Ramesh Jarkiholi| ರಮೇಶ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ; ಮುಂಬೈನಲ್ಲಿ ಹಿರಿಯ ನಾಯಕರ ಜತೆಗೆ ಮಹತ್ವ ಚರ್ಚೆ!

ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಇಡೀ ರಾಜ್ಯದಲ್ಲಿ ಸದ್ದು ಮಾಡಿತ್ತು. ಲೈಂಗಿಕ ದೌರ್ಜನ್ಯದ ಆರೋಪ ಹಿನ್ನೆಲೆಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಪ್ರಕರಣ ಹಲವು ಟ್ವಿಸ್ಟ್ ಪಡೆದುಕೊಂಡಿತ್ತು.

ಮಾಜಿ ಸಚಿವ ರಮೇಶ್​ ಜಾರಕಿಹೊಳಿ.

ಮಾಜಿ ಸಚಿವ ರಮೇಶ್​ ಜಾರಕಿಹೊಳಿ.

  • Share this:
ಬೆಳಗಾವಿ (ಜೂನ್. 20)- ಮಾಜಿ ಸಚಿವ ರಮೇಶ ಜಾರಕಿಹೊಳಿ ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಹೊಸ ಸಂಚಲನ ಸೃಷ್ಠಿಸಿದ್ದಾರೆ. ಈ ಹಿಂದೆ 15 ಶಾಸಕರನ್ನು ಒಟ್ಟುಗುಡಿಸಿ ಸಮ್ಮಿಶ್ರ ಸರ್ಕಾರ ಪತನಗೊಳಿಸಿ, ಬಿಜೆಪಿ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇದೀಗ ಮತ್ತೊಮ್ಮೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಇದಕ್ಕೂ ಮೊದಲು ಮಹಾರಾಷ್ಟ್ರ ರಾಜ್ಯದ ನಾಯಕರ ಭೇಟಿಗೆ ತೆರಳಿದ್ದಾರೆ. ಈ ಮೂಲಕ ತಮ್ಮ ಪಕ್ಷದ ನಾಯಕರ ವಿರುದ್ಧವೆ ಜಾರಕಿಹೊಳಿ ಇದೀಗ ತಿರುಗಿ ಬಿದ್ದಾರೆ. ಅಷ್ಟೇ ಅಲ್ಲ ಮಂತ್ರಿ ಸ್ಥಾನ ಪಡೆದುಕೊಳ್ಳಲು ಶತಾಯಗತಾಯ ಪ್ರಯತ್ನ ಆರಂಭಿಸಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿವೆ.

ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಇಡೀ ರಾಜ್ಯದಲ್ಲಿ ಸದ್ದು ಮಾಡಿತ್ತು. ಲೈಂಗಿಕ ದೌರ್ಜನ್ಯದ ಆರೋಪ ಹಿನ್ನೆಲೆಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಪ್ರಕರಣ ಹಲವು ಟ್ವಿಸ್ಟ್ ಪಡೆದುಕೊಂಡಿತ್ತು. ಎಸ್ ಐ ಟಿ  ವಿಚಾರಣೆ ಎದುರಿಸಿ ರಮೇಶ ಜಾರಕಿಹೊಳಿ ಗೋಕಾಕ್ ನಲ್ಲಿ ಉಳಿದುಕೊಂಡಿದ್ದರು. ಸ್ಥಳೀಯವಾಗಿ ಕೋವಿಡ್ ನಿರ್ವಹಣೆ, ಪ್ರವಾಹ ಎದುರಿಸುವ ಬಗ್ಗೆ ಅಧಿಕಾರಿಗಳ ಜತೆಗೆ ನಿರಂತರವಾಗಿ ಸಭೆಗಳನ್ನು ನಡೆಸಿದ್ದರು.

ರಾಜ್ಯದಲ್ಲಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಯಾಗಿ ಸಚಿವರು ಹಾಗೂ ಶಾಸಕರ ಅಭಿಪ್ರಾಯ ಸಂಗ್ರಹದ ವೇಳೆಯಲ್ಲಿಯೂ ಜಾರಕಿಹೊಳಿ ಸಹೋದರರು ಯಾರ, ಯಾರ ವಿರುದ್ಧವು ತಮ್ಮ ಅಭಿಪ್ರಾಯ ಹೇಳಿರಲಿಲ್ಲ. ಆದರೇ ಇದೀಗ ರಮೇಶ ಜಾರಕಿಹೊಳಿ ಇದೇ ತಿಂಗಳ 23ರಂದು  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ತಮ್ಮ ಆಪ್ತರ ಬಳಿ ತಮಗಾಗಿರೋ ನೋವಿನ ಬಗ್ಗೆ ಮಾತನಾಡಿದ್ದರು. ಬಿಜೆಪಿ ಪಕ್ಷ ಹಾಗೂ ಸರ್ಕಾರ ನಡೆಸಿಕೊಂಡಿರೋ ರೀತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Indian Economi| ಆರ್ಥಿಕತೆಯನ್ನು ಕಾಡುತ್ತಿದೆ ಕೊರೋನಾ, ಬಡವರ ತವರಾಯಿತೇ ಭಾರತ? ಇಲ್ಲಿದೆ ಜಿಡಿಪಿ ಕುಸಿತದ ವಾಸ್ತವ ಚಿತ್ರಣ!

ರಾಜೀನಾಮೆ ನೀಡುವ ಮೊದಲು ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಇಬ್ಬರು ಮುಂಬೈಗೆ ಹಾರಿದ್ದಾರೆ. ಮುಂಬೈನಲ್ಲಿ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಭೇಟಿ ಮಾಡೋ ಸಾಧ್ಯತೆ ಇದೆ. ಈ ಮೂಲಕ ಹೈಕಮಾಂಡ್ ಮೇಲೆ ಸಚಿವ ಸ್ಥಾನ ನೀಡುವ ಒತ್ತಡ ಹೇರುವ ತಂತ್ರವನ್ನು ರೂಪಿಸಿದ್ದಾರೆ.

ಎಸ್ ಐ ಟಿ ಕ್ಲಿನ್ ಚಿಟ್ ನೀಡುವ ನಿರೀಕ್ಷೆಯಲ್ಲಿ ರಮೇಶ ಜಾರಕಿಹೊಳಿ ಇದ್ದರು. ಆದರೇ ಇದು ಸಾಧ್ಯವಾಗಿಲ್ಲ, ಹೀಗಾಗಿ ಹತರಾಶರಾಗಿರೋ ಜಾರಕಿಹೊಳಿ ಹೊಸ ದಾಳವನ್ನು ಉರುಳಿಸುವ ಯತ್ನಕ್ಕೆ ಹೈ ಹಾಕಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಯಾವ ರೀತಿಯಲ್ಲಿ ಇತ್ಯರ್ಥ ಪಡಿಸಲು ಯತ್ನಿಸುತ್ತಾರೆ ಎಂಬುದು ಕಾದು ನೋಡಬೇಕು.

ಇದನ್ನೂ ಓದಿ: Explained| ಪ್ರಧಾನಿ ಮೋದಿ ಅವಧಿಯಲ್ಲಾದ ಐದು ಮಹಾ ಪ್ರಮಾದಗಳು; ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದ ಬಿಜೆಪಿ!

ತಮ್ಮನ್ನು ಮಂತ್ರಿ ಮಾಡಿದ್ರೆ ಪಕ್ಷ ಹಾಗೂ ಸರ್ಕಾರ ಮುಜುಗರ ಆಗೋದಾದ್ರೆ ಬೇಡವೇ ಬೇಡ ನನ್ನ ಮಗನನ್ನು ಮಂತ್ರಿ ಮಾಡಿ ಎಂದು ಬಿಜೆಪಿ ನಾಯಕರು ಮುಂದೆ ರಮೇಶ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಗೋಕಾಕ್ ನಲ್ಲಿ ಮಗ ಅಮರನಾಥ್ ಜಾರಕಿಹೊಳಿಯನ್ನು ಗೆಲ್ಲಿಸುವ ಜವಾಬ್ದಾರಿ ನನ್ನು ಎಂದು ಹೇಳಿದ್ದಾರೆ. ಆದರೇ ಇದಕ್ಕೆ ಬಿಜೆಪಿ ಹೈಕಮಾಂಡ್ ಯಾವ ರೀತಿಯಲ್ಲಿ ಸ್ಪಂಧನೆ ನೀಡಲಿದೆ ಎಂಬುದು ತಿಳಿದಿಲ್ಲ. ಮುಂಬೈನಿಂದ ಜೂನ್ 23ರಂದು ಬೆಂಗಳೂರಿಗೆ ಬರೋ ರಮೇಶ ಜಾರಕಿಹೊಳಿ ಮುಂದಿನ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published: