HOME » NEWS » District » DHARWAD LOCKDOWN DHARWAD IS ALSO ON LOCKDOWN FOR A WEEK FROM JULY 15 ANNOUNCED BY MINISTER JAGADEESH SHETTAR RH

Dharwad Lockdown: ಜು.15ರಿಂದ ಒಂದು ವಾರ ಧಾರವಾಡ ಕೂಡ ಲಾಕ್‌ಡೌನ್; ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಘೋಷಣೆ

Dharwad Lockdown News: ಈ ಸಂಬಂಧ ಎಲ್ಲರ ಜೊತೆ ಮಾತುಕತೆ ನಡೆಸಿದ್ದೇನೆ. ಲಾಕ್ಡೌನ್ ಆಗಲಿ ಎಂಬ ಸಲಹೆ ನೀಡಿದ್ದಾರೆ. ಈ ಕುರಿತು ವಿಡಿಯೋ ಕಾನ್ಪರೆನ್ಸ್​ನಲ್ಲಿ ಲಾಕ್ಡೌನ್ ಬಗ್ಗೆ ಕೇಳಲಾಗಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಲಾಕ್ಡೌನ್ ಅಧಿಕಾರ ನಮಗೇ ಕೊಟ್ಟಿದ್ದಾರೆ. ಆ ಹಿನ್ನೆಲೆಯಲ್ಲಿ ಲಾಕ್ಡೌನ್ ಘೋಷಿಸುತ್ತಿದ್ದೇನೆ ಎಂದರು.

news18-kannada
Updated:July 13, 2020, 4:42 PM IST
Dharwad Lockdown: ಜು.15ರಿಂದ ಒಂದು ವಾರ ಧಾರವಾಡ ಕೂಡ ಲಾಕ್‌ಡೌನ್; ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಘೋಷಣೆ
ಸಚಿವ ಜಗದೀಶ್ ಶೆಟ್ಟರ್.
  • Share this:
ಧಾರವಾಡ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಾರಕ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜು.14ರ ರಾತ್ರಿ 8ಗಂಟೆಯಿಂದ ಜು.23ರವರೆಗೆ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್​ಡೌನ್​ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ.

ಧಾರವಾಡದಲ್ಲೂ ಕೂಡ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ  ಜಿಲ್ಲೆಯಾದ್ಯಂತ ಜುಲೈ 15 ರ ಬೆಳಿಗ್ಗೆ 10 ಗಂಟೆಯಿಂದ ಜುಲೈ 24 ರ ರಾತ್ರಿ 8 ಗಂಟೆಯವರೆಗೆ ಲಾಕ್ ಡೌನ್ ಮಾಡಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಘೋಷಣೆ ಮಾಡಿದ್ದಾರೆ.

ಧಾರವಾಡದ ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್ ಅವರು, ನಿರ್ಮಾಣ ಕಾಮಗಾರಿ, ಕೈಗಾರಿಕೆ ಚಟುವಟಿಕೆಗಳು, ಜೀವನಾವಶ್ಯಕ ವಸ್ತುಗಳ ಪೂರೈಕೆಗೆ ಲಾಕ್​ಡೌನ್​ನಿಂದ ವಿನಾಯಿತಿ ನೀಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಅಧಿಕೃತವಾಗಿ ವಿವರ ಆದೇಶ ಹೊರಡಿಸುವರು ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯಿಂದ ಹೊರ ಹೋಗುವವರು ಹೋಗಲಿ. ಬೆಂಗಳೂರು ಮಾದರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಎಲ್ಲರ ಜೊತೆ ಮಾತುಕತೆ ನಡೆಸಿದ್ದೇನೆ. ಲಾಕ್ಡೌನ್ ಆಗಲಿ ಎಂಬ ಸಲಹೆ ನೀಡಿದ್ದಾರೆ. ಈ ಕುರಿತು ವಿಡಿಯೋ ಕಾನ್ಪರೆನ್ಸ್ ದಲ್ಲಿ ಲಾಕ್ಡೌನ್ ಬಗ್ಗೆ ಕೇಳಲಾಗಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಲಾಕ್ಡೌನ್ ಅಧಿಕಾರ ನಮಗೇ ಕೊಟ್ಟಿದ್ದಾರೆ. ಆ ಹಿನ್ನೆಲೆ ಲಾಕ್ಡೌನ್ ಘೋಷಿಸುತ್ತಿದ್ದೇನೆ ಎಂದರು.

ಇದನ್ನು ಓದಿ: ರಾಜ್ಯದ ಡಿಸಿಗಳ ಜತೆ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್​​​: ಇಲ್ಲಿವೆ ಸಭೆಯ ಮುಖ್ಯಾಂಶಗಳು

ಜಿಲ್ಲೆಯಲ್ಲಿ ಜನರು ಅನಗತ್ಯವಾಗಿ ಹೊರ ಹೋಗಬಾರದು. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಧಾರ್ಮಿಕ ಕೇಂದ್ರಗಳಲ್ಲಿ ಹೆಚ್ಚು ಜನ ಸೇರಬಾರದು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.
Published by: HR Ramesh
First published: July 13, 2020, 4:27 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories