ಪುತ್ತೂರು ಮೆಡಿಕಲ್ ಕಾಲೇಜು ಜಾಗವನ್ನು ಇತರೆ ಉದ್ಧೇಶಗಳಿಗೆ ಬಳಸದಂತೆ ಜಿಲ್ಲಾಧಿಕಾರಿಗಳಿಗೆ ಮನವಿ
ಕೇಂದ್ರ ಸರಕಾರದ ಜಿಲ್ಲೆಗೆ ಎರಡು ಸೀ ಫುಡ್ ಪಾರ್ಕ್ ಯೋಜನೆಯನ್ನು ನೀಡಿದ್ದು, ಪ್ರತೀ ಯೋಜನೆಯ ಅನುಷ್ಠಾನಕ್ಕೆ 50 ಕೋಟಿ ಅನುದಾನದಂತೆ 100 ಕೋಟಿ ರೂಪಾಯಿಗಳನ್ನು ನೀಡಲಿದೆ. ಪುತ್ತೂರು ಹಾಗೂ ಮೂಡಬಿದಿರೆಯಲ್ಲಿ ಈ ಘಟಕಗಳನ್ನು ಪ್ರಾರಂಭಿಸುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ. ಆದರೆ ಪುತ್ತೂರಿನಲ್ಲಿ ಮಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ ಈ ಘಟಕವನ್ನು ನಿರ್ಮಿಸುವ ಪ್ರಸ್ತಾವನೆಗೆ ಇದೀಗ ವಿರೋಧಗಳು ಕೇಳಿ ಬರಲಾರಂಭಿಸಿದೆ.
news18-kannada Updated:November 27, 2020, 4:20 PM IST

ಮಾಜಿ ಶಾಸಕಿ ಶಕುಂತಲಾ ಶೆಟ್ಟಿ.
- News18 Kannada
- Last Updated: November 27, 2020, 4:20 PM IST
ದಕ್ಷಿಣ ಕನ್ನಡ; ಜಿಲ್ಲೆಯ ಪುತ್ತೂರಿನ ಶೇಡಿಯಾಪುವಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗವನ್ನು ಇತರೆ ಉದ್ಧೇಶಗಳಿಗೆ ಬಳಸಬಾರದೆಂದು ಮಡಿಕಲ್ ಕಾಲೇಜು ಪರವಾಗಿ ಹೋರಾಟ ಕೈಗೆತ್ತಿಕೊಂಡಿರುವ ಸಮಾನ ಮನಸ್ಕ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
ಪುತ್ತೂರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿದ ಹೋರಾಟಗಾರರು ಜಿಲ್ಲಾಧಿಕಾರಿ ಈ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಮನವಿ ಸಲ್ಲಿಸಿ ಪ್ರತಿಕ್ರಿಯೆ ನೀಡಿದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಬನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಶೇಡಿಯಾಪು ಎಂಬಲ್ಲಿ ತಾನು ಶಾಸಕಿಯಾಗಿದ್ದ ಸಂದರ್ಭದಲ್ಲಿ 40 ಎಕರೆ ಜಾಗವನ್ನು ಕಾಯ್ದಿರಿಸಲಾಗಿತ್ತು. ಆದರೆ ಇದೀಗ ಅದೇ ಜಾಗದಲ್ಲಿ ಕೇಂದ್ರ ಸರಕಾರದ ಸೀ ಫುಡ್ ಪಾರ್ಕ್ ಸ್ಥಾಪನೆಗೆ ಮುಂದಾಗಿರುವ ವಿಚಾರ ತಿಳಿದುಬಂದ ಹಿನ್ನಲೆಯಲ್ಲಿ ಈ ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದರು. ಇದನ್ನು ಓದಿ: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪತ್ತೆ; ಆರೋಪಿಗಳ ಪತ್ತೆಗೆ ಪೊಲೀಸರ ಶೋಧ!
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸರಕಾರ ಅಭಿವೃದ್ಧಿಯ ಉದ್ಧೇಶವನ್ನಿಟ್ಟು ಕೆಲವೊಂದು ಯೋಜನೆಗಳನ್ನು ಜಾರಿಗೆ ತರುತ್ತದೆ. ಅದರಲ್ಲಿ ಆರೋಗ್ಯ, ಉದ್ಯಮವೂ ಸೇರಿಕೊಂಡಿದೆ. ಶೇಡಿಯಾಪುವಿನಲ್ಲಿ ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ ಸೀ ಫುಡ್ ಪಾರ್ಕ್ ಮಾಡುವ ಯಾವುದೇ ಯೋಜನೆ ಸರಕಾರದ ಮುಂದಿಲ್ಲ. ಉದ್ಯಮಕ್ಕಾಗಿ ಪರ್ಯಾಯ ಜಾಗ ಹುಡುಕುವ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಹಲವು ಸಮಾನ ಮನಸ್ಕ ಸಂಘಟನೆಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೇಂದ್ರ ಸರಕಾರದ ಜಿಲ್ಲೆಗೆ ಎರಡು ಸೀ ಫುಡ್ ಪಾರ್ಕ್ ಯೋಜನೆಯನ್ನು ನೀಡಿದ್ದು, ಪ್ರತೀ ಯೋಜನೆಯ ಅನುಷ್ಠಾನಕ್ಕೆ 50 ಕೋಟಿ ಅನುದಾನದಂತೆ 100 ಕೋಟಿ ರೂಪಾಯಿಗಳನ್ನು ನೀಡಲಿದೆ. ಪುತ್ತೂರು ಹಾಗೂ ಮೂಡಬಿದಿರೆಯಲ್ಲಿ ಈ ಘಟಕಗಳನ್ನು ಪ್ರಾರಂಭಿಸುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ. ಆದರೆ ಪುತ್ತೂರಿನಲ್ಲಿ ಮಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ ಈ ಘಟಕವನ್ನು ನಿರ್ಮಿಸುವ ಪ್ರಸ್ತಾವನೆಗೆ ಇದೀಗ ವಿರೋಧಗಳು ಕೇಳಿ ಬರಲಾರಂಭಿಸಿದೆ.
ಪುತ್ತೂರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿದ ಹೋರಾಟಗಾರರು ಜಿಲ್ಲಾಧಿಕಾರಿ ಈ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಮನವಿ ಸಲ್ಲಿಸಿ ಪ್ರತಿಕ್ರಿಯೆ ನೀಡಿದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಬನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಶೇಡಿಯಾಪು ಎಂಬಲ್ಲಿ ತಾನು ಶಾಸಕಿಯಾಗಿದ್ದ ಸಂದರ್ಭದಲ್ಲಿ 40 ಎಕರೆ ಜಾಗವನ್ನು ಕಾಯ್ದಿರಿಸಲಾಗಿತ್ತು. ಆದರೆ ಇದೀಗ ಅದೇ ಜಾಗದಲ್ಲಿ ಕೇಂದ್ರ ಸರಕಾರದ ಸೀ ಫುಡ್ ಪಾರ್ಕ್ ಸ್ಥಾಪನೆಗೆ ಮುಂದಾಗಿರುವ ವಿಚಾರ ತಿಳಿದುಬಂದ ಹಿನ್ನಲೆಯಲ್ಲಿ ಈ ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದರು.