HOME » NEWS » District » FORMER MINISTER VINAY KULKARNI FOR 3 DAYS IN CBI CUSTODY HK

Vinay Kulkarni: ಮಾಜಿ ಸಚಿವ ವಿನಯ್ ಕುಲಕರ್ಣಿ ಮೂರು ದಿನ ಸಿಬಿಐ ಕಸ್ಟಡಿಗೆ

ದಿನಕ್ಕೆ ಹತ್ತು ನಿಮಿಷ ಸಿಬಿಐ ಅಧಿಕಾರಿಗಳ ಸಮ್ಮುಖದಲ್ಲಿ ಕುಟುಂಬಸ್ಥರ ಭೇಟಿಗೆ ಅವಕಾಶ ಹಾಗೂ ಅನಾರೋಗ್ಯ ಸಮಯದಲ್ಲಿ ಚಿಕಿತ್ಸೆಗೆ ಆಸ್ಪತ್ರೆಯಲ್ಲಿ ಅವಕಾಶ ಕಲ್ಪಿಸುವಂತೆ ಷರತ್ತು ವಿಧಿಸಿ ಸಿಬಿಐ ಕಸ್ಟಡಿಗೆ ನೀಡಲಾಗಿದೆ

news18-kannada
Updated:November 6, 2020, 7:03 PM IST
Vinay Kulkarni: ಮಾಜಿ ಸಚಿವ ವಿನಯ್ ಕುಲಕರ್ಣಿ ಮೂರು ದಿನ ಸಿಬಿಐ ಕಸ್ಟಡಿಗೆ
ಮಾಜಿ ಸಚಿವ ವಿನಯ್ ಕುಲಕರ್ಣಿ
  • Share this:
ಧಾರವಾಡ(ನವೆಂಬರ್​. 06): ಮಾಜಿ ಸಚಿವ ವಿನಯ್ ಕುಲಕರ್ಣಿ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ‌ ನೀಡಿ ಧಾರವಾಡ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತೀರ್ಪು‌ ನೀಡಿದೆ. ನವೆಂಬರ್​ 9 ರಂದು 11 ಗಂಟೆಗೆ ನ್ಯಾಯಾಲಕ್ಕೆ ಹಾಜರು ಪಡಿಸುವಂತೆ ಸೂಚನೆ ನೀಡಲಾಗಿದೆ‌. ಮಾಜಿ‌ ಸಚಿವ ವಿನಯ್ ಕುಲಕರ್ಣಿ ಕಸ್ಟಡಿ ಸಂಬಂಧಿತ ಅರ್ಜಿಯ ತೀರ್ಪು ನೀಡಲಾಗಿದೆ. ಕಸ್ಟಡಿಗೆ ಪಡೆಯಲು ಸಿಬಿಐ ಅರ್ಜಿ ಸಲ್ಲಿಸಿತ್ತು. ಸಿಬಿಐ ಅರ್ಜಿಗೆ ವಿನಯ್​ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಮೂರು ದಿನ ಸಿಬಿಐ ಕಸ್ಟಡಿಗೆ ವಿನಯ್ ಕುಲಕರ್ಣಿಯವರನ್ನ ನೀಡಲಾಗಿದೆ.  ಹೆಚ್ಚಿನ ವಿಚಾರಣೆಗಾಗಿ ಮಾಜಿ ಸಚಿವರನ್ನು ಕನಿಷ್ಟ ಮೂರು ದಿನಗಳ ಮಟ್ಟಿಗಾದರೂ ತನ್ನ ಕಸ್ಟಡಿಗೆ ನೀಡುವಂತೆ ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದು, ಇದನ್ನು ನ್ಯಾಯಾಲಯ ಪುರಸ್ಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಒಂದು ದಿನದ ನ್ಯಾಯಾಂಗ ಕಸ್ಟಡಿಗೆ ಗುರುವಾರ ಒಪ್ಪಿಸಲಾಗಿತ್ತು.

ಗುರುವಾರ ಸುಮಾರು ಒಂಬತ್ತು ತಾಸಿನ ವಿಚಾರಣೆ ಬಳಿಕ ಸಿಬಿಐ ಅಧಿಕಾರಿಗಳು ವಿನಯ್ ಅವರನ್ನು ಸ್ಥಳೀಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ವಶಕ್ಕೆ ಕೋರಿದ್ದರು. ಕೊಲೆ ಯತ್ನ ಮತ್ತು ಸಾಕ್ಷ್ಯ ನಾಶದ ಆರೋಪವನ್ನು ವಿನಯ ಕುಲಕರ್ಣಿ ಅವರ ಮೇಲೆ ಅಧಿಕಾರಿಗಳು ಹೊರಿಸಿದ್ದಾರೆ.

ದಿನಕ್ಕೆ ಹತ್ತು ನಿಮಿಷ ಸಿಬಿಐ ಅಧಿಕಾರಿಗಳ ಸಮ್ಮುಖದಲ್ಲಿ ಕುಟುಂಬಸ್ಥರ ಭೇಟಿಗೆ ಅವಕಾಶ ಹಾಗೂ ಅನಾರೋಗ್ಯ ಸಮಯದಲ್ಲಿ ಚಿಕಿತ್ಸೆಗೆ ಆಸ್ಪತ್ರೆಯಲ್ಲಿ ಅವಕಾಶ ಕಲ್ಪಿಸುವಂತೆ ಷರತ್ತು ವಿಧಿಸಿ ಸಿಬಿಐ ಕಸ್ಟಡಿಗೆ ನೀಡಿಲಾಗಿದೆ.

ಇದೀಗ ಮೂರು ದಿನಗಳವರೆಗೆ ಸಚಿವ ವಿನಯ್​​ ಕುಲಕರ್ಣಿ ಅವರನ್ನ ಸಿಬಿಐ ಕಸ್ಟಡಿಗೆ ನೀಡಿದ್ದು, ಮೂರು ದಿನದ ನಂತರ ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

ಏನಿದು ಪ್ರಕರಣ?

ಧಾರವಾಡ ಜಿ.ಪಂ. ಸದಸ್ಯ ಹಾಗೂ ಸ್ಥಳೀಯ ಬಿಜೆಪಿ ನಾಯಕರಾಗಿದ್ದ ಯೋಗೇಶ್ ಗೌಡ ಅವರನ್ನು 2016, ಜೂನ್ 15ರಂದು ಸಪ್ತಾಪುರದಲ್ಲಿ ಹತ್ಯೆ ಮಾಡಲಾಗಿತ್ತು. ಅವರ ಜಿಮ್​ನ ಹೊರಗೆ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಎಸಗಿ ಕೊಲೆ ಮಾಡಲಾಗಿತ್ತು. ಬೈಕ್​ನಲ್ಲಿ ಬಂದಿದ್ದ ಸುಪಾರಿ ಹಂತಕರು ಈ ಕೃತ್ಯ ಎಸಗಿದ್ದರು.

ಇದನ್ನೂ ಓದಿ : ಹತಾಶರಾಗಿ ಸಿದ್ದರಾಮಯ್ಯ ಏನೇನೋ ಮಾತನಾಡುತ್ತಿದ್ದಾರೆ: ಗೃಹ ಸಚಿವ ಬಸವರಾಜ್ ಬೊಮ್ಮಾಯಿಆ ಘಟನೆ ಬಳಿಕ ಪೊಲೀಸರು ಧಾರವಾಡದ ಆರು ಮಂದಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದ್ದರು. 2019, ಸೆಪ್ಟೆಂಬರ್​ನಲ್ಲಿ ಈ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಲಾಯಿತು. ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಸವರಾಜ ಉತ್ತಿಗೆ ಅವರು ಸಿಬಿಐ ತನಿಖೆಗೆ ತಡೆಯಾಜ್ಞೆ ತಂದಿದ್ದರು.

ಆದರೆ, ಸಿಬಿಐ ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ತೆರವು ಮಾಡಿಸಿಕೊಂಡಿತ್ತು. ಕೋವಿಡ್ ಸಂಕಷ್ಟದ ಮಧ್ಯೆಯೂ ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ಎಂಟು ಮಂದಿ ಆರೋಪಿಗಳನ್ನ ಈವರೆಗೆ ಬಂಧಿಸಿದೆ. ಯೋಗೇಶ್ ಗೌಡ ಅವರನ್ನು ರಾಜಕೀಯ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದು ಸಿಬಿಐ ಆರೋಪ.
Published by: G Hareeshkumar
First published: November 6, 2020, 6:36 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories