news18-kannada Updated:July 24, 2020, 12:59 PM IST
ಸಾಂದರ್ಭಿಕ ಚಿತ್ರ
ಕಲಬುರ್ಗಿ (ಜುಲೈ.24): ಕಲಬುರ್ಗಿ ಜಿಲ್ಲೆಯಲ್ಲಿ ಕೊರೋನಾ ವ್ಯಾಪಕಗೊಂಡಿದ್ದು, ರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಲೇ ಸಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೊರೋನಾ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಕಲಬುರ್ಗಿಯ ಧನ್ವಂತರಿ ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಘೋಷಣೆ ಮಾಡಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ಕಲಬುರ್ಗಿಯ ಇ.ಎಸ್.ಐ.ಸಿ. ಹಾಗೂ ಜಿಮ್ಸ್ ಆಸ್ಪತ್ರೆಗಳಲ್ಲದೆ ಕೆಲ ಕೊರೋನಾ ಕೇರ್ ಸೆಂಟರ್ ಗಳಲ್ಲಿಯೂ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇವೆಲ್ಲವೂ ಸೋಂಕಿತರಿಂದ ತುಂಬಿ ತುಳುಕುವಂತಾಗಿದೆ. ಇದರಿಂದಾಗಿ ಬೆಡ್ ಗಳ ಕೊರತೆ ಎದುರಾಗಿದ್ದು, ಜಿಲ್ಲಾಡಳಿತ ಗಮನ ಖಾಸಗಿ ಆಸ್ಪತ್ರೆಗಳತ್ತ ಹರಿದಿದೆ.
ಖಾಸಗಿ ಆಸ್ಪತ್ರೆಗಳನ್ನು ಜಿಲ್ಲಾಡಳಿತ ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಕಲಬುರ್ಗಿಯ ರಿಂಗ್ ರಸ್ತೆಯಲ್ಲಿರುವ ಧನ್ವಂತರಿ ಆಸ್ಪತ್ರೆಯ ಇಡೀ ಕಟ್ಟಡವನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿರಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಇನ್ನು ಮುಂದೆ ಕೋವಿಡ್ ಸೋಂಕಿತರಿಗೆ ಧನ್ವಂತರಿ ಆಸ್ಪತ್ರೆಯಲ್ಲಿಯೂ ಚಿಕಿತ್ಸೆ ಸಿಗಲಿದೆ. ಇದರ ಜೊತೆಗೆ ಬಸವೇಶ್ವರ ಆಸ್ಪತ್ರೆಯಲ್ಲಿಯೂ ಕೆಲ ಭಾಗ ಕೋವಿಡ್ ಆಸ್ಪತ್ರೆಯಾಗಿ ಬಳಕೆ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3370ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 229 ಜನರಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ 1426 ಸಕ್ರೀಯ ಕೇಸ್ ಗಳಿವೆ. ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುತ್ತಿದೆ.
ಇದನ್ನೂ ಓದಿ
: ಕಾಂಗ್ರೆಸ್ ಜೀವ ಉಳಿಸಿಕೊಳ್ಳಲು ರೈತರನ್ನು ಹಿಡಿದ ಸಿದ್ಧರಾಮಯ್ಯ ; ಸಚಿವ ಈಶ್ವರಪ್ಪ ಲೇವಡಿ
ಮಾಸಿಕ 12 ಸಾವಿರ ರೂಪಾಯಿ ಗೌರವ ಧನ ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ 15ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರ ಬೇಡಿಕೆಗೆ ಸ್ಪಂದಿಸ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟಿಸಿದರು.
ಕೆಲಸ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಹೋರಾಟ ಮುಂದುವರೆಸಿದ್ದಾರೆ. ಬೇಡಿಕೆ ಈಡೇರಿಸದ ಸರ್ಕಾರದ ಕ್ರಮ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಬೇಕು. ಸೇವಾ ಭದ್ರತೆ ಒದಗಸಿಬೇಕು. ಕೊರೋನಾದ ಕರ್ತವ್ಯದ ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಲು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Published by:
G Hareeshkumar
First published:
July 24, 2020, 12:57 PM IST