• Home
  • »
  • News
  • »
  • district
  • »
  • ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ : ಅಂತಿಮ ಕಣದಲ್ಲಿ 11 ಅಭ್ಯರ್ಥಿಗಳು

ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ : ಅಂತಿಮ ಕಣದಲ್ಲಿ 11 ಅಭ್ಯರ್ಥಿಗಳು

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ತಿಳಿಯಲು ಕ್ಷೇತ್ರ ವ್ಯಾಪ್ತಿಯ ಆಯಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಸಹಾಯವಾಣಿ ಸಂಖ್ಯೆ 1077 ಚಾಲನೆಯಲ್ಲಿದೆ

  • Share this:

ಹುಬ್ಬಳ್ಳಿ(ಅಕ್ಟೋಬರ್​. 12): ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಅಕ್ಟೋಬರ್ 12ರಂದು ಯಾವುದೇ ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದಿಲ್ಲ. ಹೀಗಾಗಿ ಅಂತಿಮ ಕಣದಲ್ಲಿ 11 ಅಭ್ಯರ್ಥಿಗಳು ಉಳಿದಿದ್ದಾರೆ. ಕಾಂಗ್ರೆಸ್ ಪಕ್ಷದ ಆರ್.ಎಂ. ಕುಬೇರಪ್ಪ, ಜಾತ್ಯಾತೀತ ಜನತಾದಳದ ಕಲ್ಲೂರ ಶಿವಶಂಕರ ಚನ್ನಪ್ಪ, ಭಾರತೀಯ ಜನತಾ ಪಕ್ಷದ ಸಂಕನೂರ. ಎಸ್.ವಿ. ಮತ್ತು ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾಗಿ ಕರ್ನಾಟಕ ರಾಷ್ಟ್ರ ಸಮಿತಿಯ ಶಿವರಾಜ ಕಾಂಬಳೆ, ಶಿವಸೇನಾದ ಸೋಮಶೇಖರ್. ವ್ಹಿ. ಉಮರಾಣಿ ಇತರ ಅಭ್ಯರ್ಥಿಗಳಾಗಿ ಪಕ್ಷೇತರರಾದ ದಶರಥ ಚಂದ್ರಹಾಸ ರಂಗರಡ್ಡಿ,ಬಿ.ಡಿ. ಹಿರೇಗೌಡರ, ಬಸವರಾಜ ಗುರಿಕಾರ, ಬಸವರಾಜ ಎಸ್. ತೇರದಾಳ, ನಾಗರಕಟ್ಟಿ ಮಹ್ಮದ್ ಶಫಿವುದ್ದೀನ್ ಎಸ್, ತಳವಾರ ಶಿವಕುಮಾರ್ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.‌


ಈ ಕುರಿತು ಚುನಾವಣಾಧಿಕಾರಿ ಆಗಿರುವ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಅಂತಿಮ ಪಟ್ಟಿ ಪ್ರಕಟಿಸಿದ್ದಾರೆ. ಚುನಾವಣಾ ಅಧಿಕಾರಿಗಳೂ ಆಗಿರುವ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್,  ಸಹಾಯಕ ಚುನಾವಣಾ ಅಧಿಕಾರಿಯಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ, ಮತ್ತಿತರ ಅಧಿಕಾರಿಗಳು ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಪಡಿಸಿದ್ದರು.


ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾಗಿರುವ ಕರ್ನಾಟಕ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಉಪಸ್ಥಿತರಿದ್ದರು.


ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನ ಅಕ್ಟೋಬರ್ 28 ರಂದು ಜರುಗಲಿದ್ದು, ಈ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ತಿಳಿಯಲು ಕ್ಷೇತ್ರ ವ್ಯಾಪ್ತಿಯ ಆಯಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಸಹಾಯವಾಣಿ ಸಂಖ್ಯೆ 1077 ಚಾಲನೆಯಲ್ಲಿದೆ.


ಇದನ್ನೂ ಓದಿ : McGann Hospital : ಕೇಂದ್ರ ಸರ್ಕಾರದ ಕಾಯಕಲ್ಪ ಪ್ರಶಸ್ತಿ ಪ್ರಕಟ ; ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದ್ವಿತೀಯ ಸ್ಥಾನ


ಪದವೀಧರ ಕ್ಷೇತ್ರದ  ಮತದಾರರ ಪಟ್ಟಿಗೆ ನೋಂದಣಿ ಅರ್ಜಿ ಸಲ್ಲಿಸಿದವರು ತಮ್ಮ ಹೆಸರು, ವಿಳಾಸ, ಮತ್ತಿತರ ಮಾಹಿತಿ ನೀಡಿ ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದರ ಬಗ್ಗೆ ಮಾಹಿತಿ ಪಡೆಯಬಹುದು. ಜೊತೆಗೆ ಮತದಾನ ಮಾಡಲು ನಿಗದಿತ ಮತಗಟ್ಟೆಯ ಬಗ್ಗೆ ತಿಳಿದುಕೊಳ್ಳಬಹುದು.


ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್ ಸೈಟ್ ceokarnataka.kar.nic.in  ಅಥವಾ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ವೆಬ್ ಸೈಟ್ dharwad.nic.in ಮೂಲಕವೂ ಮಾಹಿತಿ ಪಡೆಯಬಹುದು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

Published by:G Hareeshkumar
First published: