಲೆಯ ಹೆಸರಿನಲ್ಲಿಯೇ ನೋಂದಾಯಿಸಿಕೊಳ್ಳಬೇಕು. ನೋಂದಣಿ ಮತ್ತು ಎಸ್ ಆರ್ ಎಫ್ ಸಂಖ್ಯೆ ಸೃಜನೆಯ ಹಂತದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಸಿಬ್ಬಂದಿಗಳುಗೆ ಸಲಹೆ ನೀಡುವಂತೆ ಹೇಳಿದರು.
ಐಸಿಯುನಲ್ಲಿರುವ ಎಲ್ಲಾ ರೋಗಿಗಳ ಆ್ಯಂಟಿ ಬಯೋಗ್ರಾಮ್ ಮಾಡುವುದು ಕಡ್ಡಾಯವಾಗಿದ್ದು. ಸೋಂಕಿತ ರೋಗಿಗಳ ಪ್ರಾಥಮಿಕ ಸಂಪರ್ಕದಲ್ಲಿ ಇರುವವರು ಹಾಗೂ ಕುಟುಂಬದ ಸದಸ್ಯರನ್ನು ಕಡ್ಡಾಯವಾಗಿ ಕೋವಿಡ್ ತಪಾಸಣೆಗೆ ಒಳಪಡಿಸುವಂತೆ ಸೂಚಿಸಿದ್ದಾರೆ.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ