HOME » NEWS » District » FORMER MINISTER SANTOSH LAD SAYS OUR TIME IS WORST NOW AND HOPE FOR BEST TIME HK

ನಾವೀಗ ಕೆಟ್ಟ ಕಾಲದಲ್ಲಿ ಇದ್ದೇವೆ - ನಮಗೂ ಒಳ್ಳೆಯ ಕಾಲ ಬರುತ್ತದೆ: ಮಾಜಿ ಸಚಿವ ಸಂತೋಷ ಲಾಡ್

ಬಿಜೆಪಿ ಪಕ್ಷದ ಕೆಲವರು ಅಧಿಕಾರ ಶಾಶ್ವತವಾಗಿ ಇರುವುದಾಗಿ ತಿಳಿದಿದ್ದಾರೆ. ಆದರೆ,  ಅಧಿಕಾರ ಎಂದಿಗೂ ಶಾಶ್ವತವಲ್ಲ. ಈ ಸತ್ಯ ಬಿಜೆಪಿಯ ಕೆಲವರಿಗೆ ಇನ್ನೂ ತಿಳಿದಂತಿಲ್ಲ

news18-kannada
Updated:November 8, 2020, 9:39 PM IST
ನಾವೀಗ ಕೆಟ್ಟ ಕಾಲದಲ್ಲಿ ಇದ್ದೇವೆ - ನಮಗೂ ಒಳ್ಳೆಯ ಕಾಲ ಬರುತ್ತದೆ: ಮಾಜಿ ಸಚಿವ ಸಂತೋಷ ಲಾಡ್
ಮಾಜಿ ಸಚಿವ ಸಂತೋಷ್ ಲಾಡ್
  • Share this:
ಧಾರವಾಡ(ನವೆಂಬರ್​. 08): ಸಿಬಿಐನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವು ಮೇಲ್ನೋಟಕ್ಕೆ ರಾಜಕೀಯ ಪ್ರೇರಿತದಂತೆ ಕಾಣುತ್ತದೆ ಎಂದು ಮಾಜಿ ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡದ ವಿನಯ್ ಕುಲಕರ್ಣಿ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬಿದ ಬಳಿಕ ಮಾತನಾಡಿದ ಅವರು, ರಾಜಕೀಯ ಷಡ್ಯಂತ್ರವಂತೂ ಇದ್ದೇ ಇದೆ. ಕಾನೂನು ಎಲ್ಲರಿಗಿಂತ ದೊಡ್ಡದು. ಹೀಗಾಗಿ ಕಾನೂನಿನ ಮೂಲಕವೇ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ. ಈ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಅವರೊಂದಿಗೆ ಇದೆ ಎಂದರು. ಇದು ಕರ್ನಾಟಕ ಮಾತ್ರವಲ್ಲ. ಇಡೀ ದೇಶದಲ್ಲಿ ಇಂತಹ ಪ್ರಕರಣಗಳು ಆಗುತ್ತಿವೆ. ಯಾರನ್ನೂ ನಾನು ವೈಯಕ್ತಿಕವಾಗಿ ನಿಂದಿಸುವುದಿಲ್ಲ. ಎಲ್ಲ ಇಲಾಖೆಗಳನ್ನು ರಾಜಕೀಯ ಬಳಕೆ ಮಾಡುತ್ತಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಇಡೀ ದೇಶದಲ್ಲಿ ಸಿಬಿಐ, ಇಡಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಹುಲ್ ಗಾಂಧಿ ಅವರನ್ನೂ ಸಹ ನೂಕು ನುಗ್ಗಾಟ ಮಾಡಿದ್ದರು. ಅತ್ಯಾಚಾರ ಸಂತ್ರಸ್ಥೆ ಕುಟುಂಬ ಭೇಟಿಯಾಗದಂತೆ ಮಾಡಿದ್ದಾರೆ. ಎಲ್ಲವನ್ನೂ ಜನ ನೋಡುತ್ತಿದ್ದಾರೆ ಎಂದರು.

ಬಿಜೆಪಿ ಪಕ್ಷದ ಕೆಲವರು ಅಧಿಕಾರ ಶಾಶ್ವತವಾಗಿ ಇರುವುದಾಗಿ ತಿಳಿದಿದ್ದಾರೆ. ಆದರೆ,  ಅಧಿಕಾರ ಎಂದಿಗೂ ಶಾಶ್ವತವಲ್ಲ. ಈ ಸತ್ಯ ಬಿಜೆಪಿಯ ಕೆಲವರಿಗೆ ಇನ್ನೂ ತಿಳಿದಂತಿಲ್ಲ. ಈಗಂತೂ ಏನು ಮಾಡುವುದು ನಾವೀಗ ಕೆಟ್ಟ ಕಾಲದಲ್ಲಿ ಇದ್ದೇವೆ. ಈ ಸಮಯ ಮುಂದೆ ಕಳೆದು ಹೋಗಿ ನಮಗೂ ಒಳ್ಳೆಯ ಕಾಲ ಬರುತ್ತದೆ ಎಂದು ಸಂತೋಷ ಲಾಡ್ ಹೇಳಿದರು.

ಇದನ್ನೂ ಓದಿ : ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಒತ್ತಡವೇ ಕಾರಣ : ಸಿದ್ದರಾಮಯ್ಯ

ಕಲಘಟಗಿ ಮತಕ್ಷೇತ್ರದಿಂದ ಸೋತು ಮಾಜಿ ಶಾಸಕರಾದರೂ ಸಹ ಸಂತೋಷ್ ಲಾಡ್ ಅವರು ಕುಲಕರ್ಣಿ ಅವರ ಮನೆಗೆ ಆಗಮಿಸಿದ್ದ (ಕೆಎ-25 ಎಂಬಿ-2252) ಇನೋವಾ ಕಾರಿಗೆ ಮಾತ್ರ ಕಲಘಟಗಿ ಮತಕ್ಷೇತ್ರದ ಶಾಸಕರು ಎಂಬ ಪಾಸು ಇರುವುದು ಕಂಡು ಬಂತು. ಶಾಸಕರ ಪಾಸು ದುರ್ಬಳಕೆ ಮಾಡಿರುವ ಬಗ್ಗೆ ಮಾಧ್ಯಮದವರು ಚಿತ್ರೀಕರಣಕ್ಕೆ ಮುಂದಾರು.

ಚಿತ್ರೀಕರಣ ಮುಂದಾಗುತ್ತಿದ್ದಂತೆಯೇ ಕಾರಿನ ಚಾಲಕ ಆ ಪಾಸು ತೆಗೆದು ಹಾಕಿದರು. ಆ ಬಳಿಕ ಸಂತೋಷ ಲಾಡ್ ಈ ಬಗ್ಗೆ ಕ್ಷಮೆ ಕೇಳಿದರಿ, ಅಚಾನಕ್​​ ಆಗಿ ನಮ್ಮವರು ಕಾರಿನಲ್ಲಿ ಪಾಸು ಇಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿ ಅಲ್ಲಿಂದ ತೆರಳಿದರು.
Published by: G Hareeshkumar
First published: November 8, 2020, 9:31 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories