HOME » NEWS » District » EFFORTS TO MISLEAD FARMERS WILL NOT SUCCEED SAYS MINISTER K SUDHAKAR NKCKB MAK

ರೈತರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಸಫಲವಾಗುವುದಿಲ್ಲ: ಸಚಿವ ಡಾ.ಕೆ. ಸುಧಾಕರ್

ರಾಜ್ಯದಲ್ಲಿ ಕೈಗೊಂಡ ತ್ವರಿತ ಕ್ರಮಗಳಿಂದ ಕೊರೋನಾ ನಿಯಂತ್ರಣಕ್ಕೆ ಬಂದಿದೆ. ಅತಿ ಶೀಘ್ರದಲ್ಲಿ ಕೊರೋನಾ ಲಸಿಕೆ ದೊರೆತಿದ್ದು, ಬೇರೆ ದೇಶಗಳಿಗೂ ರಫ್ತು ಮಾಡಲಾಗುತ್ತಿದೆ ಎಂದು ಸಚಿವ ಸುಧಾಕರ್​ ತಿಳಿಸಿದ್ದಾರೆ.

news18-kannada
Updated:January 27, 2021, 6:16 AM IST
ರೈತರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಸಫಲವಾಗುವುದಿಲ್ಲ: ಸಚಿವ ಡಾ.ಕೆ. ಸುಧಾಕರ್
ಸಚಿವ ಕೆ. ಸುಧಾಕರ್.
  • Share this:
ಚಿಕ್ಕಬಳ್ಳಾಪುರ: ದೇಶದ ಬೆನ್ನೆಲುಬು ರೈತ. ಅವರ ಜೀವನಗುಣಮಟ್ಟ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಕೃಷಿಯಲ್ಲಿ ಸುಧಾರಣೆ ತಂದಿದ್ದಾರೆ. ಆದರೆ ರಾಜಕೀಯ ಪ್ರೇರಿತವಾಗಿ ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದು, ಇದು ಸಫಲ ಆಗುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿರುವ ಅವರು, " ಪ್ರಧಾನಿ ನರೇಂದ್ರ ಮೋದಿ ಕೆಲ ಕಾನೂನುಗಳಲ್ಲಿ ಬದಲಾವಣೆ ತರುವ ಮೂಲಕ ಅಭಿವೃದ್ಧಿ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ನಡಿ, ನೇರವಾಗಿ ಖಾತೆಗೆ ರೈತರ ಬ್ಯಾಂಕ್ ಖಾತೆಗೆ ಹಣ ಜಮೆ ಆಗುತ್ತದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಈ ಯೋಜನೆಯಡಿ ಹಣ ನೀಡುತ್ತಿದ್ದಾರೆ. ಆದರೆ ದುರದೃಷ್ಟವೆಂಬಂತೆ ಕೆಲ ಸಂಘಟನೆ, ಮಧ್ಯವರ್ತಿ, ರಾಜಕೀಯ ಪ್ರೇರಿತವಾಗಿ ಪಕ್ಷಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿವೆ" ಎಂದು ಆರೋಪಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕೊರೋನಾ ನಿಯಂತ್ರಣದ ಬಗ್ಗೆಯೂ ಮಾತನಾಡಿರುವ ಅವರು, "ರಾಜ್ಯದಲ್ಲಿ ಕೈಗೊಂಡ ತ್ವರಿತ ಕ್ರಮಗಳಿಂದ ಕೊರೋನಾ ನಿಯಂತ್ರಣಕ್ಕೆ ಬಂದಿದೆ. ಅತಿ ಶೀಘ್ರದಲ್ಲಿ ಕೊರೋನಾ ಲಸಿಕೆ ದೊರೆತಿದ್ದು, ಬೇರೆ ದೇಶಗಳಿಗೂ ರಫ್ತು ಮಾಡಲಾಗುತ್ತಿದೆ. ಬ್ರೆಜಿಲ್ ನ ಅಧ್ಯಕ್ಷರು ಲಸಿಕೆ ನೀಡಿರುವುದಕ್ಕೆ ಭಾರತಕ್ಕೆ ಧನ್ಯವಾದ ಹೇಳಿದ್ದಾರೆ. ಈ ರೀತಿ ಬೇರೆ ದೇಶಗಳೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳುವ ಕಾರ್ಯವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಜಗತ್ತಿನ ಮುಂದೆ ತಲೆ ಎತ್ತಿ ನಡೆಯುವಂತೆ ಭಾರತ ಬೆಳೆದಿದೆ

ಭಾರತದಲ್ಲಿ ಅತಿ ಹೆಚ್ಚು ಯುವಜನರಿದ್ದಾರೆ. ದೇಶದಲ್ಲಿ ಉತ್ತಮ ಮಾನವ ಸಂಪನ್ಮೂಲವಿದ್ದು, ಇದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಮೂಲಭೂತ ಹಕ್ಕುಗಳಂತೆ, ಮೂಲಭೂತ ಕರ್ತವ್ಯಗಳಿವೆ. ಇವೆರಡೂ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ನಾಗರಿಕರಾಗಿ ದೇಶವನ್ನು ಉನ್ನತಿಗೆ ಕೊಂಡೊಯ್ಯಲು ಕರ್ತವ್ಯ ಪಾಲಿಸಬೇಕು" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕಾರವಾರ: ಡೋಂಗ್ರಿ ಗ್ರಾಮದ ಜನರ ಗೋಳು ಕೇಳೋರ್ಯಾರು? ಈ ಊರಿಗೆ ಸೇತುವೆಯೂ ಇಲ್ಲ, ತೆಪ್ಪವೂ ಇಲ್ಲ!

"ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ಜಾರಿಯಾದ ದಿನವಿದು. ಕನ್ನಡಿಗ ಬೆನಗಲ್ ನರಸಿಂಗರಾಯರು ಆ ಸಮಿತಿಯಲ್ಲಿದ್ದರು. ಅಂಬೇಡ್ಕರ್ ನೀಡಿದ ಸಂವಿಧಾನ ಸಮಬಾಳು, ಸಮಪಾಲು ಎಂಬ ಚಿಂತನೆಯಿಂದ ಕೂಡಿದೆ. ಇಡೀ ವಿಶ್ವದಲ್ಲೇ ಅತ್ಯಂತ ದೊಡ್ಡದಾದ ಪ್ರಜಾಪ್ರಭುತ್ವ ದೇಶಕ್ಕೆ ಪೂರಕವಾದ ಸಂವಿಧಾನ ಇದು" ಎಂದು ಪ್ರಶಂಶಿಸಿದರು.
Youtube Video

"ರೈತರು, ಯೋಧರನ್ನು ಸ್ಮರಿಸಲು ಜೈ ಜವಾನ್ ಜೈ ಕಿಸಾನ್ ಎಂದು ಲಾಲ್ ಬಹಾದ್ದೂರ್ ಶಾಸ್ತ್ರಿ ಹೇಳಿದ್ದರು. ವಿಜ್ಞಾನಿಗಳನ್ನು ಸ್ಮರಿಸಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಜೈ ವಿಜ್ಞಾನ್ ಎಂದು ಹೇಳಿದ್ದರು. ಅದೇ ರೀತಿ ಕವಿ ಕುವೆಂಪು ವಿಶ್ವಮಾನವ ಸಂದೇಶ ಸಾರಲು ಜೈ ಇನ್ಸಾನ್ ಎಂಬ ಸಂದೇಶ ಸಾರಬೇಕಿದೆ" ಎಂದು ಸಚಿವ ಸುಧಾಕರ್​ ಕಿವಿಮಾತು ಹೇಳಿದ್ದಾರೆ.
Published by: MAshok Kumar
First published: January 27, 2021, 6:16 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories