• Home
  • »
  • News
  • »
  • district
  • »
  • ಜು. 21ರಂದು ರೈತ ಸಂಘ, ಹಸಿರು ಸೇನೆ ಸದಸ್ಯರಿಂದ ಹಾವೇರಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ

ಜು. 21ರಂದು ರೈತ ಸಂಘ, ಹಸಿರು ಸೇನೆ ಸದಸ್ಯರಿಂದ ಹಾವೇರಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ

ಹಸಿರು ಸೇನೆ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ

ಹಸಿರು ಸೇನೆ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ

ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡಲು ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕು. ಇಲ್ಲದೇ ಹೋದರೆ ಉಗ್ರ ಹೋರಾಟ ಆರಂಭಿಸುವುದು ಅನಿವಾರ್ಯ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

  • Share this:

ಹಾವೇರಿ: ಬಂಡವಾಳಷಾಹಿಗಳಿಗೆ ಅನುಕೂಲ ಮಾಡಿಕೊಡಲು ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಈ ಕಾಯ್ದೆಯಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕು. ಇದಲ್ಲದೇ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಎರಡು ಕಾಯ್ದೆಗಳನ್ನು ರೈತರ ಪರವಾಗಿ ರೂಪಿಸಬೇಕು. ಇಲ್ಲದೇ ಹೋದರೆ ರಾಜ್ಯಾದ್ಯಂತ ರೈತರು ಸರ್ಕಾರದ ವಿರುದ್ಧ ದಂಗೆ ಏಳುತ್ತಾರೆ. ಸರ್ಕಾರದ ವಿರುದ್ಧ ಹೋರಾಟದ ಮೊದಲ ಭಾಗವಾಗಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ವತಿಯಿಂದ ಜುಲೈ 21ರಂದು ಹಾವೇರಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಹೋರಾಟಗಾರ ಮಲ್ಲಿಕಾರ್ಜುನ ಬಳ್ಳಾರಿ ಎಚ್ಚರಿಕೆ ನೀಡಿದ್ದಾರೆ.


ಅಂದು ಮುರುಘಾಮಠದಿಂದ ಪ್ರಾರಂಭವಾಗಿ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ. ನಂತರ ಜಿಲ್ಲಾಡಳಿತ ಭವನಕ್ಕೆ ತೆರಳಿ ಮುತ್ತಿಗೆಹಾಕಲಾಗುವುದು ಹಸಿರು ಸೇನೆಯ ಹಾವೇರಿ ಘಟಕದ ಜಿಲ್ಲಾ ಕಾರ್ಯದರ್ಶಿಯಾದ ಅವರು ತಿಳಿಸಿದ್ದಾರೆ.


ಗ್ರಾಮೀಣ ಭಾಗದ ದುಡಿಯುವ ಜನಪರ ಕಾಳಜಿಯಿಂದಾಗಿ 1961ರ ಕರ್ನಾಟಕ ರಾಜ್ಯ ಭೂ ಸುಧಾರಣೆ ಕಾಯ್ದೆಯನ್ನು ಈ ಹಿಂದೆ ಜಾರಿಗೆ ತರಲಾಗಿತ್ತು. ಅದರೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಈ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ಅನ್ಯಾಯ ಮಾಡಲು ಹೊರಟಿದೆ. ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡಲು ಈ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಈ ಕಾಯ್ದೆಯಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕು. ಇಲ್ಲದೇ ಹೋದರೆ ಉಗ್ರ ಹೋರಾಟ ಆರಂಭಿಸುವುದು ಅನಿವಾರ್ಯ ಎಂದು ಮಲ್ಲಿಕಾರ್ಜುನ ಬಳ್ಳಾರಿ ಹೇಳಿದ್ದಾರೆ.


ಇದನ್ನೂ ಓದಿ: ಉಡುಗಣಿ, ತಾಳಗುಂದ, ಹೊಸೂರು ಏತ ನೀರಾವರಿ ಯೋಜನೆ ಶೀಘ್ರ ಆಗಲಿ: ಶಿಕಾರಿಪುರ ರೈತರ ನಿರೀಕ್ಷೆ


ಈ ಕಾಯ್ದೆ ಜಾರಿಗೆ ತಂದು ಕೃಷಿಕರಲ್ಲದವರಿಗೆ ಕೃಷಿ ಭೂಮಿ ಖರೀದಿಸಲು ಅವಕಾಶ ಕಲ್ಪಿಸಿರುವುದು ರೈತರಿಗೆ ಮಾಡಿದ ಮೋಸವಾಗಿದೆ. ಗ್ರಾಮೀಣ ವ್ಯವಸ್ಥೆಯನ್ನು, ರೈತರ ಆರ್ಥಿಕ ವ್ಯವಸ್ಥೆಯನ್ನು ಈ ಕಾಯ್ದೆ ಬುಡಮೇಲು ಮಾಡಲಿದೆ. ಮುಂದಿನ ದಿನಗಳಲ್ಲಿ ರೈತರು ಜೀವನ ಮಾಡೋದು ಕಷ್ಟವಾಗಲಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿದ್ದಾರೆ.
ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ ತರಲು ಹೊರಟಿರುವುದು ಸಹ ರೈತ ವಿರೋಧಿಯಾಗಿದೆ. ಹಾಲಿ ಇದ್ದ ಕಾಯ್ದೆ ರೈತರು ಹಗೂ ಕೃಷಿ ಉತ್ಪದಕರನ್ನು ರಕ್ಷಿಸುವ ಎಲ್ಲ ಲಕ್ಷಣಗಳನ್ನು ಹೊಂದಿತ್ತು. ಆದರೆ ಬಿಜೆಪಿ ಸರ್ಕಾರ ಈ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದೆ. ಲಾಕ್‌ಡೌನ್ ಅವಧಿಯನ್ನು ದುರುಪಯೋಗ ಪಡೆಸಿಕೊಳ್ಳುತ್ತಿರುವ ರಾಜ್ಯ ಸರ್ಕಾರವು ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿದೆ. ಸರ್ಕಾರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಉಗ್ರ ಹೋರಾಟ ನಡೆಸಲಿದೆ ಎಂದು ಮಲ್ಲಿಕಾರ್ಜುನ ಬಳ್ಳಾರಿ ಎಚ್ಚರಿಕೆ ನೀಡಿದ್ದಾರೆ.

Published by:Vijayasarthy SN
First published: