ಸಚಿವರು, ಅಧಿಕಾರಿಗಳ ಮುನ್ನೆಚ್ಚರಿಕೆಯಿಂದಾಗಿ ಸಮರ್ಥವಾಗಿ ಪ್ರವಾಹ ನಿರ್ವಹಣೆ ; ಸಿಎಂ ಯಡಿಯೂರಪ್ಪ

ಕೇಂದ್ರ ಸರಕಾರದ ನಾನಾ ಯೋಜನೆಗಳಡಿ ಬಿಡುಗಡೆಯಾಗುವ ಅನುದಾನ ಮತ್ತು ರಾಜ್ಯ ಸರಕಾರದ ಹಣಕಾಸಿನ ಇತಿಮಿತಿ ಆಧಾರದ ಮೇಲೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶಕ್ತಿಮೀರಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಿಎಂ ತಿಳಿಸಿದರು.

news18-kannada
Updated:August 25, 2020, 10:23 PM IST
ಸಚಿವರು, ಅಧಿಕಾರಿಗಳ ಮುನ್ನೆಚ್ಚರಿಕೆಯಿಂದಾಗಿ ಸಮರ್ಥವಾಗಿ ಪ್ರವಾಹ ನಿರ್ವಹಣೆ ; ಸಿಎಂ ಯಡಿಯೂರಪ್ಪ
ಡಿಸಿಎಂ ಗೋವಿಂದ ಕಾರಜೋಳ ಜೊತೆ ಚರ್ಚಿಸುತ್ತಿರುವ ಸಿಎಂ ಯಡಿಯೂರಪ್ಪ
  • Share this:
ವಿಜಯಪುರ(ಆಗಸ್ಟ್​.25): ಸಚಿವರು ಮತ್ತು ಅಧಿಕಾರಿಗಳ ಮುನ್ನೆಚ್ಚರಿಕೆಯಿಂದಾಗಿ ಈ ಬಾರಿ ಉತ್ತರ ಕರ್ನಾಟಕದಲ್ಲಿ ಪ್ರವಾಹವನ್ನು ಸಮರ್ಥವಾಗಿ ನಿಭಾಯಿಸಲಾಗಿದೆ. ಮಹಾರಾಷ್ಟ್ರದೊಂದಿಗೆ ಸಚಿವರು ಮತ್ತು ಅಧಿಕಾರಿಗಳು ನಿರಂತರ ಸಂಪರ್ಕ ಮತ್ತು ಸಮನ್ವಯತೆಯಿಂದ ಕೆಲಸ ನಿರ್ವಹಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಹಾನಿ ತಪ್ಪಿದೆ. ಇದು ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ನೆಮ್ಮದಿ ತಂದಿದೆ.

ಇಂದು ವಿಜಯಪುರ ಜಿಲ್ಲೆಯ ಆಲಮಟ್ಟಿ ಕೆಬಿಜೆಎನ್‌ಎಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಿಎಂ ಪ್ರಶಂಸಿಸಿದ್ದಾರೆ. ಮಹಾರಾಷ್ಚ್ರದೊಂದಿಗೆ ಸಮನ್ವಯ ಸಾಧಿಸಿ ರಾಜ್ಯದ ಉತ್ತರ ಕರ್ನಾಟಕದ ಅದರಲ್ಲೂ ಪ್ರಮುಖವಾಗಿ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹವನ್ನು ಸೂಕ್ತವಾಗಿ ನಿಯಂತ್ರಿಸಲಾಗಿದೆ.  ಈ ಹಿನ್ನೆಲೆಯಲ್ಲಿ ಸಿಎಂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಆಲಮಟ್ಟಿ ಕೆಬಿಜೆಎನ್‌ಎಲ್ ಕಚೇರಿ.ಯ ಸಭಾಂಗಣದಲ್ಲಿ ವಿಜಯಪುರ, ಬಾಗಲಕೋಟ ಹಾಗೂ ಗದಗ ಜಿಲ್ಲೆಗಳ ಸಚಿವರು, ಶಾಸಕರು, ಸಂಸದರು, ಜನಪ್ರತಿನಿಧಿಗಳು, ಜಲಸಂಪನ್ಮೂಲ ಇಲಾಖೆ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಈ ವರ್ಷದ ಮಳೆ ಮತ್ತು ಪ್ರವಾಹ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಸಿಎಂ ಬಿ. ಎಸ್. ಯಡಿಯೂರಪ್ಪ ಸಭೆ ನಡೆಸಿದರು.

ಆಲಮಟ್ಟಿ ಜಲಾಶಯ ಎತ್ತರಿಸುವ ಕುರಿತು ಈ ಭಾಗದ ಜನಪ್ರತಿನಿಧಿಗಳಿಂದ ಹೆಚ್ಚಿನ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯವನ್ನು 519.60 ಮೀಟರ್​ ದಿಂದ 524.256 ಮೀಟರ್​ ಎತ್ತರಿಸಲು ವಿಶೇಷ ಗಮನ ನೀಡಲಾಗುವುದು. ಈ ಭಾಗದಲ್ಲಿ 130 ಟಿಎಂಸಿ ಹೆಚ್ಚುವರಿ ನೀರನ್ನು ಸದ್ಭಳಕೆ ಮಾಡಿಕೊಳ್ಳಲು ಯೋಜನೆಗಳನ್ನು ರೂಪಿಸಲಾಗುವುದು. ನಿಗದಿತ ಕಾಲಮಿತಿಯೊಳಗೆ ಯೋಜನೆಗಳನ್ನು ಹಣಕಾಸಿನ ಇತಿಮಿತಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಭರವಸೆ ನೀಡಿದರು.

ಕೊರೋನಾ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿವೆ. ಕೇಂದ್ರ ಸರಕಾರದ ನಾನಾ ಯೋಜನೆಗಳಡಿ ಬಿಡುಗಡೆಯಾಗುವ ಅನುದಾನ ಮತ್ತು ರಾಜ್ಯ ಸರಕಾರದ ಹಣಕಾಸಿನ ಇತಿಮಿತಿ ಆಧಾರದ ಮೇಲೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶಕ್ತಿಮೀರಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಿಎಂ ತಿಳಿಸಿದರು.

ಇದನ್ನೂ ಓದಿ : ಸಚಿವರು, ಅಧಿಕಾರಿಗಳ ಮುನ್ನೆಚ್ಚರಿಕೆಯಿಂದಾಗಿ ಸಮರ್ಥವಾಗಿ ಪ್ರವಾಹ ನಿರ್ವಹಣೆ ; ಸಿಎಂ ಯಡಿಯೂರಪ್ಪ

ಇತ್ತೀಚೆಗೆ ಮಳೆ ಮತ್ತು ಪ್ರವಾಹದಿಂದ ತೊಂದರೆಗೆ ಒಳಗಾಗಿದ್ದ ಜನರಿಗೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಅಡಿಯಲ್ಲಿ ಹೆಚ್ಚಿನ ನೆರವನ್ನು ಕೇಂದ್ರ ಸರಕಾರ ಒದಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು. ಸಚಿವರು ಮತ್ತು ಶಾಸಕರು ಕೋರಿಕೆಯಂತೆ ಹಾನಿಗೊಳಗಾದ ಲೋಕೋಪಯೋಗಿ ರಸ್ತೆಗಳು, ಬೆಳೆ ಮತ್ತು ಮನೆ ಪರಿಹಾರಕ್ಕೆ ಗಮನ ನೀಡಲಾಗುವುದು. ಪದೇ ಪದೇ ಪ್ರವಾಹಕ್ಕೆ ಈಡಾಗುವ ಗ್ರಾಮಗಳ ಸ್ಥಳಾಂತರಕ್ಕೆ ಆಯಾ ಗ್ರಾಮಗಳ ಜನರ ಅಭಿಪ್ರಾಯಗಳ ಆಧಾರದ ಮೇಲೆ ಗಮನ ನೀಡಲಾಗುವುದು. ಈ ನಿಟ್ಟಿನಲ್ಲಿ ಸರಕಾರದ ಹಣ ದುರುಪಯೋಗ ಆಗದಂತೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ, ಇದಕ್ಕಾಗಿ ಹೆಚ್ಚಿನ ಹಣಕಾಸಿನ ನೆರವು ಒದಗಿಸಲಾಗುವುದೆಂದು ಎಂದರು.ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನ ಗೆಜೆಟ್ ನ್ನು ಕೂಡಲೇ ಹೊರಡಿಸಬೇಕು ಎಂದು ಜಲಸಂಪನ್ಮೂಲ ಸಚಿವರು ಫೆ. 26 ಮತ್ತು ಜು. 14 ರಂದು ಎರಡು ಬಾರಿ ದೆಹಲಿಗೆ ತೆರಳಿ ಕೇಂದ್ರ ಜಲಸಂಪನ್ಮೂಲ ಸಚಿವರೊಂದಿಗೆ ಸಭೆ ನಡೆಸಿ ಆಗ್ರಹಿಸಿದ್ದಾರೆ ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ತಿಳಿಸಿದರು.

ಈ ಸಭೆಯಲ್ಲಿ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಇತ್ತೀಚಿಗಿನ ಮಳೆ ಮತ್ತು ಪ್ರವಾಹದಿಂದ 850 ಕೋಟಿ ರೂ ಆಸ್ತಿಪಾಸ್ತಿ ಹಾನಿಯಾಗಿದೆ. ರಸ್ತೆ ಸುಧಾರಣೆಗೆ, ಬೆಳೆ ಪರಿಹಾರಕ್ಕೆ ವಿಶೇಷ ಅನುದಾನ ಒದಗಿಸಬೇಕು,  ಕಣಕುಂಬಿಯಿಂದ ಕೂಡಲ ಸಂಗಮ ವರೆಗೆ ಇರುವ ಮಲಪ್ರಭಾ ನದಿ ಒತ್ತುವರಿ ಮತ್ತು ಸ್ವಚ್ಛತೆಗೆ ಪ್ರಾದೇಶಿಕ ಆಯುಕ್ತರು, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ನೀರಾವರಿ ಇಲಾಖೆಗಳನ್ನೊಳಗೊಂಡ ಅಧಿಕಾರಿಗಳ ಸಮಿತಿ ರಚಿಸುವಂತೆ ಮನವಿ ಮಾಡಿದರು.
Published by: G Hareeshkumar
First published: August 25, 2020, 10:16 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading