ರಾಮನಗರ(ಚನ್ನಪಟ್ಟಣ): ಅಂತ್ಯಕ್ರಿಯೆ ವೇಳೆ ಕೋವಿಡ್-19 ಕಾನೂನು ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ 7 ಜನರ ವಿರುದ್ಧ ದೂರು ದಾಖಲಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಅರ್ ದಾಖಲಾಗಿದ್ದು, ಕಾರ್ಯಕ್ರಮ ಆಯೋಜಕರ ವಿರುದ್ದ ದೂರು ನೀಡಲಾಗಿದೆ. ಐಪಿಸಿ ಸೆಕ್ಷನ್ 188, 269, 270 ಅಡಿಯಲ್ಲಿ ದೂರನ್ನ ಪೊಲೀಸರು ದಾಖಲಿಸಿದ್ದಾರೆ.
ಕಳೆದ ಭಾನುವಾರ ರಾಜ್ಯಾದ್ಯಂತ ಲಾಕ್ ಡೌನ್ ಇತ್ತು. ಆದರೆ ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ಮಸೀದಿಯ ಗುರುಗಳೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಈ ವೇಳೆ ಮೃತ ಗುರುವಿನ ಅಂತ್ಯಕ್ರಿಯೆಯಲ್ಲಿ 500 ರಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು. ಭಾನುವಾರದಂದು ರಾತ್ರಿಯೇ ಮೃತರ ಅಂತ್ಯಕ್ರಿಯೆ ಮಾಡಲಾಯಿತು. ನಗರದ ಸಾತನೂರು ಸರ್ಕಲ್ ಬಳಿಯ ಮುಸ್ಲಿಮ್ ಧರ್ಮೀಯರ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಈ ವೇಳೆ ಅಧಿಕ ಮಂದಿ ಗುಂಪುಗುಂಪಾಗಿ ಭಾಗಿಯಾಗಿ ಸಾಮಾಜಿಕ ಅಂತರ ಪಾಲಿಸದೆ, ಮಾಸ್ಕ್ ಧರಿಸದೆ ಹಳೇ ಕೋರ್ಟ್ ರಸ್ತೆಯಿಂದ ಸಾತನೂರು ರಸ್ತೆಯವರೆಗೆ ಮೃತರ ಮೆರವಣಿಗೆ ಮಾಡಿದ್ದರು.
ಇದನ್ನೂ ಓದಿ: ಹಾಸನದಲ್ಲಿ ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸುತ್ತಿರುವ ಪಿಎಫ್ಐ ಕಾರ್ಯಕರ್ತರು
ಕೊರೋನಾ ಸಂಡೇ ಲಾಕ್ ಡೌನ್ ಇದ್ದರೂ ರಾತ್ರಿ ವೇಳೆ ಗುಂಪು ಸೇರಿಸಿ ಮೆರವಣಿಗೆ ಮಾಡಲಾಗಿದೆ. ಜೊತೆಗೆ ಕೊರೋನಾ ವಿಚಾರವಾಗಿ ಯಾವುದೇ ಮುಂಜಾಗ್ರತೆ ವಹಿಸದಿರುವುದು ಕಂಡುಬಂದಿದೆ.
ಇದನ್ನೂ ಓದಿ: ಭಾರತದ ರಫೇಲ್, ಪಾಕಿಸ್ತಾನದ ಜೆಎಫ್-17 ಮತ್ತು ಚೀನಾದ ಜೆ-20 ಯುದ್ಧವಿಮಾನಗಳಲ್ಲಿ ಯಾವುದು ಬೆಸ್ಟ್?
ಈಗ ಪ್ರಕರಣ ದಾಖಲು ಮಾಡಿಕೊಂಡು ತನಿಖೆಗೆ ಮುಂದಾಗಿರುವ ಪೊಲೀಸರು ಆ ಮೆರವಣಿಗೆಯಲ್ಲಿ ಭಾಗಿಯಾದವರ ಮಾಹಿತಿ ಕಲೆಹಾಕ್ತಿದ್ದಾರೆ. ಇನ್ನು, ಈ ರೀತಿಯ ಘಟನೆಗಳು ಮುಂದೆ ನಡೆಯದಂತೆ ಪೋಲೀಸರು ಹೆಚ್ಚಿನ ಕ್ರಮವಹಿಸಬೇಕು. ಜೊತೆಗೆ ಸಾರ್ವಜನಿಕರು ಕೂಡ ಕೋವಿಡ್ ರೂಲ್ಸ್ ಬ್ರೇಕ್ ಮಾಡಬಾರದೆಂದು ಜಿಲ್ಲೆಯ ಜನರ ಪರವಾಗಿ ಹಿರಿಯ ಕನ್ನಡಪರ ಹೋರಾಟಗಾರ ರಮೇಶ್ ಗೌಡ ಒತ್ತಾಯಿಸಿದ್ದಾರೆ. ಜೊತೆಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಸಹ ಎಚ್ಚರದಿಂದಿರಬೇಕು ಎಂದೂ ಜಿಲ್ಲೆಯ ಜನರು ಆಗ್ರಹಿಸಿದ್ದಾರೆ.
ವರದಿ: ಎ.ಟಿ. ವೆಂಕಟೇಶ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ