ಬೆಳಗಾವಿಯಲ್ಲಿ ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಬುಧವಾರ ರಾತ್ರಿ ಬೆಳಗಾವಿ ಜಿಲ್ಲೆ ರಾಯಬಾಗ ರೈಲ್ವೆ ನಿಲ್ದಾಣದಲ್ಲಿ ನಿಜಾಮುದೀನ್ ಎಕ್ಸ್​​ಪ್ರೆಸ್ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಚಿಕ್ಕೋಡಿ: ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಬೆಳಗಾವಿ ಜಿಲ್ಲೆ ರಾಯಭಾಗದಲ್ಲಿ ಸಂಭವಿಸಿದೆ. ವೃದ್ಧ ತಂದೆ ತಾಯಿ ಮತ್ತು ಇಬ್ಬರು ಗಂಡು ಮಕ್ಕಳು ಸಾವನ್ನಪ್ಪಿದ್ದಾರೆ. ನಿನ್ನೆ ಬುಧವಾರ ರಾತ್ರಿ ರಾಯಭಾಗ ರೈಲು ನಿಲ್ದಾಣದಲ್ಲಿ ನಿಜಾಮುದ್ದೀನ್ ಎಕ್ಸ್​ಪ್ರೆಸ್ ರೈಲಿಗೆ ತಲೆಕೊಟ್ಟು ಇವರು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಸಾವನ್ನಪ್ಪಿದವರನ್ನು ಬೀರಡಿ ಗ್ರಾಮದ ಸಾತಪ್ಪ ಸುತಾರ್ (60), ಪತ್ನಿ ಮಹಾದೇವಿ (50), ಅವರ ಮಕ್ಕಳಾದ ದತ್ತಾತ್ರೇಯ (28) ಮತ್ತು ಸಂತೋಷ (25) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ರಾಯಬಾಗ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಇದೇ ವೇಳೆ, ಕೂಲಿ ಕಾರ್ಮಿಕರಾಗಿ ಜೀವನ ನಡೆಸುತ್ತಿದ್ದ ಈ ಕುಟುಂಬ ಸದಸ್ಯರು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂದು ಸ್ಪಷ್ಟವಾಗಿ ಗೊತ್ತಾಗಿಲ್ಲ. ನ್ಯೂಸ್18 ಕನ್ನಡಕ್ಕೆ ಸಿಕ್ಕಿದ ಮಾಹಿತಿ ಪ್ರಕಾರ ಸಾಲದ ಬಾಧೆಯೇ ಇವರ ಈ ನಿರ್ಧಾರಕ್ಕೆ ಕಾರಣ ಎನ್ನಲಾಗುತ್ತಿದೆ. ಮನೆ ಕಟ್ಟುವ ಸಲುವಾಗಿ ಇವರು ಬಹಳಷ್ಟು ಸಾಲ ಮಾಡಿಕೊಂಡಿದ್ದರು. ಲಾಕ್ ಡೌನ್ ಆದ ಬಳಿಕ ಸಂಪಾದನೆ ತೀರಾ ಕಡಿಮೆಯಾಗಿ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಸಾಲಗಾರರ ಕಾಟ ಹೆಚ್ಚಾಗಿ ಇವರು ಒತ್ತಡಕ್ಕೆ ಸಿಲುಕಿದ್ದರು. ಇದೇ ಕಾರಣಕ್ಕೆ ಇವರು ಒಟ್ಟಿಗೆ ಸಾಯಲು ನಿರ್ಧರಿಸಿದರು ಎಂದು ಹೇಳಲಾಗುತ್ತಿದೆ.

ವರದಿ: ಲೋಹಿತ್ ಶಿರೋಳ
Published by:Vijayasarthy SN
First published: