ಏಳನೇ ವರ್ಷಕ್ಕೆ ಕಾಲಿಟ್ಟ ಮಹದಾಯಿ ಹೋರಾಟ; ಕಪ್ಪು ಪಟ್ಟಿ ಧರಿಸಿ ಕರಾಳ ದಿನ ಆಚರಣೆ

ಮಹದಾಯಿ ಹೋರಾಟ ವಿಚಾರದಲ್ಲಿ ಕರ್ನಾಟಕಕ್ಕೆ 13.5 ಟಿಎಂ ನೀರನ್ನ ಕರ್ನಾಟಕಕ್ಕೆ ಬಿಡುಗಡೆ ಮಾಡಬೇಕು ಅಂತ ಸುಪ್ರೀಂ ಸೂಚಿಸಿತ್ತು. ಸುದೀರ್ಘ ಹೋರಾಟದ ಪ್ರತಿಫಲವಾಗಿ ನಮಗೆ ಜಯ ಸಿಕ್ಕಿತ್ತು. ಆದರೆ ಸರಕಾರಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ಯೋಜನೆಯ ಕಾಮಗಾರಿ ನೆನೆಗುದಿಗೆ ಬಿದ್ದಿದೆ.

ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟಿಸಿದ ರೈತರು

ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟಿಸಿದ ರೈತರು

  • Share this:
ಗದಗ: ಮಲಪ್ರಭಾ ನದಿಗೆ ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ಗದಗ ಜಿಲ್ಲೆಯ ನರಗುಂದ ತಾಲೂಕಿನ ರೈತರು ನಡೆಸುತ್ತಿರುವ ಹೋರಾಟ ಏಳನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಗದಗ ಜಿಲ್ಲೆ‌ ನರಗುಂದ ಪಟ್ಣಣದಲ್ಲಿ ರೈತರು ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು.

ರೈತ ಸೇನಾ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದಲ್ಲಿ  ಪ್ರತಿಭಟನೆ ಪಾದಯಾತ್ರೆ ನಡೆಸಿ ಬಾಬಾ ಸಾಹೇಬ್ ಬಾವೇ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಕೈಗೆ ಕಪ್ಪು ಪಟ್ಟಿ ಧರಿಸಿ‌ ಹಾಗೂ ಕಪ್ಪು‌ಬಾವುಟ ಪ್ರದರ್ಶಿಸಿ ಶುಕ್ರವಾರವನ್ನು ಕರಾಳ ದಿನವನ್ನಾಗಿ ಆಚರಣೆ ಮಾಡಿದರು.

ಜೊತೆಗೆ ಕಳಸಾ ಬಂಡೂರಿ ಹೋರಾಟದಲ್ಲಿ ನಿಧನರಾದ ರೈತರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಿ ಗೌರವ ಸಲ್ಲಿಸಲಾಯಿತು. ನಂತರ ಬಾಬಾ ಸಾಹೇಬ್ ಬಾವೆ ಪುತ್ಥಳಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮಹದಾಯಿ ನಾಲಾ ಯೋಜನೆ ವಿಳಂಬ ಆಗುತ್ತಿದೆ ಅಂತ ಆರೋಪಿಸಿದ ರೈತರು ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರೋದಕ್ಕೆ ಸಜ್ಜಾಗಿದ್ದಾರೆ. ಮಹದಾಯಿ ಹೋರಾಟ ಪ್ರಾರಂಭಿಸಿ ಆರು ವರ್ಷಗಳು ಕಳೆದರೂ ಸಹ ಸರಕಾರ ಇನ್ನೂ ನಮ್ಮ ಬೇಡಿಕೆಯನ್ನ ಪೂರ್ಣಗೊಳಿಸಿಲ್ಲ ಅಂತ ರೈತರು ಅಸಮಾಧಾನ ಹೊರಹಾಕಿದರು.

ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಂತರ ಐದು ಪ್ರಮುಖ ನಿರ್ಣಯಗಳನ್ನ ರೈತರು ಕೈಗೊಂಡರು. ಅದರಲ್ಲಿ ಪ್ರಮುಖವಾಗಿ ಮಹದಾಯಿ ನಾಲಾ ಯೋಜನೆ ಕಾಮಗಾರಿ ಆರಂಭಿಸಲು ರಾಜ್ಯ ಸರಕಾರ ಸಾಕಾಗುವಷ್ಟು ಅನುದಾನ ಮೀಸಲಿಟ್ಟಿಲ್ಲ. ಹೀಗಾಗಿ ಕಾಮಾಗಾರಿ ಬೇಗ ಆರಂಭ ಮಾಡಿ ಪೂರ್ಣಗೊಳಿಸಬೇಕು ಅಂತ ಒತ್ತಾಯಿಸಿದರು.

ಮಹದಾಯಿ ವಿಷಯವವಾಗಿ ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗುವುದರ ಜೊತೆಗೆ ರೈತರ ಬೆಳೆಗೆ ಸೂಕ್ತ ಬೆಂಬಲ ಬೆಲೆಗೆ ಆಗ್ರಹಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿದೆ ಎಂದು ತಿಳಿಸಿದರು. ಕಳೆದ ವಾರದ  ಬೆಂಗಳೂರಿನ ಹೈಕೋರ್ಟ್ ನಲ್ಲಿ ಈ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು,

ಇನ್ನು ಮೂರನೆಯದಾಗಿ ಮಹದಾಯಿ ಹೋರಾಟದಲ್ಲಿ ಮೃತಪಟ್ಟ 11 ಜನ ರೈತರಿಗೆ ಪರಿಹಾರ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸುವುದು. ಜೊತೆಗೆ ಮಲಪ್ರಭಾ ನದಿಯ ಅಚ್ಚುಕಟ್ಟು ಪ್ರದೇಶಗಳ ಕಾಲುವೆಗಳ ಕಳಪೆ ಕಾಮಗಾರಿ ಕುರಿತು ಹೋರಾಟ ಮತ್ತು ಸುಮಾರು 1200 ಕೋಟಿ. ರೂ ವೆಚ್ಚದ ಬಲದಂಡೆ ಕಾಲುವೆ ಕಾಮಗಾರಿ ಮಾಹಿತಿ ನೀಡಬೇಕು ಮತ್ತು ಮಹದಾಯಿ ಹೋರಾಟಗಾರರಿಗೆ ರಾಜ್ಯಪಾಲರನ್ನ ಭೇಟಿ ಮಾಡಲು ಅವಕಾಶ ಮಾಡಿಕೊಡಬೇಕು ಅಂತ ಒತ್ತಾಯಿಸಿದರು.

ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ: ಮೇಕೆದಾಟು ವಿಚಾರವಾಗಿ ಪಿಎಂ ಜೊತೆ ಚರ್ಚೆ

ಇನ್ನು ಮಹದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ 13.5 ಟಿಎಂ ನೀರನ್ನ ಕರ್ನಾಟಕಕ್ಕೆ ಬಿಡುಗಡೆ ಮಾಡಬೇಕು ಅಂತ ಸುಪ್ರೀಂ ಕೋರ್ಟ್​ ಸೂಚಿಸಿತ್ತು. ಸುದೀರ್ಘ ಹೋರಾಟದ ಪ್ರತಿಫಲವಾಗಿ ನಮಗೆ ಜಯ ಸಿಕ್ಕಿತ್ತು. ಆದರೆ ಸರಕಾರಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ಯೋಜನೆಯ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು ಯಾವಾಗ ಯೋಜನೆ ಪೂರ್ಣಗೊಳ್ಳುತ್ತೆ. ನಮಗೆ ನೀರು ಯಾವಾಗ ಸಿಗುತ್ತದೆ ಅಂತ ರೈತರು ಎದುರು ನೋಡ್ತಿದ್ದಾರೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by:HR Ramesh
First published: