ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಒತ್ತಡವೇ ಕಾರಣ : ಸಿದ್ದರಾಮಯ್ಯ

ಬಿಜೆಪಿಯವರು ಪ್ರಚಾರಕ್ಕಿಂತಲೂ, ದುಡ್ಡು ಕೊಟ್ಟು ಚುನಾವಣೆ ಮಾಡಿದ್ದಾರೆ. ಆದರೆ ನಾವು ಜನರ ಬಳಿಗೆ ಹೋಗಿದ್ದೇವೆ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ

ಸಿದ್ದರಾಮಯ್ಯ

ಸಿದ್ದರಾಮಯ್ಯ

  • Share this:
ಶಿವಮೊಗ್ಗ(ನವೆಂಬರ್​. 08): ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನದ ಹಿಂದೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಒತ್ತಡವಿದೆ. ಪ್ರಲ್ಹಾದ್ ಜೋಶಿ ವಿರುದ್ಧ ಚುನಾವಣೆಗೆ ನಿಂತಿದ್ದಕ್ಕೆ ಈ ರೀತಿ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಸರ್ಕಾರ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ  ಹಿಂದೆ ಪೊಲೀಸರು ಚಾರ್ಜ್ ಶೀಟ್ ಹಾಕಿದ್ದ ವೇಳೆ ವಿನಯ್ ಕುಲಕರ್ಣಿ ಹೆಸರಿರಲಿಲ್ಲ. ಸಿಬಿಐನವರು ತನಿಖೆ ನಡೆಸಿದಾಗ ಇವರ ಹೆಸರು ಕೇಳಿ ಬಂದಿದೆ. ಇದೊಂದು ಬೆದರಿಕೆ ತಂತ್ರವಾಗಿದ್ದು, ನಾವು ಹೆದರಲ್ಲ ಎಂದು ತಿಳಿಸಿದರು. ಶಿರಾ ಮತ್ತು ಆರ್.ಆರ್. ನಗರ ಉಪಚುನಾವಣೆಯಲ್ಲಿ ಎರಡೂ ಕಡೆ  ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ. ಸಮೀಕ್ಷೆಯಲ್ಲಿ ಬಿಜೆಪಿ ಗೆಲ್ಲುತ್ತೇ ಅಂತಾ ಹೇಳಿದ್ದಾರೆ. ಅವರು ಯಾವ ಆಧಾರದ ಮೇಲೆ ಹೇಳಿದ್ದಾರೋ ಗೊತ್ತಿಲ್ಲ. ನಾನು ಎರಡೂ ಕ್ಷೇತ್ರಗಳಲ್ಲಿಯೂ ಪ್ರಚಾರ ನಡೆಸಿದ್ದೇನೆ ಎಂದರು.

ಜನರ ಒಲವು ಕಾಂಗ್ರೆಸ್ ಪರ ಇರುವುದು ನನಗೆ ಕಂಡು ಬಂದಿದೆ. ಬಿಜೆಪಿಯವರು ಪ್ರಚಾರಕ್ಕಿಂತಲೂ, ದುಡ್ಡು ಕೊಟ್ಟು ಚುನಾವಣೆ ಮಾಡಿದ್ದಾರೆ. ಆದರೆ ನಾವು ಜನರ ಬಳಿಗೆ ಹೋಗಿದ್ದೇವೆ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಬಿಹಾರ ಚುನಾವಣೆ ಊಹಿಸಿದಂತೆಯೇ ಆಗಲಿದೆ. ಈ ಬಾರಿ ಯುವಕರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಇದ್ದಾರೆ. ಬಿಹಾರದ ಜನರು ಬದಲಾವಣೆ ಬಯಸಿದ್ದಾರೆ. ಯುವಕರು ಕೇಂದ್ರ ಸರ್ಕಾರದ ವಿರುದ್ಧ ಭ್ರಮನಿರಸನಗೊಂಡಿದ್ದಾರೆ. ವಲಸಿಗರಿಗೆ ಅನುಕೂಲ ಮಾಡಿಕೊಡಲು ನರೇಂದ್ರ ಮೋದಿಯವರ ಸರ್ಕಾರ ಸೋತಿದೆ ಎಂದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ಟ್ವೀಟ್ ವಿಚಾರದ ಬಗ್ಗೆ ಮಾತನಾಡಿದ ಅವರು, ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕಳೆದ 6 ತಿಂಗಳಿನಿಂದ ಕೇಳಿ ಬರುತ್ತಿದೆ. ರಾಜ್ಯ ಬಿಜೆಪಿಯಲ್ಲಿ 2-3 ಗುಂಪುಗಳಿವೆ ಎಂದು ಹೇಳಿದರು.

ಇದನ್ನೂ ಓದಿ : ಗೋಹತ್ಯೆ ನಿಷೇಧ ಕುರಿತು ಇನ್ನಷ್ಟು ಚರ್ಚೆ ಅಗತ್ಯ : ಸಚಿವ ಡಾ.ಕೆ.ಸುಧಾಕರ್

ಯಡಿಯೂರಪ್ಪನನ್ನು ಬದಲಾಯಿಸಬೇಕೆಂದು ಕಳೆದ 6 ತಿಂಗಳಿನಿಂದ ಪ್ರಯತ್ನ ನಡೆಯುತ್ತಲೇ ಇದೆ. ಸಿಎಂ ಅವಧಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಸಿಎಂ ಯಡಿಯೂರಪ್ಪ ಅಪರೇಷನ್ ಕಮಲದ ಜನಕ. ಆಪರೇಷನ್ ಕಮಲ ಹುಟ್ಟು ಹಾಕಿದ್ದೆ ಯಡಿಯೂರಪ್ಪ ಎಂದು ಕಿಡಿಕಾರಿದರು.

2008 ರಿಂದ ಇವರೇ ಚಾಲ್ತಿಗೆ ತಂದಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿಯವರು ಅಪರೇಷನ್ ಕಮಲ ಮಾಡುತ್ತಿದೆ. ಅಪರೇಷನ್ ಕಮಲದ ಮೂಲಕ ಯಡಿಯೂರಪ್ಪ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Published by:G Hareeshkumar
First published: