ದೊಡ್ಡಬಳ್ಳಾಪುರದಲ್ಲಿ ಮದ್ಯ ಮಾರಾಟ; ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ, ಎಂಎಸ್‌ಐಎಲ್ ತೆರವಿಗೆ ಮನವಿ

ಮ್ಮ ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ಬೇಕಾಗಿಲ್ಲ. ಇದರಿಂದ ಗ್ರಾಮದಲ್ಲಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂದು ದೊಡ್ಡಬಳ್ಳಾಪುರದ ದೊಡ್ಡ ತುಮಕೂರು ಗ್ರಾಮದ ಜನ ಇಂದು ಪ್ರತಿಭಟನೆ ನಡೆಸಿದ್ದಾರೆ,

ಮದ್ಯ ಮಾರಾಟದ ವಿರುದ್ಧ ಪ್ರತಿಭಟಿಸುತ್ತಿರುವ ಗ್ರಾಮಸ್ಥರು.

ಮದ್ಯ ಮಾರಾಟದ ವಿರುದ್ಧ ಪ್ರತಿಭಟಿಸುತ್ತಿರುವ ಗ್ರಾಮಸ್ಥರು.

  • Share this:
ದೊಡ್ಡಬಳ್ಳಾಪುರ (ಜೂನ್‌ 08): ತಾಲ್ಲೂಕಿನ ಮಧುರೆ ಹೋಬಳಿಯ ದೊಡ್ಡತುಮಕೂರು ಗ್ರಾಮದಲ್ಲಿ ಸರ್ಕಾರದ ವತಿಯಿಂದ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಯನ್ನು ತೆರೆಯಲು ನಿರ್ಧರಿಸಿದ್ದು ಇದನ್ನು ವಿರೋಧಿಸಿ ಇಂದು ಪ್ರತಿಭಟನೆ ನಡೆಸಲಾಯಿತು.

ದೊಡ್ಡತುಮಕೂರು ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಮುಖಂಡರಾದ ಟಿ.ಜಿ. ಮಂಜುನಾಥ ಮಾತನಾಡಿ, "ನಮ್ಮ ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ಬೇಕಾಗಿಲ್ಲ. ಇದರಿಂದ ಗ್ರಾಮದಲ್ಲಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಗ್ರಾಮದಲ್ಲಿ ಮದ್ಯ ಮಾರಾಟ ಮಳಿಗೆ ತೆಗೆಯುವುದು ಉತ್ತಮ ಬೆಳವಣಿಗೆಯಲ್ಲ. ಇದರಿಂದ ಗ್ರಾಮದಲ್ಲಿ ಕುಡುಕರ ಹಾವಳಿ ಹೆಚ್ಚಾಗಿ  ಶಾಂತಿ ನೆಲೆಸಲು ಸಾಧ್ಯವಿರುವುದಿಲ್ಲ" ಎಂದರು 

ಈ ಪ್ರತಿಭಟನೆಯಲ್ಲಿ ಗ್ರಾಮದ ಹಿರಿಯ ಮುಖಂಡರು, ರೈತ ಪರ ಹೋರಾಟಗಾರರು, ಮಹಿಳಾ ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು, ದಲಿತ ಹಾಗೂ ಹಿಂದುಳಿದ ವರ್ಗಗಳ ಸಂಘದ ಪದಾಧಿಕಾರಿಗಳು, ಗ್ರಾಮದ ಎಲ್ಲಾ ಯುವಕರು ಮತ್ತು ಸುತ್ತಮುತ್ತಲಿನ ಎಲ್ಲಾ ಗ್ರಾಮಸ್ಥರು  ಪಾಲ್ಗೊಂಡು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುರುಡಯ್ಯರವರಿಗೆ ಮನವಿಯನ್ನು ಸಲ್ಲಿಸಿದರು.

ಇದನ್ನೂ ಓದಿ : ಚಿರುಗೆ ದುಶ್ಚಟ ಇತ್ತು ಅಂದೋರು ಯಾರು?; ಗರಂ ಆದ ಸರ್ಜಾ ಕುಟುಂಬದ ಆಪ್ತ
First published: