HOME » NEWS » District » FARMERS ASSOCIATION OF KODAGU OPPOSE THE STATE GOVERNMENT LAND REFORM AMENDMENT ACT MAK

ಕೊಡಗಿನಲ್ಲಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಪ್ರತಿ ಸುಟ್ಟು ಆಕ್ರೋಶ ಹೊರಹಾಕಿದ ರೈತ ಸಂಘ

ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲಿನಲ್ಲಿ ಪ್ರತಿಭಟಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಗೋಣಿಕೊಪ್ಪಲಿನ ಮುಖ್ಯ ರಸ್ತೆಯಲ್ಲಿ ರಸ್ತೆ ತಡೆ ನಡೆಸಿದ ರೈತ ಸಂಘದ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ, ಕಾಯ್ದೆ ತಿದ್ದುಪಡಿ ಪ್ರತಿಗೆ ಬೆಂಕಿ ಹಚ್ಚಿ ಸುಟ್ಟರು.

news18-kannada
Updated:June 16, 2020, 7:21 AM IST
ಕೊಡಗಿನಲ್ಲಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಪ್ರತಿ ಸುಟ್ಟು ಆಕ್ರೋಶ ಹೊರಹಾಕಿದ ರೈತ ಸಂಘ
ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ಪ್ರತಿಯನ್ನು ಸುಡುತ್ತಿರುವ ಕೊಡಗು ರೈತರು.
  • Share this:
ಕೊಡಗು; ರಾಜ್ಯ ಸರ್ಕಾರ ತಿದ್ದುಪಡಿ ಮಾಡಿರುವ ಕರ್ನಾಟಕ ಭೂ ಸುಧಾರಣಾ ಕಾಯ್ದೆಯನ್ನು ವಿರೋಧಿಸಿ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಮುಖಂಡರು ಸುಧಾರಣಾ ಕಾಯ್ದೆ ತಿದ್ದುಪಡಿ ಪ್ರತಿಯನ್ನು ಸುಟ್ಟು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲಿನಲ್ಲಿ ಪ್ರತಿಭಟಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಗೋಣಿಕೊಪ್ಪಲಿನ ಮುಖ್ಯ ರಸ್ತೆಯಲ್ಲಿ ರಸ್ತೆ ತಡೆ ನಡೆಸಿದ ರೈತ ಸಂಘದ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ, ಕಾಯ್ದೆ ತಿದ್ದುಪಡಿ ಪ್ರತಿಗೆ ಬೆಂಕಿ ಹಚ್ಚಿ ಸುಟ್ಟರು.

ಈ ಸಂದರ್ಭ ಮಾತನಾಡಿದ ರೈತ ಸಂಘದ ಕೊಡಗು ಜಿಲ್ಲಾಧ್ಯಕ್ಷ ಮನು ಸೋಮಯ್ಯ, "ಈ ಕಾಯ್ದೆಯನ್ನು ತಿದ್ದುಪಡಿ ಮಾಡುವುದರಿಂದ ರಾಜ್ಯದ ರೈತರ ಭೂಮಿಗೆ ಸದ್ಯದ ಸ್ಥಿತಿಯಲ್ಲಿ ಒಳ್ಳೆಯ ಬೆಲೆ ಬರುವುದಾದರೂ, ಅದು ಬಂಡವಾಳಿಗರು ಮತ್ತು ಯಾರೋ ಕೆಲವು ವ್ಯಕ್ತಿಗಳ ಕೈ ಸೇರಲಿದೆ.

ಇದನ್ನೂ ಒದಿ : ಭಾರತದ ಪ್ರತಿಭಟನೆ; ಬಂಧಿತ ಇಬ್ಬರು ಹೈ-ಕಮಿಷನರ್‌ ಅಧಿಕಾರಿಗಳನ್ನು ಬಿಡುಗಡೆ ಮಾಡಿದ ಪಾಕಿಸ್ತಾನ

ಹೀಗಾಗಿ ಮುಂದಿನ ದಿನಗಳಲ್ಲಿ ರೈತರು ಎಲ್ಲವನ್ನೂ ಕಳೆದುಕೊಂಡು ಬೀದಿಪಾಲಾಗುವ ಸ್ಥಿತಿಗೆ ತಲುಪಲಿದ್ದಾರೆ. ಇದರಿಂದ ಸಣ್ಣ ಮತ್ತು ಅತೀ ಸಣ್ಣ ರೈತರು ನಿರ್ಗತಿಕರಾದರೂ ಆಶ್ಚರ್ಯವಿಲ್ಲ. ಹೀಗಾಗಿ ಸರ್ಕಾರ ಈ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು" ಎಂದು ಒತ್ತಾಯಿಸಿದ್ದಾರೆ.
First published: June 16, 2020, 7:21 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories